Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮೊಹರಂ ಹಬ್ಬ: ಮದ್ಯ ಮಾರಾಟ ನಿಷೇಧ

 

ಬೆಳಗಾವಿ :
ನಗರದಲ್ಲಿ ಮೊಹರಂ ಹಬ್ಬವನ್ನು ಜು.29 ರಂದು ಆಚರಿಸಲಿರುವ ಹಿನ್ನಲೆಯಲ್ಲಿ ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮವಾಗಿ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ಸಲುವಾಗಿ ಜು. 30 ಬೆಳಿಗ್ಗೆ 6 ಗಂಟೆಯವರೆಗೆ ಮದ್ಯದ ಅಂಗಡಿ, ವೈನ್ ಶಾಪ್, ಬಾರ್‌ಗಳಲ್ಲಿ, ಕ್ಲಬ್‌ಗಳಲ್ಲಿ ಮತ್ತು ಹೊಟೇಲ್‌ಗಳಲ್ಲಿ ಮದ್ಯ ಮಾರಾಟ ಮತ್ತು ಮದ್ಯ ಸಾಗಣಿಕೆಯನ್ನು ನಿಷೇಧಿಸಿ ಬೆಳಗಾವಿ ನಗರ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಹಾಗೂ ಪೊಲೀಸ್ ಆಯುಕ್ತ ಎಸ್. ಎನ್. ಸಿದ್ಧರಾಮಪ್ಪ ಆದೇಶ ಹೊರಡಿಸಿರುತ್ತಾರೆ.

ಮದ್ಯದ ಅಂಗಡಿಗಳನ್ನು ಹಾಗೂ ಕೆಎಸ್‌ಬಿಸಿಎಲ್ ಡಿಪೋಗಳನ್ನು,ಹೊಟೇಲ್‌ಗಳಲ್ಲಿರುವ ಬಾರ್‌ಗಳು ಹಾಗೂ ಎಲ್ಲ ಅಬಕಾರಿ ಸನ್ನದು ಅಂಗಡಿಗಳನ್ನು ಮುಚ್ಚಿ ಸೀಲ್ ಹಾಕತಕ್ಕದ್ದು, ಇದಲ್ಲದೇ ಪರಿಸ್ಥಿತಿಗೆ ಅನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದುಕೊಂಡು ಬರುವ ಹಿತದೃಷ್ಟಿಯಿಂದ ಅಬಕಾರಿ ಇನ್ಸ್ಪೆಕ್ಟರ್ ಹಾಗೂ ಉಪ ವಿಭಾಗ ಅಬಕಾರಿ ಅಧೀಕ್ಷಕರು, ಕರ್ನಾಟಕ ಅಬಕಾರಿ ಕಾಯ್ದೆ ೧೯೬೫ರ ಕಲಂ ೨೧(೨) ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ ೧೯೬೩ ಕಲಂ ೩೧ ರ ಪ್ರಕಾರ ಅವಶ್ಯಕತೆ ಕಂಡುಬಂದಲ್ಲಿ ಶಾಂತಿಪಾಲನೆಗಾಗಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಳಗಾವಿ ನಗರ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಹಾಗೂ ಪೊಲೀಸ್ ಆಯುಕ್ತ ಎಸ್. ಎನ್. ಸಿದ್ಧರಾಮಪ್ಪ ಆದೇಶದಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ