Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಭಾರತಕ್ಕೆ ಬರ್ತಾರಂತೆ ಮೋದಿ ಗೆಳೆಯ !

ವಾಷಿಂಗ್ಟನ್: ಡೊನಾಲ್ಡ್‌ ಟ್ರಂಪ್‌ ಅವರು ಅಮೆರಿಕದ 47ನೇ ಅಧ್ಯಕ್ಷರಾಗಿ (ಜ.20-ಸೋಮವಾರ) ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದು, ಟ್ರಂಪ್‌ ಪದಗ್ರಹಣ ಸಮಾರಂಭಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈ ಮಧ್ಯೆ ಅಧಿಕಾರ ಸ್ವೀಕರಿಸುತ್ತಿದ್ದಂತೇ ಡೊನಾಲ್ಡ್‌ ಟ್ರಂಪ್‌ ಅವರು ಚೀನಾ ಮತ್ತು ಭಾರತ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೀಗ ದಟ್ಟವಾಗಿದೆ.ಬೀಜಿಂಗ್‌ನೊಂದಿಗಿನ ಸಂಬಂಧವನ್ನು ಬಲಪಡಿಸುವ ಪ್ರಯತ್ನದ ಭಾಗವಾಗಿ, ಅಧಿಕಾರ ವಹಿಸಿಕೊಂಡ ನಂತರ ಚೀನಾಕ್ಕೆ ಪ್ರಯಾಣಿಸಲು ಡೊನಾಲ್ಡ್‌ ಟ್ರಂಪ್‌ ಮುಂದಾಗಿದ್ದಾರೆ.

ಇದೇ ವೇಳೆ ಭಾರತಕ್ಕೆ ಭೇಟಿ ನೀಡುವ ಕುರಿತು ಸಲಹೆಗಾರರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಅಮೆರಿಕದ ಮಾಧ್ಯಮಗಳು ವರದಿ ಮಾಡಿವೆ."ಡೊನಾಲ್ಡ್ ಟ್ರಂಪ್ ಅವರು ಅಧ್ಯಕ್ಷರಾಗಿ ಆಯ್ಕೆಯಾದ ನಂತರ, ಚೀನಾಕ್ಕೆ ಪ್ರಯಾಣಿಸಲು ಬಯಸಿದ್ದಾರೆ.ಕ್ಸಿ ಜಿನ್‌ಪಿಂಗ್ ಅವರೊಂದಿಗಿನ ತಮ್ಮ ಸ್ನೇಹ ಸಂಬಂಧವನ್ನು ಮತ್ತಷ್ಟು ಗಾಢವಾಗಿಸಲು ಮುಂದಾಗಿರುವ ಟ್ರಂಪ್‌, ಚೀನಾ ಪ್ರವಾಸದ ಬಳಿಕ ಭಾರತದತ್ತ ಮುಖ ಮಾಡುವ ಸಾಧ್ಯತೆ ಇದೆ.." ಎಂದು "ವಾಲ್ ಸ್ಟ್ರೀಟ್ ಜರ್ನಲ್" ವರದಿ ಮಾಡಿದೆ."ಟ್ರಂಪ್ ಅವರು ಭಾರತಕ್ಕೆ ಸಂಭವನೀಯ ಪ್ರವಾಸದ ಬಗ್ಗೆ ಸಲಹೆಗಾರರೊಂದಿಗೆ ಮಾತನಾಡಿದ್ದಾರೆ. ಕಳೆದ ತಿಂಗಳು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.
ಜೈಶಂಕರ್ ಅವರ ಅಮೆರಿಕ ಪ್ರವಾಸದ ವೇಳೆ ಈ ಕುರಿತು ಪ್ರಾಥಮಿಕ ಹಂತದ ಮಾತುಕತೆಗಳು ನಡೆದಿವೆ.." ಎಂದು "ವಾಲ್ ಸ್ಟ್ರೀಟ್ ಜರ್ನಲ್" ವರದಿಯಲ್ಲಿ ಉಲ್ಲೇಖಿಸಲಾಗಿದೆ.ಭಾರತವು, ಆಸ್ಟ್ರೇಲಿಯಾ, ಜಪಾನ್ ಮತ್ತು ಅಮೆರಿಕವನ್ನು ಒಳಗೊಂಡ ಕ್ವಾಡ್ ಶೃಂಗಸಭೆಯನ್ನು ಆಯೋಜಿಸಲು ಸಿದ್ಧವಾಗಿದೆ. ಈ ಸಭೆಯಲ್ಲಿ ಭಾಗವಹಿಸಲು ಡೊನಾಲ್ಡ್‌ ಟ್ರಂಪ್‌ ಭಾರತಕ್ಕೆ ಆಗಮಿಸುವುದು ಖಚಿತವಾಗಿದೆ. ಅದೇ ರೀತಿ ಕ್ವಾಡ್‌ ಶೃಂಗಸಭೆಗೂ ಮೊದಲು ನಡೆಯಲಿರುವ ಶ್ವೇತಭವನದ ಸಭೆಗೆ, ಟ್ರಂಪ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸುವ ಸಾಧ್ಯತೆಯೂ ಇದೆ.ಸದ್ಯ ಟ್ರಂಪ್‌ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಭರದ ಸಿದ್ಧತೆಗಳು ನಡೆಯುತ್ತಿದ್ದು, ಪ್ರಥಮ ಮಹಿಳೆ ಮೆಲಾನಿಯಾ ಮತ್ತು ಮಗ ಬ್ಯಾರನ್ ಅವರೊಂದಿಗೆ ವಿಶೇಷ ವಿಮಾನದಲ್ಲಿ ಡಲ್ಲೆಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಡೊನಾಲ್ಡ್‌ ಟ್ರಂಪ್ ಬಂದಿಳಿದಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ