Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಗೆ ಅಭಿನಂದನೆ ಸಲ್ಲಿಸಿದ ಸಚಿವ ಸತೀಶ್-ಸಂಸದೆ ಪ್ರಿಯಂಕಾ

ಬೆಂಗಳೂರು: ಕನ್ನಡದ ಹೆಸರಾಂತ ಲೇಖಕಿ ಬಾನು ಮುಷ್ತಾಕ್ ಅವರು ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿರುವುದಕ್ಕೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹಾಗೂ ಚಿಕ್ಕೋಡಿ ಕ್ಷೇತ್ರದ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ವಿಷಯ ತಿಳಿಸಿದ ಅವರು, ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಷ್ತಾಕ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಕನ್ನಡದ ಈ ನೆಲದ ಸೌಹಾರ್ದತೆ, ಜಾತ್ಯತೀತತೆ ಮತ್ತು ಸೋದರತ್ವದ ನಿಜ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬರೆಯುತ್ತಿರುವ ಬಾನು ಮುಷ್ತಾಕ್ ಅವರು ಕನ್ನಡದ ಹಿರಿಮೆಯ ಬಾವುಟವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿ ನಮಗೆಲ್ಲ ಗೌರವ ತಂದುಕೊಟ್ಟಿದ್ದಾರೆ. ಅವರು ಇನ್ನಷ್ಟು ಕಾಲ ಸತ್ವಯುತವಾಗಿ ಬರೆಯುತ್ತಾ ಕನ್ನಡದ ಕಂಪನ್ನು ಜಗದಗಲಕ್ಕೆ ಪಸರಿಸುತ್ತಾ ಇರಲಿ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹಾರೈಸಿದ್ದಾರೆ.

ಅಭಿನಂದಿಸಿದ ಪ್ರಿಯಂಕಾ: ಸಮಸ್ತ ಕನ್ನಡಿಗರಿಗೆ ಇದು ಹೆಮ್ಮೆಯ ಕ್ಷಣ. ಜಾಗತಿಕ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ನಮ್ಮ ನಾಡಿನ ಹೆಮ್ಮೆಯ ಲೇಖಕಿ ಬಾನು ಮುಷ್ತಾಕ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ಬಾನು ಮುಷ್ತಾಕ್ ಅವರಿಂದ ಇದೇ ರೀತಿಯಲ್ಲಿ ಇನ್ನಷ್ಟು ಉತ್ತಮ ಕೃತಿಗಳು ಬರಲಿ. ಅವರಿಂದ ಕನ್ನಡ ಸಾಹಿತ್ಯಲೋಕ ಮತ್ತಷ್ಟು ಶ್ರೀಮಂತವಾಗಲಿ ಹಾಗೂ ಜಗತ್ತಿನ ಉದ್ದಗಲಕ್ಕೂ ಕನ್ನಡದ ಕಂಪು ಹರಡಲಿ ಎಂದು ಹಾರೈಸುತ್ತೇನೆ ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ತಿಳಿಸಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಕಲಗಿ ಪಟ್ಟಣದಲ್ಲಿ ವಿಜಯ ದಶಮಿ ನಿಮಿತ್ತ ಶ್ರೀ ಮಹಾಲಕ್ಷ್ಮೀ ದೇವಿ ಅಗ್ನಿ ಹಾಯುವ ಕಾರ್ಯಕ್ರಮ.ಮಾರ್ಕಂಡೇಯ ನದಿಯಲ್ಲಿ  ಮರ್ಡರ್..?ಬೆಳಗಾವಿಯಲ್ಲಿ ಹೊಸ ಶೋರೂಮ್ ಮೂಲಕ ಕರ್ನಾಟಕದಲ್ಲಿ ತನ್ನ ಅಸ್ತಿತ್ವ ವಿಸ್ತರಿಸಿದ PuREPowerನೀಲಿ ಡ್ರಮ್ ಕೊಲೆ ಪ್ರಕರಣ : ಪತ್ನಿ ಮುಸ್ಕಾನ್‌, ಪ್ರಿಯಕರ ಸಾಹಿಲ್‌ಗೆ ಮರಣದಂಡನೆ ಶಿಕ್ಷೆRCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರು