Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಹಿಳೆಯರ ಪಾಲಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾದರಿ: ವಿನಯ ಗುರೂಜಿ-ಮಾರ್ಡನ್ ಇಂದಿರಾಗಾಂಧಿ ಎಂದು ಶ್ಲಾಘನೆ

ಹೆರಂಜಾಲು(ಉಡುಪಿ) : ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಾನು ನೋಡಿದ ದಿಟ್ಟ ಮಹಿಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್. ಮಾರ್ಡನ್ ಇಂದಿರಾ ಗಾಂಧಿ ಸ್ವರೂಪ ಹೊಂದಿರುವವರು ಅವರು. ಹತ್ತು ಜನ ಪುರುಷ ರಾಜಕಾರಣಿಗಳ ಶಕ್ತಿ ಅವರಿಗಿದೆ ಎಂದು ಗೌರಿಗದ್ದೆ ಆಶ್ರಮದ ಅವಧೂತರಾದ ವಿನಯ್ ಗುರೂಜಿ ಶ್ಲಾಘಿಸಿದರು.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೆರಂಜಾಲುವಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೆಫ್ ಟಾಕ್ ನ್ಯೂಟ್ರಿಫುಡ್ಸ್ ಪ್ರೈವೇಟ್‌ ಲಿಮಿಟೆಡ್‌ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಶನಿವಾರ ಮಾತನಾಡಿದ ಅವರು, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕಾರ್ಯವೈಖರಿಯನ್ನು ಹೊಗಳಿದರು.

ಸಚಿವರ ಕಾಳಜಿಯಿಂದಲೇ ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಯೋಜನೆ ಗೃಹಲಕ್ಷ್ಮಿ ಇಂದು ಮನೆ ಮನೆಗೆ ತಲುಪುತ್ತಿದೆ. ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದೇ ಇಂದು ರಾಜಕೀಯದಲ್ಲಿ ಉನ್ನತ ಸ್ಥಾನಕ್ಕೇರಿದ್ದಾರೆ. ಅವರ ಆಡಳಿತ ವೈಖರಿ ಇತರರಿಗೂ ಮಾದರಿಯಾಗಿದೆ ಎಂದು ವಿನಯ್ ಗುರೂಜಿ ಹೇಳಿದರು.

* *ಗ್ರಾಮೀಣ ಪ್ರದೇಶದ ಉದ್ಯಮಿಗಳಿಗೆ ಬೆಂಬಲ*
ಮನುಷ್ಯ ಕಷ್ಟಪಟ್ಟು ಮುಂದೆ ಬಂದಿದ್ದರಷ್ಟೇ ಆತನಿಗೆ ಕಷ್ಟಪಟ್ಟವರ ಬೆಲೆ ಗೊತ್ತಿರುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಉದ್ಯಮಗಳು ಸ್ಥಾಪನೆಯಾಗಬೇಕು. ಇಂಥ ಉದ್ಯಮಿಗಳನ್ನು ಬೆಂಬಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಫ್ಯಾಕ್ಟರಿ ಉದ್ಘಾಟಿಸಿದ್ದು ನನಗೆ ತುಂಬಾ ಖುಷಿ ನೀಡಿತು. ಫ್ಯಾಕ್ಟರಿ ಕಟ್ಟೋದು ಅಷ್ಟು ಸುಲಭವಲ್ಲ, ಇದಕ್ಕೆ ಅಡ್ಡಿಪಡಿಸೋರೆ ಜಾಸ್ತಿ. ಪುಟ್ಟ ಹಳ್ಳಿಯಿಂದ ದೆಹಲಿವರೆಗೂ ಉದ್ಯಮ ಹೊಂದಿರುವ ಗೋವಿಂದ ಪೂಜಾರಿ ಅವರ ಸಾಧನೆ ನಿಜಕ್ಕೂ ಮೆಚ್ಚುವಂತದ್ದು ಎಂದರು.

ಈ ವೇಳೆ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ, ಶೆಫ್ ಟಾಕ್ ನ್ಯೂಟ್ರಿ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಮಾಲೀಕ ಗೋವಿಂದ ಬಾಬು ಪೂಜಾರಿ, ರಾಜು ಪೂಜಾರಿ, ವಿಜಯ್ ಶೆಟ್ಟಿ, ಸಂಜೀವ್, ಗ್ರಾಮ ಪಂಚಾಯತಿ ಅಧ್ಯಕ್ಷರಾದ ನಾಗಮ್ಮ ದೇವಾಡಿಗ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ