ಹಾವೇರಿ: ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ಶಿವಣ್ಣನವರ ಅವರಿಗೆ ಈ ಬಾರಿ ಸಚಿವ ಸ್ಥಾನ ಕೈತಪ್ಪಿದೆ. ಇದೇ ವಿಚಾರವಾಗಿ ಕ್ಷೇತ್ರದ ಕೆಲ ಮತದಾರರು, 'ಸಚಿವ ಸ್ಥಾನ ಗೋವಿಂದ' ಎಂದು ತಮ್ಮ ವಾಟ್ಸ್‌ಆ್ಯಪ್ ಸ್ಟೇಟಸ್‌ನಲ್ಲಿ ಬರೆದುಕೊಂಡಿದ್ದಾರೆ.
ಕುರುಬ ಸಮುದಾಯದ ಕೋಟಾದಲ್ಲಿ ಶಿವಣ್ಣನವರ ಬದಲು ಗಾಯತ್ರಿ ಶಾಂತೇಗೌಡ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ.
ಕುರುಬ ಸಮುದಾಯದ ಕೋಟಾದಲ್ಲಿ ಶಿವಣ್ಣನವರ ಬದಲು ಗಾಯತ್ರಿ ಶಾಂತೇಗೌಡ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಹಾವೇರಿ ವಿಧಾನಸಭಾ ಕ್ಷೇತ್ರದ ಶಾಸಕ ರುದ್ರಪ್ಪ ಲಮಾಣಿ ಅವರಿಗೆ ಈ ಬಾರಿ ಸಚಿವ ಸ್ಥಾನ ಸಿಕ್ಕಿದೆ. ಹೀಗಾಗಿ, ಬಸವರಾಜ ಶಿವಣ್ಣನವರ ಅವರಿಗೆ ಸಚಿವ ಸ್ಥಾನ ನೀಡಿಲ್ಲವೆಂದು ಪಕ್ಷದ ಮುಖಂಡರು ಹೇಳುತ್ತಿದ್ದಾರೆ.
ಕಾಂಗ್ರೆಸ್ ಸಚಿವ ಸಂಪುಟದ ಪಟ್ಟಿ ಪ್ರಕಟಗೊಳ್ಳುತ್ತಿದ್ದಂತೆ ಬ್ಯಾಡಗಿಯ ಕೆಲ ಮತದಾರರು, 'ಸಚಿವ ಸ್ಥಾನ ಗೋವಿಂದ' ಸ್ಟೇಟಸ್ ಹಾಕಿಕೊಂಡಿದ್ದಾರೆ. ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಕ್ಷೇತ್ರದ ದೇವರಗುಡ್ಡದ ಕೆಲ ಮತದಾರರು, 'ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸದ ಶಾಸಕ ಶಿವಣ್ಣನವರ ಅವರು ಸಚಿವರಾಗಲು ಪ್ರಯತ್ನಿಸುತ್ತಿದ್ದರು. ಕುರುಬ ಸಮುದಾಯದ ಹೆಸರು ಹೇಳಿಕೊಂಡು ಬೆಳೆದರೂ, ಸಮಾಜಕ್ಕೆ ಏನು ಮಾಡಿಲ್ಲ. ಹೀಗಾಗಿ, ಈ ರೀತಿ ಸ್ಟೇಟಸ್ ಹಾಕಿಕೊಂಡಿದ್ದೇವೆ' ಎಂದರು.
ಸಚಿವ ಸ್ಥಾನ ಕೈತಪ್ಪಿದ್ದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಶಿವಣ್ಣನವರ, 'ನನಗೆ ಈ ಬಾರಿ ಸಚಿವ ಸ್ಥಾನ ನೀಡಬೇಕು' ಎಂದು ಪಟ್ಟು ಹಿಡಿದಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯಲ್ಲಿಯೇ ಮೊಕ್ಕಾಂ ಹೂಡಿರುವ ಶಿವಣ್ಣನವರ, ಸಚಿವ ಸ್ಥಾನ ಪಡೆಯಲು ಪ್ರಯತ್ನಿಸುತ್ತಿದ್ದಾರೆ.