Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಸಭೆ-2011ರ ನಂತರ ನಿವೃತ್ತಿಯಾದ ಕಾರ್ಯಕರ್ತೆಯರಿಗೆ ಗ್ರ್ಯಾಚ್ಯುಟಿ ನೀಡುವ ಬಗ್ಗೆ ಸಿಎಂ ಜೊತೆ ಚರ್ಚೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ಹಿತಕಾಯಲು ಸದಾ ಬದ್ಧವಾಗಿದೆ. 2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ನೀಡುವ ಸಂಬಂಧ ಶೀಘ್ರವೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಬೆಂಗಳೂರಿನ ವಿಧಾನಸೌಧದ ಸಚಿವರ ಕಚೇರಿಯಲ್ಲಿ 2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು, ಮಿನಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ಪಾವತಿ ಮಾಡುವ ಕುರಿತು, ಅಂಗನವಾಡಿಯ ವಿವಿಧ ಸಂಘಟನೆಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಚರ್ಚೆ ನಡೆಸಿದರು.

ಗೌರವಧನ ಹೆಚ್ಚಳ, ನಿವೃತ್ತಿಯಾದ ಎಲ್ಲರಿಗೂ ಗ್ರ್ಯಾಚುಟಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಂಘಟನೆಗಳು ಒತ್ತಾಯಿಸುತ್ತಾ ಬಂದಿವೆ. ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹಿತಕಾಯಲು ನಮ್ಮ ಸರ್ಕಾರ ಬದ್ಧವಾಗಿದೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ‌ ಜೊತೆ ಚರ್ಚೆ ನಡೆಸಿ‌‌ ಬೇಡಿಕೆಗಳ ಈಡೇರಿಕೆಗೆ ಕ್ರಮವಹಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಈಗಾಗಲೇ ಸರ್ಕಾರ 2023-24ನೇ ಸಾಲಿನ ಆರ್ಥಿಕ ವರ್ಷದಿಂದ ಜಾರಿಗೆ ಬರುವಂತೆ ನಿವೃತ್ತಿ ಬಳಿಕ ಗ್ರ್ಯಾಚ್ಯುಟಿಗೆ ಆಡಳಿತಾತ್ಮಕ ಅನುಮತಿ ನೀಡಲಾಗಿದೆ. ಈಗಾಗಲೇ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. ಸಂಘಟನೆಗಳ ಬೇಡಿಕೆಯಂತೆ 2011ರಿಂದ ಗ್ರ್ಯಾಚ್ಯುಟಿ ಜಾರಿಗೆ ತರಲು ಪ್ರಯತ್ನಿಸಲಾಗುವುದು ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಶಾಮ್ಲಾ ಇಕ್ಬಾಲ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ‌ಬಿ.ಎಚ್‌.ನಿಶ್ಚಲ್, ಇಲಾಖೆಯ ನಿರ್ದೇಶಕ ರಾಘವೇಂದ್ರ, ಎಐಟಿಯುಸಿ ಅಂಗನವಾಡಿ ಸಂಘಟನೆಯ ಅಧ್ಯಕ್ಷ ಬಿ.ಅಮ್ಜದ್, ಪ್ರಧಾನ ಕಾರ್ಯದರ್ಶಿ ಎಂ. ಜಯಮ್ಮ, ಅಂಗನವಾಡಿ ನೌಕರರ‌ ಸಂಘದ ರಾಜ್ಯಾಧ್ಯಕ್ಷೆ ವರಲಕ್ಷ್ಮೀ, ಟಿಯುಸಿಸಿ ನೇತೃತ್ವದ ಅಂಗನವಾಡಿ ಸಂಘಟನೆಯ ಅಧ್ಯಕ್ಷ ಶಿವಶಂಕರ್, ಪ್ರಧಾನ ಕಾರ್ಯದರ್ಶಿ ನಾಗರತ್ನ ಸೇರಿದಂತೆ ವಿವಿಧ ಸಂಘಟನೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಕಲಗಿ ಪಟ್ಟಣದಲ್ಲಿ ವಿಜಯ ದಶಮಿ ನಿಮಿತ್ತ ಶ್ರೀ ಮಹಾಲಕ್ಷ್ಮೀ ದೇವಿ ಅಗ್ನಿ ಹಾಯುವ ಕಾರ್ಯಕ್ರಮ.ಮಾರ್ಕಂಡೇಯ ನದಿಯಲ್ಲಿ  ಮರ್ಡರ್..?ಬೆಳಗಾವಿಯಲ್ಲಿ ಹೊಸ ಶೋರೂಮ್ ಮೂಲಕ ಕರ್ನಾಟಕದಲ್ಲಿ ತನ್ನ ಅಸ್ತಿತ್ವ ವಿಸ್ತರಿಸಿದ PuREPowerನೀಲಿ ಡ್ರಮ್ ಕೊಲೆ ಪ್ರಕರಣ : ಪತ್ನಿ ಮುಸ್ಕಾನ್‌, ಪ್ರಿಯಕರ ಸಾಹಿಲ್‌ಗೆ ಮರಣದಂಡನೆ ಶಿಕ್ಷೆRCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರು