Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಾವಗಾಂವಯಲ್ಲಿ ಮನೆ ಮಗಳಿಗೆ ಸನ್ಮಾನ; ಅಭಿವೃದ್ಧಿ ಯೋಜನೆಗಳ ಉಡುಗೊರೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

 

ಬೆಳಗಾವಿ :
ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾವಗಾಂವ ಗ್ರಾಮಸ್ಥರು ಭಾನುವಾರ ಸಂಜೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಅದ್ಧೂರಿಯಾಗಿ ಸನ್ಮಾನಿಸಿದರು.

ಗ್ರಾಮದ ವಿವಿಧ ಸಮಾಜದವರು ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಹಬ್ಬದ ವಾತಾವರಣದಲ್ಲಿ ಸಚಿವರ ಸ್ವಾಗತ ಹಾಗೂ ಸತ್ಕಾರ ನಡೆಯಿತು.

ಈ ವೇಳೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್, ನಿಮ್ಮ ಸಹಕಾರದಿಂದಾಗಿ ನಾನು ಈಗ ರಾಜ್ಯದ ಸಚಿವೆಯಾಗಿದ್ದೇನೆ. ಇಡೀ ರಾಜ್ಯದ ಸೇವೆ ಸಲ್ಲಿಸುವ ಅವಕಾಶ ಮಾಡಿಕೊಟ್ಟಿರುವ ನಿಮ್ಮ ಋಣವನ್ನು ತೀರಿಸಲು ಸಾಧ್ಯವಿಲ್ಲ. ಸಾವಗಾಂವ ಗ್ರಾಮದಲ್ಲಿ ಈಗಾಗಲೇ ಹಲವಾರು ಅಭಿವೃದ್ಧಿ ಕೆಲಸಗಳಾಗಿದ್ದು, ಬರುವ ದಿನಗಳಲ್ಲಿಯೂ ಸಹ ಅಭಿವೃದ್ಧಿ ಕೆಲಸಗಳು ಮುಂದುವರಿಯಲಿವೆ. ರೈತರ ಸಲುವಾಗಿ ಗ್ರಾಮದ ಕೆರೆಗೆ ಬ್ರಿಡ್ಜ್ ಕಂ ಬಾಂದಾರ ನಿರ್ಮಾಣ, ಗ್ರಾಮದ ಒಳಾಂಗಣ ರಸ್ತೆಗಳ ಅಭಿವೃದ್ಧಿ (ಕಾಂಕ್ರೀಟಿಕರಣ) ಹಾಗೂ ಸ್ಮಶಾನದ ಅಭಿವೃದ್ಧಿ ಯೋಜನೆಗಳನ್ನು ಅತೀ ಶೀಘ್ರದಲ್ಲಿ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಗ್ರಾಮದ ಹಿರಿಯರು, ಯುವರಾಜ ಕದಂ, ಎನ್. ಕೆ. ಪಾಟೀಲ್, ಬಾಳು ಪಾಟೀಲ, ಮಾಯಪ್ಪ ಘಾಟೆಗಸ್ತಿ, ಸಂಗೀತಾ ಬಾನೇಕರ್ ಗಣಪತ ಕಾಕತ್ಕರ್, ಗೀತಾ ಸಾವಗಾಂವ್ಕರ್, ಮಾರುತಿ ಪಾಟೀಲ, ಭರ್ಮಾ ಕಾಂಬಳೆ, ಪಿ.ಜಿ. ಹಲಾಲಿ, ನಾರಾಯಣ ಕದಂ, ನೂರಸಾಬ್ ಜಮಾದಾರ, ಉಮೇಶ ಪಾಟೀಲ, ರೇಖಾ ಸಿಂಗ್, ಸಂತೋಷ ಪಾಟೀಲ ಮೊದಲಾದವರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ