Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಾರ, ಹೂಗುಚ್ಛಗಳ ಬದಲು ಪುಸ್ತಕಗಳನ್ನು ನೀಡಿ: ಸಚಿವರ ಮನವಿ

 

ಮಂಗಳೂರು:
ಇನ್ನು ಮುಂದೆ ಸನ್ಮಾನದ ಸಂದರ್ಭದಲ್ಲಿ ಹಾರ, ತುರಾಯಿ, ಶಾಲುಗಳನ್ನು ಹಾಕದಂತೆ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಮನವಿ ಮಾಡಿದ್ದಾರೆ.
ಬದಲಾಗಿ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಬಹುದು ಎಂದು ವಿನಂತಿಸಿದ್ದಾರೆ.
ಈ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಸೂಚನೆಯ ಮೇರೆಗೆ, ಅವರ ಆಪ್ತ ಕಾರ್ಯದರ್ಶಿ ಕೆ.ಎ. ಹಿದಾಯತ್ತುಲ್ಲ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ಸುತ್ತೋಲೆ ಹೊರಡಿಸುವಂತೆ ನಿರ್ದೇಶನ ನೀಡಿದ್ದರು. ಅದರಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಸುತ್ತೋಲೆ ಹೊರಡಿಸಿದ್ದು, ಜಿಲ್ಲೆಯ ಉಸ್ತುವಾರಿಯಾಗಿರುವ ದಿನೇಶ್ ಗುಂಡೂರಾವ್ ಅವರಿಗೆ ಸಭೆ, ಸಮಾರಂಭಗಳಲ್ಲಿ ಭಾಗವಹಿಸಿದಾಗ ಹಾರ, ತುರಾಯಿ ಬದಲು ಪುಸ್ತಕ ಕೊಡುವಂತೆ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಆಪ್ತ ಕಾರ್ಯದರ್ಶಿ ಬರೆದಿರುವ ಪತ್ರದಲ್ಲಿ, “ಜಿಲ್ಲಾ ಉಸ್ತುವಾರಿ ಸಚಿವರು ಭಾಗವಹಿಸುವ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯಾವುದೇ ಸಭೆ ಸಮಾರಂಭಗಳಲ್ಲಿ ಹಾರ, ಹೂಗುಚ್ಛಗಳನ್ನು ನೀಡುವುದನ್ನು ನಿಷೇಧಿಸುವಂತೆ ಮತ್ತು ಇಷ್ಟ ಇದ್ದವರು ಉಡುಗೊರೆ ರೂಪದಲ್ಲಿ ಪುಸ್ತಕಗಳನ್ನು ನೀಡುವಂತೆ ತಿಳಿಸಿ ಸೂಕ್ತ ಸುತ್ತೋಲೆ ಹೊರಡಿಸುವಂತೆ ಕೋರಲು ಸಚಿವರಿಂದ ನಿರ್ದೇಶಿತನಾಗಿದ್ದೇನೆ” ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದರು.‌
ಸಿದ್ದರಾಮಯ್ಯ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾದ ಬೆನ್ನಲ್ಲೇ ತಮಗೆ ಸನ್ಮಾನ ಮಾಡುವ ಸಂದರ್ಭದಲ್ಲಿ ಹಾರ, ಶಾಲು ನೀಡದಂತೆ ಮತ್ತು ಕೊಡಲೇಬೇಕೆಂದರೆ ಪುಸ್ತಕಗಳನ್ನು ಕೊಡುವಂತೆ ಮನವಿ ಮಾಡಿದ್ದರು. ಸಿದ್ದರಾಮಯ್ಯ ಅವರ ಈ ನಡೆ ಭಾರಿ ಮೆಚ್ಚುಗೆಗೆ ಪಾತ್ರವಾಗಿತ್ತು, ನಂತರ ಬೆಂಗಳೂರು ಟ್ರಾಫಿಕ್ ಗಮನದಲ್ಲಿಟ್ಟುಕೊಂಡು ತಮಗೆ ಝೀರೋ ಟ್ರಾಫಿಕ್ ಸೌಲಭ್ಯ ಕೂಡ ಬೇಡ ಎಂದು ಪೊಲೀಸ್ ಇಲಾಖೆಗೆ ಜಿ ಪರಮೇಶ್ವರ್ ತಿಳಿಸಿದ್ದರು.
ಇದೀಗ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೂಡ ಇದೇ ದಾರಿಯಲ್ಲಿ ಸಾಗಲಿದ್ದು, ಹಾರ, ಹೂಗುಚ್ಛದ ಬದಲಾಗಿ ಪುಸ್ತಕ ನೀಡುವಂತೆ ಕೇಳಿದ್ದಾರೆ. ಪುಸ್ತಕಗಳ ಖರೀದಿ, ಓದಿಗೆ ಇದು ಸಹಕಾರ ಸಿಕ್ಕಂತಾಗಲಿದ್ದು, ಬರಹಗಾರರಿಗೆ ಬೆಂಬಲ ಕೂಡ ನೀಡಿದಂತಾಗುತ್ತದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ