Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಸ್ತೆ ಕಾಮಗಾರಿ ಗುಣಮಟ್ಟದ ಬಗ್ಗೆ ರಾತ್ರಿಯೇ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ಶಾಸಕರು

ಖಾನಾಪುರ : ಖಾನಾಪುರ ಪಟ್ಟಣದಲ್ಲಿ ಸುಮಾರು 14 ಕೋಟಿ ರೂ. ರಸ್ತೆ ಕಾಮಗಾರಿಗಳ ಪ್ರಗತಿಯನ್ನು ಖುದ್ದಾಗಿ ಪರಿಶೀಲಿಸಲು ಶಾಸಕ ವಿಠಲರಾವ್‌ ಅಚ್ಚರಿಯ ಭೇಟಿ ನೀಡಿದರು.

ಜನಸಾಮಾನ್ಯರಿಗೆ ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ಕಾಳಜಿ ವಹಿಸಿರುವ ಶಾಸಕರು, ಕಾಮಗಾರಿಗಳ ಗುಣಮಟ್ಟ, ವೇಗ ಮತ್ತು ಸುರಕ್ಷತಾ ಕ್ರಮಗಳನ್ನು ಖಾತರಿಪಡಿಸಿಕೊಳ್ಳಲು ಈ ಭೇಟಿ ನೀಡಿದರು. ಅವರು ಕಾಮಗಾರಿ ಸ್ಥಳಗಳಲ್ಲಿ ಕೆಲಸದ ಪ್ರಗತಿಯನ್ನು ಗಮನಿಸಿ, ಕಾಮಗಾರಿಗಳು ನಿಗದಿತ ಸಮಯಕ್ಕೆ ಪೂರ್ಣಗೊಳ್ಳುವಂತೆ ಮತ್ತು ಗುಣಮಟ್ಟದಲ್ಲೂ ಯಾವುದೇ ರಾಜಿ ಆಗದಂತೆ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಅಧಿಕಾರಿಗಳೊಂದಿಗೆ ಚರ್ಚಿಸಿದ ಶಾಸಕರು, ಸಾರ್ವಜನಿಕರಿಗೆ ಯಾವುದೇ ಅಡಚಣೆಯಾಗದಂತೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಮತ್ತು ರಾತ್ರಿ ವೇಳೆ ಕೆಲಸ ಮಾಡುವ ಕಾರ್ಮಿಕರ ಸುರಕ್ಷತೆ ಮತ್ತು ಸಂಚಾರ ನಿರ್ವಹಣೆಗೆ ಗಮನ ನೀಡಲು ಸೂಚಿಸಿದರು. ಖಾನಾಪುರ ಪಟ್ಟಣದ ಅಭಿವೃದ್ಧಿಗೆ ರಸ್ತೆ ಕಾಮಗಾರಿ ಅತ್ಯಗತ್ಯ ಎಂದು ಹೇಳಿದ ಅವರು, ಸುಗಮ ಸಂಚಾರ ಕಲ್ಪಿಸುವುದು ತಮ್ಮ ಆದ್ಯತೆಯಾಗಿದೆ ಎಂದು ತಿಳಿಸಿದರು. ಶಾಸಕರ ಈ ಕ್ರಮವನ್ನು ನಾಗರಿಕರು ಪ್ರಶಂಸಿಸಿದ್ದು, ಮಧ್ಯರಾತ್ರಿಯಲ್ಲಿ ಕಾಮಗಾರಿಗಳನ್ನು ಪರಿಶೀಲಿಸಿದ ಅವರ ಜನಪರ ನಿಲುವನ್ನು ಸ್ವಾಗತಸಿದ್ದಾರೆ. ಈ ಸಂದರ್ಭದಲ್ಲಿ ಸಂಬಂಧಿತ ಇಂಜಿನಿಯರ್‌ಗಳು, ಗುತ್ತಿಗೆದಾರರು ಮತ್ತು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು. ಈ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಂಡು ಖಾನಾಪುರ ಪಟ್ಟಣದ ಜನರಿಗೆ ಅನುಕೂಲವಾಗುವ ನಿರೀಕ್ಷೆಯಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆಕಾನೂನು ವಿದ್ಯಾರ್ಥಿಗಳು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು: ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆಖ್ಯಾತ ನಟ ದರ್ಶನ್ ಗೆ ಇನ್ನೊಂದು ವರ್ಷ ಜಾಮೀನು ಇಲ್ಲ : ಸುಪ್ರೀಂ ಕೋರ್ಟ್ಸಿದ್ದಾಪುರ : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ ; ಜನಗಣತಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಶಿಕ್ಷಕಿ ಸಾವುಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ದಾರುಣ ಸಾವುಒಂದೇ ಸಲ 224 ವಿಧಾನ ಸಭೆ ಸ್ಥಾನ ಗೆದ್ದು ಸಿಎಂ ಆಗುತ್ತೇನೆ ಎಂದಿದ್ದ ನೀಲಣ್ಣನವರಿಗೆ ಅಧಿಕಾರಿಗಳಿಂದ ಶಾಕ್ ..!ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆಗೆ 100ಕ್ಕೂ ಹೆಚ್ಚು ಮಂದಿ ಸಾವುಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ