Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದ ಶಾಸಕ ವಿಠ್ಠಲ ಹಲಗೇಕರ

ಖಾನಾಪುರ: ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಬುಧವಾರ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಖಾನಾಪುರ ಶಾಸಕ ವಿಠ್ಠಲ ಹಲಗೇಕರ ಅವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಖಾನಾಪುರ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಹಲವು ಪ್ರಮುಖ ಅಭಿವೃದ್ಧಿ ಯೋಜನೆಗಳ ಕುರಿತು ಮನವಿ ಮಾಡಲಾಯಿತು.
ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲು ಒತ್ತಾಯಿಸಿದರು. ಡಿ. ದೇವರಾಜ ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯ,
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೆಟ್ರಿಕ್ ನಂತರ ಬಾಲಕ / ಬಾಲಕಿಯರ ವಸತಿ ನಿಲಯ, ಕನ್ನಡ ಭವನ ನಿರ್ಮಾಣ, ಮುರಾರ್ಜಿ ದೇಸಾಯಿ ವಸತಿ ಶಾಲೆ, ಎಪಿಎಂಸಿ ಪ್ರದೇಶದಲ್ಲಿನ ಅಪೂರ್ಣ ಸಮುದಾಯ ಭವನ ಪೂರ್ಣಗೊಳಿಸಲು ಅನುದಾನ, ಕಸಬಾ ನಂದಗಡ ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನು ಪ್ರಾಧಿಕಾರದ ಸದಸ್ಯರನ್ನಾಗಿ ಮಾಡುವ ಕುರಿತು ವಿನಂತಿಸಿದರು.
ವ್ಯಾಪಕ ಮಳೆಯಿಂದ ಹಾನಿಗೊಳಗಾದ ಸರಕಾರಿ ಕಟ್ಟಡಗಳು, ಅಂಗನವಾಡಿ, ಶಾಲಾ ಕಟ್ಟಡಗಳು ಹಾಗೂ ರಸ್ತೆ ಅಭಿವೃದ್ಧಿಗೆ ₹10 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ವಿನಂತಿ ಮಾಡಲಾಯಿತು ಎಂದು ಶಾಸಕ ವಿಠ್ಠಲ ಹಲಗೇಕರ ಅವರು ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿಯಲ್ಲಿಬಹುಕೋಟಿ ರೂ.ವಂಚನೆ ಪ್ರಕರಣ: ಆರೋಪಿಯ ಬಂಧನಶಾಲಾ ಹಾಸ್ಟೆಲ್‌ನಲ್ಲಿ ಮಲಗಿದ್ದ ವಿದ್ಯಾರ್ಥಿನಿಯರಿಗೆ ಹಾವು ಕಡಿತ; ಮೂವರು ಸಾವು, ಮೂವರು ಗಂಭೀರಬೆಳಗಾವಿಗೆ ಮತ್ತೆ ಅನ್ಯಾಯ : ಬೆಂಗಳೂರು–ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಆರಂಭಕ್ಕೆ ಸಿದ್ಧತೆ : ಪ್ರಯಾಣದ ಅವಧಿ 16 ತಾಸುಮೇಯರ್, ಉಪ ಮೇಯರ್ ಪಾಲಿಕೆಯಲ್ಲಿ ರಾಜ್ಯದ ಪರ ಗೊತ್ತುವಳಿ ಸ್ವೀಕರಿಸಲು ಹಿಂದೇಟು ಹಾಕುತ್ತಿರುವುದು ವಿಪರ್ಯಾಸ: ಅಶೋಕ ಚಂದರಗಿನಕಲಿ ಹೆಸರಿನಲ್ಲಿ 25 ಮದುವೆ ; ತಮ್ಮ ಅಳಿಯನ ವಿರುದ್ಧವೇ ದೂರು ದಾಖಲಿಸಿದ ಬಿಜೆಪಿ ಶಾಸಕ : ಇಬ್ಬರ ಬಂಧನನಟಿಯ ಮೇಲೆ ಅತ್ಯಾಚಾರ ; 73 ವರ್ಷದ ಸಿನೆಮಾ ನಿರ್ದೇಶಕನ ಬಂಧನʼಪ್ರತಿಭಟನೆ ಪ್ರತಿಧ್ವನಿಸಲಿಲ್ಲ….ʼ : ಕಾಂಗ್ರೆಸ್‌ ಸಂಸದ ಶಶಿ ತರೂರ ಹೇಳಿಕೆಗೆ ಕಾಂಗ್ರೆಸ್‌ ನಾಯಕ ವೇಣುಗೋಪಾಲ ಎಚ್ಚರಿಕೆಜೈಲಿನಲ್ಲಿದ್ದ ಪ್ರಿಯಕರನ ಭೇಟಿಗೆ ಬಂದ ಅಪ್ರಾಪ್ತ ಬಾಲಕಿಯ ಜೇಬಿನಲ್ಲಿ ಸಿಕ್ಕಿತು 10 ಜೀವಂತ ಗುಂಡುಗಳು….!ಭಾರತದಲ್ಲಿ ʼಏಜ್ ವೆರಿಫಿಕೇಷನ್ʼ ಫೀಚರ್‌ ಪರೀಕ್ಷೆಗೆ ಮುಂದಾದ ವಾಟ್ಸ್ಆ್ಯಪ್‌ವಿದೇಶಿ ಉದ್ಯೋಗದ ಆಮಿಷ ; ಪೋರ್ಚುಗಲ್‌ಗೆ ಹೋದ ಭಾರತದ ಯುವತಿ ಬಿಯರ್ ಶಾಪ್‌ ಮಾಲೀಕನಿಗೆ ಮಾರಾಟ….?!