Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮೋದಿ ಉತ್ತರಾಧಿಕಾರಿಯನ್ನು ಮೋದಿ, ಬಿಜೆಪಿಯೇ ನಿರ್ಧರಿಸಬೇಕು: ಭಾಗವತ್ ಚೆನ್ನೈನ ಆರ್‌ಎಸ್‌ಎಸ್‌ ಶತಮಾನೋತ್ಸವ ಸಮಾರಂಭ

ಚೆನ್ನೈ: ‘ನರೇಂದ್ರ ಮೋದಿ ನಂತರ ಬಿಜೆಪಿಯಲ್ಲಿ ಮುಂದಿನ ಪ್ರಧಾನಿ ಯಾರು ಎಂಬುದನ್ನು ನಿರ್ಧರಿಸುವುದು ಪ್ರಧಾನಿ ಮತ್ತು ಬಿಜೆಪಿಯ ಜವಾಬ್ದಾರಿ’ ಎಂದು ರಾಷ್ದ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್‌ ಹೇಳಿದ್ದಾರೆ.

ನರೇಂದ್ರ ಮೋದಿ ಅವರ ಉತ್ತರಾಧಿಕಾರಿ ಯಾರು ಎಂಬುದರ ಕುರಿತ ಚರ್ಚೆಯಲ್ಲಿ ಭಾಗಿಯಾಗಲು ನಿರಾಕರಿಸಿದ ಅವರು, ‘ಕೆಲವು ಪ್ರಶ್ನೆಗಳು ನನ್ನ ವ್ಯಾಪ್ತಿಯಿಂದ ಹೊರಗಿವೆ. ಆದ್ದರಿಂದ, ಅವುಗಳ ಬಗ್ಗೆ ನಾನು ಏನೂ ಹೇಳುವುದಿಲ್ಲ. ನಾನು ಶುಭ ಹಾರೈಸುವುದನ್ನು ಬಿಟ್ಟು ಬೇರೇನೂ ಮಾಡಲಾರೆ. ಮೋದಿ ಅವರ ನಂತರ ಯಾರು? ಎಂಬುದು ಬಿಜೆಪಿ ಮತ್ತು ಮೋದಿ ಅವರೇ ನಿರ್ಧರಿಸಬೇಕು’ ಎಂದು ಭಾಗವತ್ ಸ್ಪಷ್ಟಪಡಿಸಿದರು.

ಆರ್‌ಎಸ್‌ ಎಸ್‌ ಶತಮಾನೋತ್ಸವದ ಅಂಗವಾಗಿ ಮಂಗಳವಾರ ಇಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೇಳಿಬಂದ ‘ಮೋದಿ ನಂತರ ಮುಂದಿನ ಬಿಜೆಪಿ ಪ್ರಧಾನಿ ಯಾರು’ ಎಂಬ ಪ್ರಶ್ನೆಗೆ ಭಾಗವತ್ ಈ ರೀತಿ ಪ್ರತಿಕ್ರಿಸಿದರು.

ಭಾಗವತ್ ಅವರು, ನಾಲ್ಕು ತಿಂಗಳಲ್ಲಿ ಎರಡನೇ ಬಾರಿ ಹೀಗೆ ‘75 ವರ್ಷ ದಾಟಿದ ನಾಯಕರು ನಿವೃತ್ತಿಯಾಗುವ ಬಿಜೆಪಿಯ ‘ಅಲಿಖಿತ ನಿಯಮ’ ಮತ್ತು ಮೋದಿ ನಂತರ ಯಾರು ಎಂಬ ವಿಷಯಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

ಆಗಸ್ಟ್‌ನಲ್ಲಿ, ಭಾಗವತ್ ಅವರು ‘ತಾವು ಅಥವಾ ಯಾರೂ 75 ನೇ ವಯಸ್ಸಿನಲ್ಲಿ ನಿವೃತ್ತರಾಗಬಾರದು’ ಎಂದು ಎಂದಿಗೂ ಪ್ರತಿಪಾದಿಸಿಲ್ಲ ಎಂದು ಹೇಳಿದ್ದರು. ಈ ಹಿಂದೆ ‘ವಿಭಿನ್ನ ಸಂದರ್ಭದಲ್ಲಿ’ ನೀಡಿದ ಹೇಳಿಕೆಗಳನ್ನು ಸ್ಪಷ್ಟಪಡಿಸಿದ್ದರು. ನಂತರ, ಈ ಸೆಪ್ಟೆಂಬರ್‌ನಲ್ಲಿ ಮೋದಿ ಅವರಿಗೆ 75 ವರ್ಷ ತುಂಬಿದ ನಂತರ ನಿವೃತ್ತಿಯಾಗುವ ಕುರಿತ ಚರ್ಚೆ ಮಹತ್ವ ಪಡೆದುಕೊಂಡಿತು. ನಂತರ ಬಿಜೆಪಿ, ‘ನಿರ್ದಿಷ್ಟ ವಯಸ್ಸಿನಲ್ಲಿ ನಿವೃತ್ತರಾಗಬೇಕೆಂದು ಹೇಳುವ ಯಾವುದೇ ನಿಯಮ ಪಕ್ಷದಲ್ಲಿ ಇಲ್ಲ’ ಎಂದು ಸ್ಪಷ್ಟಪಡಿಸಿತ್ತು.

’ಭಕ್ತರೇ ದೇವಾಲಯ ನಿರ್ವಹಿಸಬೇಕು’

ನಂತರ ಕಾರ್ಯಕ್ರಮದಲ್ಲಿ ನಡೆದ ಸಂವಾದದಲ್ಲಿ ‘ಭಕ್ತರೇ ದೇವಾಲಯಗಳನ್ನು ನಿರ್ವಹಿಸಬೇಕೆಂಬುದು ಜನರು ಮತ್ತು ನ್ಯಾಯಾಂಗದ ಒಮ್ಮತದ ಅಭಿಪ್ರಾಯವಾಗಿದೆ. ಆದರೆ ಪ್ರಸ್ತುತ ದೇವಾಲಯಗಳನ್ನು ಸರ್ಕಾರ ನಿರ್ವಹಿಸುತ್ತಿದೆ’ ಎಂದು ಭಾಗವತ್‌ ಹೇಳಿದರು.

‘ಖಾಸಗಿ ವ್ಯಕ್ತಿಗಳು ಕೆಲವು ದೇವಾಲಯಗಳನ್ನು ಚೆನ್ನಾಗಿ ನಿರ್ವಹಿಸುತ್ತಿದ್ದಾರೆ. ಅದೇ ರೀತಿ ಕೆಲವು ಸರ್ಕಾರಗಳೂ ದೇವಾಲಯಗಳನ್ನು ಚೆನ್ನಾಗಿ ನಿರ್ವಹಿಸುತ್ತಿವೆ. ಈ ಸಮಸ್ಯೆಯನ್ನು ನಿಭಾಯಿಸಲು ಒಂದು ಸಾಧನ ಬೇಕು. ಅದೇ ಅಖಿಲ ಭಾರತ ಸಮಿತಿ ಪ್ರಾಂತೀಯ ಸಮಿತಿ ಜಿಲ್ಲಾ ಸಮಿತಿ ಮತ್ತು ಸ್ಥಳೀಯ ಸಮಿತಿಗಳ ರಚನೆ’ ಎಂದು ಭಾಗವತ್ ಹೇಳಿದರು.

‘ಒಂದು ಸಾರಿ ಈ ಸಾಧನ ಸಿದ್ಧವಾದರೆ ನಂತರ ದೇವಾಲಯಗಳನ್ನು ನಿರ್ವಹಿಸುವುದು ಸರ್ಕಾರವೋ ಭಕ್ತರೋ ಎಂಬ ಪ್ರಶ್ನೆಗಳಿಗೆ ಉತ್ತರ ಸಿಗುತ್ತದೆ. ಆದರೆ ಭಕ್ತರು ದೇವಾಲಯಗಳನ್ನು ನಿರ್ವಹಣೆ ಮಾಡಬೇಕೆಂಬುದಕ್ಕೆ ಸಾಮಾನ್ಯ ಒಮ್ಮತವಿದೆ. ನಾವು ಈ ಕುರಿತು ಹೆಚ್ಚು ಕೆಲಸ ಮಾಡಬೇಕು’ ಎಂದು ಅವರು ಹೇಳಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಹುಕೋಟಿ ವಂಚನೆ : ನೀಲಣ್ಣವರ, ಆಪ್ತರ ನಿವಾಸಗಳ ಮೇಲೆ ಇಡಿ ದಾಳಿSIR : ಗಣತಿ ನಮೂನೆ ಸಲ್ಲಿಸಲು 17 ರವರೆಗೆ ಅವಕಾಶಈ ನಿಗೂಢ ಬಾವಿಯಲ್ಲಿ ಮತ್ತೆ ಅಚ್ಚರಿ ; ಸಮುದ್ರದ ಅಲೆಯಂತೆ ತನ್ನಷ್ಟಕ್ಕೆ ತಾನೇ ಏರಿಳಿಯುವ ನೀರು..!ವಿಭಾಗೀಯ ಕಚೇರಿಗಳನ್ನು ಬೆಳಗಾವಿಯಲ್ಲಿ ಸ್ಥಾಪಿಸಲು ಕ್ರಮ ಕೈಕೊಂಡವರು ಅರಸುಮದುವೆ ಮನೆಯಲ್ಲಿ ಪೊಲೀಸ್ ಅಧಿಕಾರಿ ಹತ್ಯೆ ; ಹೆಸರು ಬದಲಿಸಿಕೊಂಡು ನಕಲಿ ವೈದ್ಯನಾಗಿ ಬದುಕಿದ್ದ ಆರೋಪಿ 28 ವರ್ಷಗಳ ನಂತರ ಸೆರೆ…!ಕರ್ನಾಟಕದ 4 ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಮುನ್ಸೂಚನೆ ; ಆರೆಂಜ್‌ ಅಲರ್ಟ್‌ ಘೋಷಣೆಪುತ್ರಿಯರಿಗಾಗಿ ಜೀವನ ಮುಡಿಪಾಗಿಟ್ಟಿದ್ದ ತಂದೆ ವೃದ್ಧಾಶ್ರಮದಲ್ಲಿ ನಿಧನ ; ₹5100 ಕಳುಹಿಸಿ ವಿಡಿಯೊ ಕಾಲ್‌ನಲ್ಲಿ ಕೊನೆ ವಿದಾಯ ಹೇಳಿದ ಪುತ್ರಿಯರು...!ಯುವಜನತೆ  ಪಠ್ಯ ಮತ್ತು ಪಠ್ಯೇತರ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ವ್ಯಕ್ತಿತ್ವ ರೂಪಿಸಿಕೊಳ್ಳಿ : ಕುಲಪತಿ ತ್ಯಾಗರಾಜಗುರಿ, ಶಿಸ್ತು ಮತ್ತು ಸಾಧನೆಯಿಂದ ಯಶಸ್ಸು ಸಾಧ್ಯ: ಡಾ. ಸಿದ್ದು ಹುಲ್ಲೊಳ್ಳಿ  ಲಕ್ಷ್ಮೀ ಇದ್ದರೆ DK ಸಂಪುಟಕ್ಕೆ ಶೋಭೆ:  ಹೆಬ್ಬಾಳ್ಕರ್ ಯಾಕೆ ಸಂಪುಟಕ್ಕೆ ಅತ್ಯಂತ ಅವಶ್ಯಕ ಗೊತ್ತೇ ? ಬೆಳಗಾವಿಗೆ ಅಭಿವೃದ್ಧಿಯ ಹೊಳೆಯನ್ನೇ ಹರಿಸಿದ್ದ ಮಹಾನಾಯಕಿ