Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಯರಗಟ್ಟಿಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ

 

ಯರಗಟ್ಟಿ (ಬೆಳಗಾವಿ): ಮಹಿಳೆಯರ ಸಬಲೀಕರಣಕ್ಕಾಗಿ ಹಾಗೂ ಶ್ರೇಯೋಭಿವೃದ್ಧಿಗಾಗಿ ಸ್ವಾತಂತ್ರ್ಯದ ಪೂರ್ವದಿಂದಲೂ ಕಾಂಗ್ರೆಸ್ ಪಕ್ಷ ತನ್ನದೇ ಕೊಡುಗೆಯನ್ನು ನೀಡುತ್ತಾ ಬಂದಿದೆ. ದೇಶದ ಮಹಿಳೆಯರಿಗೆ ಶಕ್ತಿ ತುಂಬಿರುವ ಪಕ್ಷ ಎಂದರೆ ಅದು ಕಾಂಗ್ರೆಸ್ ಪಕ್ಷ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಬೆಳಗಾವಿಯ ಯರಗಟ್ಟಿಯ ಶ್ರೀಶೈಲ ಮಲ್ಲಿಕಾರ್ಜುನ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಸಚಿವರು, ನಂಬಿಕೆಗೆ ಮತ್ತೊಂದು ಹೆಸರೇ ಕಾಂಗ್ರೆಸ್. ಚುನಾವಣಾ ಪೂರ್ವ ಜನರಿಗೆ ನೀಡಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಕೇವಲ 100 ದಿನಗಳಲ್ಲಿ ಪೂರೈಸಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ಶ್ರಮದ ಫಲವಾಗಿ ಇಂದು ಗ್ಯಾರಂಟಿ ಯೋಜನೆಗಳು ಜಾರಿಗೊಂಡಿವೆ. ರಾಜ್ಯಾದ್ಯಂತ 1.20 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಲಾಭ ಸಿಕ್ಕಿದೆ ಎಂದು ಹೇಳಿದರು.

ಈ ಮೊದಲು ಸರ್ಕಾರದ ಅನುದಾನ ಪಡೆಯಲು ಜನರು ಮುಜುಗರ ಪಡುತ್ತಿದ್ದರು. ಇದೀಗ ಕಾಲ ಬದಲಾಗಿದೆ. ಸರ್ಕಾರದ ಯೋಜನೆಗಳ ಲಾಭ ಪಡೆಯುವುದು ನಮ್ಮ ಹಕ್ಕು. ಇದಕ್ಕೆ ಪ್ರಮುಖ ಕಾರಣಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ. ಸ್ವಾರ್ಥಕ್ಕಾಗಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ ಎಂಬ ವಿಶ್ವಾಸದೊಂದಿಗೆ ಚುನಾವಣೆಗೂ ಮುನ್ನ ಮತದಾರರಿಗೆ ಗ್ಯಾರಂಟಿ ಕಾರ್ಡ್ ಹಂಚಿದ್ದೆವು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಬಿಜೆಪಿಯವರ ರೀತಿ ನಾವು ಕೇವಲ ಮಾತಿಗೆ ಸೀಮಿತವಾಗದೆ ಕೊಟ್ಟ ಮಾತಿನಂತೆ ಭರವಸೆಯನ್ನು ಈಡೇರಿಸಿದ್ದೇವೆ. ಕರೋನಾದಿಂದ ಎರಡೂವರೆ ವರ್ಷ ತತ್ತರಿಸಿದ್ದ ಜನ, ಅತಿವೃಷ್ಠಿಯಿಂದಲೂ ಸಂಕಷ್ಟಕ್ಕೆ ಸಿಲುಕಿದ್ದರು. ಜನ ಸಾಮಾನ್ಯರಿಗೆ ಆರ್ಥಿಕ ಶಕ್ತಿ ತುಂಬುವ ಸಲುವಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದರು.

ಸಮಾರಂಭದಲ್ಲಿ ಶಾಸಕರಾದ ವಿಶ್ವಾಸ್ ವೈದ್ಯ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳ್ಕರ್, ನಿಖಿಲ್ ದೇಸಾಯಿ, ನೀಲಕಂಠ ಸಿದ್ದಬಸನ್ನವರ್, ಸವದತ್ತಿ ಕಾರ್ಯ‌ನಿರ್ವಾಹಕ ಅಧಿಕಾರಿ ಯಶವಂತಕುಮಾರ್, ತಹಶಿಲ್ದಾರ್ ಎಸ್.ಎಸ್.ಇಂಗಳೆ, ಗೋಪಾಲ್ ದಳವಾಯಿ, ಬಸವರಾಜ ಅರಬೆಂಚಿ, ಕ್ಷೇತ್ರ ಶಿಕ್ಷಣಾಧಿಕಾರಿ ದಂಡಿನ್, ಸಿಡಿಪಿಓ ಸುನಿತಾ ಪಾಟೀಲ್, ದಾವಲಸಾಬ್ ತಹಶಿಲ್ದಾರ್, ಶಿವಾನಂದ ಭಜಂತ್ರಿ, ಕಾವೇರಿ ಚಲವಾದಿ, ಈರಣ್ಣಗೌಡ, ಫಕೀರಪ್ಪ ಹಟ್ಟಿ, ಭವರಸಾಬ್ ಸಣ್ಣಕ್ಕಿ, ಬಸವರಾಜ ಬಿರಾದಾರ, ಬಾಲಚಂದ್ರ ಸತ್ತೂರಿ ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ