E-PAPER
13 Nov 2026, 08:05:15 AM|
Gold₹14084/gGold24K ₹14,084/g - 22K ₹12,899/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬೆಳಗಾವಿ ಆರ್.ಎಲ್.ಕಾನೂನು ಮಹಾವಿದ್ಯಾಲಯದಲ್ಲಿ ಅಣಕು ನ್ಯಾಯಾಲಯ ಸ್ಪರ್ಧೆ ಕಾನೂನು ವ್ಯಾಸಂಗಕ್ಕೆ ಅಣಕು ನ್ಯಾಯಾಲಯ ಸ್ಪರ್ಧೆ ಅಡಿಪಾಯ : ಜ್ಯೋತಿ ಎಂ.



ಬೆಳಗಾವಿ : ವಿದ್ಯಾರ್ಥಿಗಳಿಗೆ ಅಣಕು ನ್ಯಾಯಾಲಯ ಸ್ಪರ್ಧೆ ಶೈಕ್ಷಣಿಕ ಚಟುವಟಿಕೆಗಿಂತ ಹೆಚ್ಚಿನದ್ದಾಗಿದೆ. ಇದು ಕಾನೂನು ಶಿಕ್ಷಣಕ್ಕೆ ಅಡಿಪಾಯವಾಗಿದೆ ಎಂದು ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಜ್ಯೋತಿ ಎಂ.ಹೇಳಿದರು.

ಶುಕ್ರವಾರ ನಗರದ ಕೆಎಲ್ ಎಸ್ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ 16 ನೇ ಎಂ.ಕೆ.ನಂಬಿಯಾರ್ ಸ್ಮಾರಕ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.
ಅಣಕು ನ್ಯಾಯಾಲಯ ಸ್ಪರ್ಧೆ ಕೇವಲ ಕಾನೂನು ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗಿರದೆ ಭವಿಷ್ಯದ ಜೀವನಕ್ಕೂ ಅತ್ಯಂತ ಮಹತ್ವದಾಗಿದೆ. ವಾದವು ಚಿಕ್ಕದಾಗಿರಬೇಕು, ಸಂಕ್ಷಿಪ್ತವಾಗಿರಬೇಕು. ಕೆಲವೇ ಪದಗಳಲ್ಲಿ ಹೇಳಬೇಕು ಮತ್ತು ಸಂಕೀರ್ಣ ಸಮಸ್ಯೆಗಳನ್ನು ವ್ಯಕ್ತಪಡಿಸುವ ಸಾಮರ್ಥ್ಯ ಇರಬೇಕು ಎಂದು ಅವರು ಸಲಹೆ ನೀಡಿದರು.

ನ್ಯಾಯಾಲಯದ ಶಿಷ್ಟಾಚಾರಗಳು ಪೀಠದ ಮೇಲಿನ ಗೌರವವೂ ಅಷ್ಟೇ ಮುಖ್ಯ ಎಂದು ಅವರು ಹೇಳಿದರು.

ನ್ಯಾಯವಾದಿ ಮತ್ತು ಕೆಎಲ್ಎಸ್ ಸೊಸೈಟಿ ಕಾರ್ಯದರ್ಶಿ ಎಸ್.ವಿ.ಗಣಾಚಾರಿ ಮಾತನಾಡಿ, ಅಣಕು ನ್ಯಾಯಾಲಯ ಸ್ಪರ್ಧೆ ಕಾನೂನು ಶಿಕ್ಷಣದಲ್ಲಿ ಬಹಳ ಮುಖ್ಯವಾದ ಪಾತ್ರ ವಹಿಸುತ್ತದೆ. ಏಕೆಂದರೆ ಪಠ್ಯ ಪುಸ್ತಕವು ನಮಗೆ ಸೈದ್ಧಾಂತಿಕ ವಿಷಯವನ್ನು ಮಾತ್ರ ಕಲಿಸುತ್ತದೆ. ಅದರೆ, ಅಣಕು ನ್ಯಾಯಾಲಯ ಸ್ಪರ್ಧೆ ವಿದ್ಯಾರ್ಥಿಗಳಿಗೆ ಕಾನೂನು ಶಿಕ್ಷಣದ ಪ್ರಾಯೋಗಿಕ ಶಿಕ್ಷಣವನ್ನು ಅಭ್ಯಾಸ ಮಾಡಲು ವೇದಿಕೆಯನ್ನು ಒದಗಿಸುತ್ತದೆ. ಇದು ವಿದ್ಯಾರ್ಥಿಗಳು ಸಂಶೋಧನೆ, ವಕಾಲತ್ತು, ಸಾರ್ವಜನಿಕವಾಗಿ ಮಾತನಾಡುವ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ
ಕೆಎಲ್ಎಸ್ ಸೊಸೈಟಿ ಅಧ್ಯಕ್ಷ ಪ್ರದೀಪ್ ಎಸ್. ಸಾವ್ಕರ್ ಮಾತನಾಡಿ, ವಿದ್ಯಾರ್ಥಿಯ ವೃತ್ತಿಜೀವನದಲ್ಲಿ ವಾದ ಮಂಡನೆ ಬಹಳ ಮುಖ್ಯ. ಅಣಕು ನ್ಯಾಯಾಲಯ ಸ್ಪರ್ಧೆಯಲ್ಲಿ ಭಾಗವಹಿಸುವುದು, ಜತೆಗೆ ಇಂಟರ್ನ್‌ಶಿಪ್ ಕಾನೂನು ವಿದ್ಯಾರ್ಥಿಗಳಿಗೆ ದೀರ್ಘಾವಧಿಯಲ್ಲಿ ಸಹಾಯ ಮಾಡುತ್ತದೆ. ಇದು ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡುತ್ತದೆ. ವಿದ್ಯಾರ್ಥಿಗಳನ್ನು ಓದಲು, ಸಂಶೋಧನೆ ಮಾಡಲು ಮತ್ತು ಕೆಲಸ ಮಾಡಲು ಪ್ರೇರಣೆ ಉಂಟುಮಾಡುತ್ತದೆ. ವಿದ್ಯಾರ್ಥಿಗಳು ನ್ಯಾಯಾಲಯದ ವಿಚಾರಣೆಗಳಿಗೆ ಹಾಜರಾಗಲು ಉಪಯುಕ್ತವಾಗುತ್ತದೆ ಎಂದು ಹೇಳಿದರು.

ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಮತ್ತು ನ್ಯಾಯವಾದಿ ಆರ್.ಎಸ್. ಮುತಾಲಿಕ್ ಅವರು ಕಾಲೇಜಿನ ಪರಂಪರೆ ಮತ್ತು ವಿದ್ಯಾರ್ಥಿಗಳ ಸಾಧನೆಗಳ ಬಗ್ಗೆ ವಿವರಿಸಿದರು.

ಅಣಕು ನ್ಯಾಯಾಲಯ ಸ್ಪರ್ಧೆಯ ಸಂಯೋಜಕಿ ಹಾಗೂ ಪ್ರಾಧ್ಯಾಪಕಿ
ಪ್ರೊ.ಅಶ್ವಿನಿ ಪರಬ್ ಅವರು ಸ್ಪರ್ಧೆಯ ನಿಯಮದ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿದರು. ವಿಜೇತರಿಗೆ ರೂ.50,000 ನಗದು ಮತ್ತು ಟ್ರೋಫಿ, ರನ್ನರ್ ಅಪ್ ತಂಡಕ್ಕೆ ಟ್ರೋಫಿ ಮತ್ತು ರೂ.30,000 ನಗದು ಬಹುಮಾನ, ಅತ್ಯುತ್ತಮ ಪುರುಷ ಸ್ಪರ್ಧಿಗೆ ರೂ.
15,000 ರೂಪಾಯಿ ನಗದು, ಅತ್ಯುತ್ತಮ ಮಹಿಳಾ ಸ್ಪರ್ಧಿಗೆ ರೂ.15,000 ರೂಪಾಯಿ ನಗದು, ಅತ್ಯುತ್ತಮ ಸ್ಮಾರಕ ಪ್ರಶಸ್ತಿ ಅಥವಾ ರೂ.15,000 ರೂಪಾಯಿ ನಗದು, ಮತ್ತು ಅತ್ಯುತ್ತಮ ಸಂಶೋಧಕರಿಗೆ ರೂ.10,000 ರೂಪಾಯಿ ನಗದು ಮತ್ತು ಅತ್ಯುತ್ತಮ ಸ್ಪರ್ಧಿಗೆ ಅಶೋಕ್ ಎನ್ ಪೋತದಾರ ಹೆಸರಿನ ಬೆಸ್ಟ್ ಮೂಟರ್ ಸ್ಪರ್ಧಿಗೆ ರೂ. 6,050 ನಗದು ಬಹುಮಾನ ನೀಡಲಾಗುತ್ತದೆ.

ಈ ಸಮಾರಂಭವನ್ನು ಕಾಲೇಜಿನ ಮೂಟ್ ಕೋರ್ಟ್ ವಿಭಾಗ ಆಯೋಜಿಸಿತ್ತು. ಕೆಎಲ್ಎಸ್ ಸೊಸೈಟಿ ಚೇರ್ಮನ್ ಹಾಗೂ ನ್ಯಾಯವಾದಿ ಎ.ಕೆ.ಟಗಾರೆ, ಕಾರ್ಯದರ್ಶಿ ವಿ.ಎಂ. ದೇಶಪಾಂಡೆ, ಪ್ರಾಚಾರ್ಯ ಡಾ. ಎ.ಎಚ್.ಹವಾಲ್ದಾರ್, ಅಣಕು ನ್ಯಾಯಾಲಯ ಸ್ಪರ್ಧೆಯ ಸಂಯೋಜಕಿ ಸುನಿಧಿ ಜೋಶಿ, ಕಾಲೇಜಿನ ವಿದ್ಯಾರ್ಥಿ ಪ್ರಧಾನ ಕಾರ್ಯದರ್ಶಿ ತನ್ಮಯಿ ಸರಾಫ್ ಮತ್ತು ಮಹಿಳಾ ಪ್ರತಿನಿಧಿ ಚಂದ್ರಲೇಖಾ ಪಾಟೀಲ, ಎಲ್ಲಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರ್ಕಂಡೇಯ ನದಿಯಲ್ಲಿ  ಮರ್ಡರ್..?ಬೆಳಗಾವಿಯಲ್ಲಿ ಹೊಸ ಶೋರೂಮ್ ಮೂಲಕ ಕರ್ನಾಟಕದಲ್ಲಿ ತನ್ನ ಅಸ್ತಿತ್ವ ವಿಸ್ತರಿಸಿದ PuREPowerನೀಲಿ ಡ್ರಮ್ ಕೊಲೆ ಪ್ರಕರಣ : ಪತ್ನಿ ಮುಸ್ಕಾನ್‌, ಪ್ರಿಯಕರ ಸಾಹಿಲ್‌ಗೆ ಮರಣದಂಡನೆ ಶಿಕ್ಷೆRCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ