Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ವಿಶೇಷ ಶಾಲೆಗಳ ಶಿಕ್ಷಕರ ವೇತನ ಪರಿಷ್ಕರಣೆಗೆ ಅಗತ್ಯ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ : ವಿಶೇಷಚೇತನ ಮಕ್ಕಳ ವಸತಿ ಶಾಲೆಗಳ ಸಭೆಯಲ್ಲಿ ಭರವಸೆ

ಬೆಂಗಳೂರು: ರಾಜ್ಯದ ವಿಶೇಷ ವಸತಿ ಶಾಲೆಗಳಲ್ಲಿ ಸೇವಾ ನಿರತ ಸಿಬ್ಬಂದಿಯ ವೇತನ ಪರಿಷ್ಕರಣೆ ಸೇರಿದಂತೆ ಮೂಲಭೂತ ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಶೀಘ್ರವೇ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ವಿಶೇಷಚೇತನ ಮಕ್ಕಳ ವಸತಿ ಶಾಲೆಗಳ ಸಭೆಯಲ್ಲಿ ಮಾತನಾಡಿದ‌ ಸಚಿವರು, 1982ರ ರಾಜ್ಯ ಅನುಸಂಧಾನ ಸಂಹಿತೆಯಡಿ ನಡೆಯುತ್ತಿರುವ ವಿಶೇಷ ಶಾಲೆಗಳ ವಿಶೇಷ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಯ ಬೇಡಿಕೆಗಳನ್ನು ಇಲಾಖೆ ಸಹಾನುಭೂತಿಯಿಂದ ಪರಿಶೀಲಿಸಲಿದೆ ಎಂದು ಹೇಳಿದರು.

ಸದ್ಯ ವಿಶೇಷ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ‌ ಶಿಕ್ಷಕರು ಹಾಗೂ ಶಿಕ್ಷಕೇತರರಿಗೆ ಕಳೆದ 14 ವರ್ಷಗಳಿಂದ ವೇತನ ಪರಿಷ್ಕರಣೆ ಆಗಿಲ್ಲ ಎನ್ನುವುದು ಗಮನಕ್ಕೆ ಬಂದಿದೆ. ಹೀಗಾಗಿ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಇಲಾಖೆಯೊಂದಿಗೆ ಚರ್ಚೆ ನಡೆಸಲಾಗುವುದು. ಜೊತೆಗೆ ಪ್ರತಿ ತಿಂಗಳು ವೇತನ ಭರಿಸುವ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು.

ಮಾನಸಿಕ ಭಿನ್ನ ಸಾಮರ್ಥ್ಯದ 25 ವಯೋಮಿತಿ ಮೀರಿದವರಿಗಾಗಿ ವೃತ್ತಿಪರ ತರಬೇತಿ ಕೇಂದ್ರ ಅಥವಾ ಪಾಲನಾ ಕೇಂದ್ರವನ್ನು ರಾಜ್ಯಾದ್ಯಂತ ನಡೆಸುವ ಬಗ್ಗೆ ಪರಿಶೀಲಿಸಿ ಕ್ರಮವಹಿಸಲಾಗುವುದು ಎಂದು ಸಚಿವರು ತಿಳಿಸಿದರು.

ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಆಯುಕ್ತ ವಾಸಿರೆಡ್ಡಿ ವಿಜಯ ಜ್ಯೋತ್ಸ್ನಾ, ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ನಿರ್ದೇಶಕ ಸಿದ್ದೇಶ್ವರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಅಧಿಕಾರಿಗಳು, ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರ ಹಾಗೂ ಶಿಕ್ಷಕೇತರ ಸಂಘ ಹಾಗೂ ಕರ್ನಾಟಕ ರಾಜ್ಯ ವಿಕಲಚೇತನರ ಸೇವಾ ಸಂಸ್ಥೆಗಳ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರು