Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಂಗ್ರಾಳಿ ಕೆ ಎಚ್ ಗ್ರಾಮದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ

 

ಬೆಳಗಾವಿ:

ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಂಗ್ರಾಳಿ ಕೆ ಎಚ್ ಗ್ರಾಮದ ಜ್ಯೋತಿ ನಗರ ಹಾಗೂ ರಾಮನಗರದ ರಸ್ತೆ‌ ಹಾಗೂ ಚರಂಡಿಗಳ ನಿರ್ಮಾಣಕ್ಕಾಗಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿಯಲ್ಲಿ 3.50 ಕೋಟಿ ರೂ,ಗಳನ್ನು ಬಿಡುಗಡೆ ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಶುಕ್ರವಾರ ಭೂಮಿ ಪೂಜೆಯನ್ನು ಕೈಗೊಂಡು, ರಸ್ತೆ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ಚಾಲನೆಯನ್ನು ನೀಡಿದರು.

ಕಳೆದ 5 ವರ್ಷಗಳಿಂದಲೂ ಅವಿಶ್ರಾಂತವಾಗಿ ಕ್ಷೇತ್ರದ ಅಭಿವೃದ್ಧಿಯನ್ನು ಮಾಡುತ್ತ ಬಂದಿದ್ದೇನೆ. ರಾಜ್ಯದ ಬೇರೆ ಯಾವುದೇ ಕ್ಷೇತ್ರದಲ್ಲೂ ಆಗದಷ್ಟು ಸಂಖ್ಯೆಯ ಕಾಮಗಾರಿಗಳನ್ನು ಸರಕಾರದ ಅನುದಾನ, ಲಕ್ಷ್ಮೀತಾಯಿ ಫೌಂಡೇಶನ್ ಅನುದಾನ ಹಾಗೂ ಸ್ವಂತ ನಿಧಿಯಿಂದ ಮಾಡಿದ್ದೇನೆ. ಕ್ಷೇತ್ರದ ಜನರ ಪ್ರೀತಿ, ವಿಶ್ವಾಸ, ಪ್ರೋತ್ಸಾಹದ ಕಾರಣದಿಂದಾಗಿ ಇಷ್ಟೊಂದು ದಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಮಾಡಲು ಅವಕಾಶವಾಗಿದೆ. ಕ್ಷೇತ್ರದ ಹೊರಗಿನ ಕೆಲವರು ಕೇವಲ ರಾಜಕೀಯ ಕಾರಣಕ್ಕಾಗಿ ಟೀಕೆಗಳನ್ನು ಮಾಡಿದರೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ದೇವರು ಮತ್ತು ಕ್ಷೇತ್ರದ ಜನರು ಎಲ್ಲವನ್ನೂ ನೋಡುತ್ತಿದ್ದಾರೆ. ಅವರೆಂದೂ ನನ್ನ ಕೈಬಿಡುವುದಿಲ್ಲ ಎನ್ನುವ ವಿಶ್ವಾಸವಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಈ ಸಂದರ್ಭದಲ್ಲಿ ಹೇಳಿದರು.

ಈ ಸಮಯದಲ್ಲಿ ಗ್ರಾಮದ ಹಿರಿಯರು, ಜ್ಯೋತಿ ಪಾಟೀಲ, ಯುವರಾಜ ಕದಂ, ಲತಾ ಪಾಟೀಲ, ಕೆಂಪಣ್ಣ ಸನದಿ, ಮೋಹನ ಕಾಂಬಳೆ, ಆನಂದ ಭಜಂತ್ರಿ, ಮೀನಾಕ್ಷಿ ಮುತಗೇಕರ್, ಪೂನಂ ಬೆನ್ನಾಳಕರ್, ರಾಹುಲ್ ಪಾಟೀಲ, ವಿಶಾಲ ಬೋಸ್ಲೆ, ಮೋಹನ ಪಾಟೀಲ, ನಿಲೇಶ್ ಕಿಲ್ಲೇಕರ್, ಪಿಂಟು ರಾಜಗೋಳ್ಕರ್ ಮುಂತಾದವರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ