Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ, ಚಿಕ್ಕೋಡಿ ಕ್ಷೇತ್ರಕ್ಕೆ ಎಷ್ಟು ಆಕಾಂಕ್ಷಿಗಳು ? ಸಚಿವ ಸತೀಶ ಜಾರಕಿಹೊಳಿ ಹೇಳಿದ್ದೇನು ?

 

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಇಬ್ಬರು ಹಾಗೂ ಚಿಕ್ಕೋಡಿ ಕ್ಷೇತ್ರಕ್ಕೆ ಮೂವರ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡಿಗೆ ಕಳುಹಿಸಲಾಗಿದೆ. ಅಭ್ಯರ್ಥಿಗಳ ಹೆಸರು ಪಟ್ಟಿ ಮಾಡಿ ವರಿಷ್ಠರಿಗೆ ಕಳಿಸುವುದಷ್ಟೆ ನನ್ನ ಡ್ಯೂಟಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಖಾನಾಪುರ ತಾಲೂಕಿನ ಕಣಕುಂಬಿಯಲ್ಲಿ ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿ, ಅಭ್ಯರ್ಥಿಗಳ ಆಯ್ಕೆ ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು. ನಮ್ಮ ಕುಟುಂಬದ ಯಾವ ಸದಸ್ಯರೂ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಮತ್ತೊಮ್ಮೆ ಪುನರುಚ್ಚರಿಸಿದರು.

ಬೆಳಗಾವಿ ಮತ್ತು ಚಿಕ್ಕೋಡಿ ಎರಡು ಸ್ಥಾನಗಳಲ್ಲಿ ಹಲವಾರು ಆಕಾಂಕ್ಷಿಗಳಿದ್ದು, ಹೆಚ್ಚು ಜನಪ್ರಿಯತೆ ಗಳಿಸಿರುವ ಇಬ್ಬರು ಉತ್ತಮ ಅಭ್ಯರ್ಥಿಗಳನ್ನು ಪಕ್ಷದ ಸ್ಥಳೀಯ ಘಟಕ ಆಯ್ಕೆ ಮಾಡುತ್ತದೆ. ಆದರೆ ಆಯ್ಕೆಯಾದ ಅಭ್ಯರ್ಥಿಗಳು ತಮ್ಮ ಸಮುದಾಯದಲ್ಲಿ ಮಾತ್ರವಲ್ಲದೆ ಇತರ ಸಮುದಾಯಗಳಲ್ಲಿಯೂ ಜನಪ್ರಿಯರಾಗಬೇಕು ಎಂದು ಹೇಳಿದರು.

ಕುಟುಂಬಕ್ಕಿಂತ ಪಕ್ಷ ಗೆಲುವು ಮುಖ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬೆಳಗಾವಿ ಕ್ಷೇತ್ರದಲ್ಲಿ ಗೆಲ್ಲುವ ಅವಕಾಶ ತೋರಿಸಿದರೆ ಅವರ ಪುತ್ರನಿಗೆ ಟಿಕೆಟ್ ನೀಡಲಾಗುವುದು ಎಂದ ಅವರು, ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾನಾಗಲಿ ಅಥವಾ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ನನ್ನ ಪುತ್ರಿ ಪ್ರಿಯಾಂಕಾ ಜಾರಕಿಹೊಳಿಯಾಗಲಿ ಸ್ಪರ್ಧೆ ಮಾಡುವುದಿಲ್ಲ. “ನಾವು ಸಾಮಾನ್ಯ ಕಾರ್ಯಕರ್ತನನ್ನು ಕಣಕ್ಕಿಳಿಸಿ ಚುನಾವಣೆ ಎದುರಿಸುತ್ತೇವೆ. ಅಲ್ಲದೇ ನಮ್ಮ ಕ್ಷೇತ್ರದಲ್ಲಿ ಕುಟುಂಬ ಮುಖ್ಯ ಬರಲ್ಲ. ಇಲ್ಲಿ ಏನೆ ಇದ್ದರೂ ಗೆಲ್ಲುವುದೊಂದೆ ಮುಖ್ಯ ಎಂದು ಹೇಳಿದರು.

ಅಪಘಾತ ತಡೆಯಲು ಜಾಗೃತಿ ಅಗತ್ಯ: ಇನ್ನು ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಲ್ಲಿ 25 ಜನ ಅಪಘಾತದಲ್ಲಿ ಸಾವನ್ನಪ್ಪಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಸತೀಶ ಜಾರಕಿಹೊಳಿ, ಅಪಘಾತ ತಡೆಗಟ್ಟಲು ಪೂಲೀಸ್‌ ಇಲಾಖೆ, ಆರ್‌ಟಿಒ ಅಧಿಕಾರಗಳು ಜಂಟಿಯಾಗಿ ಸಭೆ ನಡೆಸುವ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುರಕ್ಷತೆ ಇರುತ್ತದೆ. ಸರ್ವಿಸ್‌ ರಸ್ತೆಗಳು ಇರುತ್ತವೆ. ಆದರೆ ರಾಜ್ಯ ಹೆದ್ದಾರಿ, ಸ್ಥಳೀಯ ರಸ್ತೆಗಳಲ್ಲಿ ಹಾಗಲ್ಲ. ಆದ್ದರಿಂದ ಅಪಘಾತ ತಡೆಯಲು ಎಲ್ಲರೂ ಜಾಗೃತರಾಗಬೇಕೆಂದು ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ