Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ತೆಲಂಗಾಣದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರ್ಜರಿ ಪ್ರಚಾರ

 

ತೆಲಂಗಾಣ: ತೆಲಂಗಾಣ ರಾಜ್ಯದ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರವೂ ಭರ್ಜರಿ ಪ್ರಚಾರ ಮುಂದುವರಿಸಿದರು.
ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ತೆಲಂಗಾಣಕ್ಕೆ ತೆರಳಿ ವಿವಿಧ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡ ಲಕ್ಷ್ಮೀ ಹೆಬ್ಬಾಳಕರ್, ಸೋಮವಾರ ಮಲಕ್ ಪೇಟ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶೇಖ್ ಅಕ್ಬರ್ ಪರ ಚುನಾವಣೆಯ ಪ್ರಚಾರದಲ್ಲಿ ಪಾಲ್ಗೊಂಡರು.

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದು 6 ತಿಂಗಳು ಕಳೆದಿದ್ದು, 6‌ ತಿಂಗಳಿನಲ್ಲಿ‌ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವುದರಲ್ಲಿ ಯಶಸ್ವಿಯಾಗಿದೆ. ಕಾಂಗ್ರೆಸ್ ಪಕ್ಷ ಹಿಂದಿನಿಂದಲೂ ನುಡಿದಂತೆ ನಡೆಯುತ್ತಿದ್ದು, ಕೊಟ್ಟ ಭರವಸೆಯನ್ನು ನಿಗದಿತ ಸಮಯದಲ್ಲಿಯೇ ಈಡೇರಿಸಲಾದೆ. ಹಾಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಈ ಕ್ಷೇತ್ರದ ಅಭ್ಯರ್ಥಿ ಹಾಗೂ ತೆಲಂಗಾಣದಲ್ಲಿ ಅತ್ಯಧಿಕ ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಹೆಬ್ಬಾಳಕರ್ ಮನವಿ ಮಾಡಿದರು.

ಈ ಸಮಯದಲ್ಲಿ ಪಕ್ಷದ ಅಭ್ಯರ್ಥಿಯಾದ ಶೇಖ್ ಅಕ್ಬರ್, ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ನ ಹಂಗಾಮಿ ಅಧ್ಯಕ್ಷೆ ನೆಟ್ಟಾ ಡಿಸೋಜಾ, ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ