Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದೇವರ ನಾಡಿಗೆ ಮುಂಗಾರು ಪ್ರವೇಶ

ನವದೆಹಲಿ: ದೇಶದ ಕೃಷಿ ಚಟುವಟಿಕೆ ಮತ್ತು ಆರ್ಥಿಕತೆಯ ಜೀವನಾಡಿಯಾಗಿರುವ ಮುಂಗಾರು ಮಾರುತಗಳು ಗುರುವಾರ ದೇಶದ ದಕ್ಷಿಣದ ತುತ್ತತುದಿಯ ರಾಜ್ಯವಾದ ಕೇರಳದ ಕರಾವಳಿ ಮತ್ತು ಈಶಾನ್ಯ ರಾಜ್ಯವನ್ನು ಪ್ರವೇಶಿಸಿದೆ.

ಜೂನ್ - ಸೆಪ್ಟೆಂಬರ್ ಅವಧಿಯಲ್ಲಿ ದೇಶದಲ್ಲಿ ಮಳೆ ಸುರಿಸುವ ಮುಂಗಾರು ಮಾರುತಗಳ ಈ ಬಾರಿ ದೀರ್ಘಕಾಲೀನ ಸರಾಸರಿಗಿಂತ ಹೆಚ್ಚಿ ಮಳೆ ಸುರಿಸಬಹುದು ಎಂದು ಕಳೆದ ತಿಂಗಳು ಹವಾಮಾನ ಇಲಾಖೆ ಶುಭ ಸುದ್ದಿ ನೀಡಿತ್ತು.

ನೈಋತ್ಯ ಮಾನ್ಸೂನ್ ಭಾರತಕ್ಕೆ ಪ್ರಮುಖ ಮಳೆಯನ್ನು ತರುವ ಕಾಲ. ಇದು ದೇಶದ ವಾರ್ಷಿಕ ಮಳೆಯ ಬಹುಪಾಲನ್ನು ಒದಗಿಸುತ್ತದೆ. ಈ ಅವಧಿಯಲ್ಲಿ ಖಾರೀಫ್ ಬೆಳೆಗಳನ್ನು ಹೆಚ್ಚಾಗಿ ಬೆಳೆಯುವುದರಿಂದ ಜೂನ್ ಮತ್ತು ಜುಲೈ ತಿಂಗಳ ಅವಧಿಯ ನೈಋತ್ಯ ಮಾನ್ಸೂನ್ ಅತಿ ಮಹತ್ವದ್ದು ಅಂತಲೇ ಪರಿಗಣಿಸಲಾಗುತ್ತದೆ. ನೈಋತ್ಯದಿಂದ ಬೀಸುವ ಮಾನ್ಸೂನ್ ಸಾಮಾನ್ಯವಾಗಿ ಜೂನ್‌ನಲ್ಲಿ ಆರಂಭವಾಗಿ ಸೆಪ್ಟಂಬರ್ ನಲ್ಲಿ ಕೊನೆಗೊಳ್ಳುತ್ತದೆ.

ಸಾಮಾನ್ಯವಾಗಿ ಮುಂಗಾರು ಮೇ 31- ಜೂ.1ರ ವೇಳೆಗೆ ಕೇರಳ ಪ್ರವೇಶಿಸಲಿದೆ. ಬಳಿಕ ಮುಂದಿನ 5-10 ದಿನಗಳಲ್ಲಿ ದೇಶಾದ್ಯಂತ ವ್ಯಾಪಿಸುವ ನಿರೀಕ್ಷೆಯಿದೆ. ರೆಮಲ್‌ ಚಂಡಮಾರುತ ಬಂದ ಹಿನ್ನೆಲೆಯಲ್ಲಿ ಈಶಾನ್ಯ ಭಾರತದಲ್ಲೂ ಮುಂಗಾರು ಪ್ರವೇಶಿಸಲಿದೆ ಎಂದು ಹೇಳಿದೆ.

ಮುಂಗಾರು ಪೂರ್ವ ಮಳೆಯಿಂದಾಗಿ ಭಾರತದ ಬಹುತೇಕ ಕಡೆ ಮೇ ತಿಂಗಳಲ್ಲಿ ಅತಿವೃಷ್ಟಿಯಾಗಿದ್ದು, ಅಗತ್ಯಕ್ಕಿಂತ ಹೆಚ್ಚು ಮಳೆಯಾಗಿದೆ. ಅದರಲ್ಲೂ ಕೇರಳ ದಲ್ಲಿ ಕಳೆದ ಒಂದು ವಾರದಿಂದ ಭಾರೀ ಮಳೆಯಾಗುತ್ತಿದ್ದು, 20ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ