Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಲಪ್ರಭಾ ಕಾರ್ಖಾನೆ ಪುನಶ್ಚೇತನಗೊಳಿಸುವುದೇ ಗುರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಮಲಪ್ರಭಾ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವುದೇ ನಮ್ಮ ಗುರಿ. ಕಾರ್ಖಾನೆಯ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಚುನಾವಣೆ ಎಂದರೆ ಜಿದ್ದಾಜಿದ್ದಿ ಇದ್ದೇ ಇರುತ್ತದೆ. ಸೋಲು ಗೆಲುವು ಸಾಮಾನ್ಯ. ಸೋತಾಗ ಕುಗ್ಗಬಾರದು. ಗೆದ್ದಾಗ ಹಿಗ್ಗಬಾರದು ಎಂದು ಹೇಳಿದರು.

ಕಿತ್ತೂರು ಶಾಸಕ ಬಾಬಾ ಸಾಹೇಬ್‌ ಪಾಟೀಲ್‌, ಖಾನಾಪುರ ಶಾಸಕ ವಿಠ್ಠಲ ಹಲಗೇಕರ ಹಾಗೂ ವಿಧಾನ ಪರಿಷತ್‌ ಸದಸ್ಯ ಚನ್ನರಾಜ್‌ ಹಟ್ಟಿಹೊಳಿ ನೇತೃತ್ವದ ತಂಡ ಮಲಪ್ರಭಾ ಸಕ್ಕರೆ ಕಾರ್ಖಾನೆ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿದ್ದು, ಕಾರ್ಖಾನೆಯ ಅಭಿವೃದ್ದಿಗೆ ನಮ್ಮ ತಂಡ ಹಗಲಿರುಳು ಶ್ರಮಿಸಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ತಿಳಿಸಿದರು.

ಮಲಪ್ರಭಾ ಸಕ್ಕರೆ ಕಾರ್ಖಾನೆ ಏಷ್ಯಾದಲ್ಲೇ ನಂಬರ್‌ ಒನ್‌ ಕಾರ್ಖಾನೆ ಆಗಿತ್ತು. ಹೊಸ ಆಡಳಿತ ಮಂಡಳಿ ಕಾರ್ಖಾನೆಯನ್ನು ಉತ್ತುಂಗಕ್ಕೆ ಕೊಂಡೊಯ್ಯಲಿದೆ. ಈ ಭಾಗದ ಜೀವನಾಡಿಯಾಗಿರುವ ಮಲಪ್ರಭಾ ಕಾರ್ಖಾನೆಯ ಅಭಿವೃದ್ದಿಯೇ ನಮ್ಮ ತಂಡದ ಗುರಿ ಎಂದರು.

ಜಿಲ್ಲೆಯ ಬಹುತೇಕ ಸಕ್ಕರೆ ಕಾರ್ಖಾನೆಗಳು ಸಾಲದಲ್ಲೇ ಇವೆ. 220 ಕೋಟಿ ಸಾಲವಿದ್ದು, ಈ ಸಾಲ ತೀರಿಸುವುದರ ಜೊತೆಗೆ ರೈತರ ಆಶೋತ್ತರಗಳನ್ನು ಈಡೇರಿಸಬೇಕಿದೆ. ಅಲ್ಲದೆ, ನೌಕರರ ಹಿತ ರಕ್ಷಣೆ ಕಾಯುವುದೇ ನಮ್ಮ ಗುರಿ. ಶೀಘ್ರವಾಗಿ ನೂತನ ಅಧ್ಯಕ್ಷರ ಆಯ್ಕೆ ನಡೆಯಲಿದೆ ಎಂದು ಹೇಳಿದರು.

ಚನ್ನರಾಜ್‌ ಹಟ್ಟಿಹೊಳಿ ಅವರು ಕಳೆದ 15 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುಂದಿನ ದಿನಗಳಲ್ಲೂ ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದರು.

 

ರೈತರ ಒಳಿತಿಗೆ ಆದ್ಯತೆ : ಚನ್ನರಾಜ್‌ ಹಟ್ಟಿಹೊಳಿ

ಅಭೂತಪೂರ್ವ ಗೆಲುವನ್ನು ರೈತರು, ಶೇರುದಾರರು ನಮಗೆ ನೀಡಿದ್ದಾರೆ. ಕಾರ್ಖಾನೆಯನ್ನು ಸರಿಯಾಗಿ ನಡೆಸಿಕೊಂಡು ಹೋಗುವ ಜವಾಬ್ದಾರಿ ನಮ್ಮದು ಎಂದು ಚನ್ನರಾಜ್‌ ಹಟ್ಟಿಹೊಳಿ ಹೇಳಿದರು.

ಸಣ್ಣ ಹಾಗೂ ದೊಡ್ಡ ಪ್ರಮಾಣದ ರೈತರು ಕಾರ್ಖಾನೆಯಲ್ಲಿದ್ದಾರೆ. ರೈತರಿಗೆ ಕೊಟ್ಟಿರುವ ಭರವಸೆಗಳನ್ನು ಈಡೇರಿಸಲು ಕ್ರಮವಹಿಸಲಿದ್ದೇವೆ ಎಂದರು.

ಕಾರ್ಖಾನೆಯಲ್ಲಿ ಆಡಳಿತ ನಡೆಸಿರುವ ಅನುಭವ ಹೊಂದಿದ್ದು, ಕಳೆದ 6-7 ವರ್ಷಗಳಿಂದ ಕಾರ್ಖಾನೆ ಆಡಳಿತ ನೋಡುತ್ತಿದ್ದೇನೆ. ಪ್ರಣಾಳಿಕೆಯಲ್ಲಿ ಹೇಳಿದಂತೆ ಕಾರ್ಖಾನೆಗೆ ರೈತರು ಕಬ್ಬು ನೀಡಿದ 10 ರಿಂದ 15 ದಿನಗಳ ಒಳಗಾಗಿ ಬಿಲ್‌ ಪಾವತಿಸಲಾಗುವುದು ಎಂದು ಚನ್ನರಾಜ್‌ ಹಟ್ಟಿಹೊಳಿ ಹೇಳಿದರು.

ಎಲ್ಲರ ವಿಶ್ವಾಸಗಳಿಸುವುದೇ ನಮ್ಮ ಗುರಿ, ನಮ್ಮ ಪ್ಯಾನೆಲ್‌ ಮಾರ್ಗದರ್ಶನದಂತೆ ಆಡಳಿತ ನಡೆಸುವುದೇ ನಮ್ಮ ಗುರಿ. ಕಾರ್ಮಿಕರಿಗೆ, ನೌಕರರಿಗೆ ಸರಿಯಾದ ಸಮಯಕ್ಕೆ ವೇತನ ನೀಡುವ ಭರವಸೆ ನೀಡಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ