ಖಾನಾಪುರ: ಖಾನಾಪುರ ತಾಲ್ಲೂಕಿನ ಗರ್ಲಗುಂಜಿ ಗ್ರಾಮದಿಂದ ಸಣ್ಣಹೊಸೂರುವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವಿಠ್ಠಲ ಹಲಗೇಕರ ಭೂಮಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.
ಶಾಸಕ ವಿಠ್ಠಲ ಹಲಗೇಕರ ಅವರ ಅನುದಾನದಲ್ಲಿ ಈ ರಸ್ತೆ ಅಭಿವೃದ್ಧಿ ಕಾಮಗಾರಿಗಾಗಿ ₹1 ಕೋಟಿ ಅನುದಾನ ಮಂಜೂರಾಗಿದೆ.
ಗ್ರಾಮೀಣ ಭಾಗದ ರಸ್ತೆ ಸಂಪರ್ಕವನ್ನು ಸುಧಾರಿಸಿ ಸಾರ್ವಜನಿಕರಿಗೆ, ರೈತರಿಗೆ ಹಾಗೂ ವಾಹನ ಸವಾರರಿಗೆ ಸುಗಮ ಸಂಚಾರದ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ.
ಭೂಮಿಪೂಜೆ ಸಮಾರಂಭದಲ್ಲಿ ಬಿಜೆಪಿ ಅಧ್ಯಕ್ಷ ಬಸವರಾಜ ಸಾಣಿಕೊಪ್ಪ, ಗೋಪಾಳರಾವ್ ಪಾಟೀಲ, ಪಾಂಡುರಂಗ ಸಾವಂತ್, ಪರಶುರಾಮ್ ಚೌಗುಲೆ, ಹನುಮಂತ ಮೇಳಗೆ, ಅಜಿತ್ ಪಾಟೀಲ, ರಾಜು ಸಿದ್ದಾನೆ, ನಂದಕುಮಾರ್ ನೇತೂರಕರ್, ಶಾಂತಾರಾಮ್ ಮಿರಗೆ, ರೋಹನ್ ಪಾಟೀಲ, ಭರಮಾಣಿ ಪಾಟೀಲ, ಸುನಿತಾ ಪಾಟೀಲ, ಶಾಂತಾರಾಮ್ ಕದಮ್, ಶಂಕರ ಪಾಖರೆ ಸೇರಿದಂತೆ ಹಲವು ಗಣ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.