Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ನೈರುತ್ಯ ಮಾನ್ಸೂನ್ ಮೂರು ದಿನ ತಡವಾಗಿ ಕೊನೆಗೂ ಕೇರಳ ಪ್ರವೇಶ ಮಾಡಿದ್ದು, ಭಾರಿ ಮಳೆ ಸುರಿಸುತ್ತಿದೆ. ಇದರ ಬೆನ್ನಲ್ಲೇ ಇತ್ತ ಕರ್ನಾಟಕದಲ್ಲಿಯೂ ಮುಂಗಾರು ಮಳೆ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇರಳಕ್ಕೆ ಮುಂಗಾರು ಪ್ರವೇಶ ಮಾಡಿದ್ದರಿಂದ ಕರ್ನಾಟಕಕ್ಕೂ ಎರಡ್ಮೂರು ದಿನಗಳಲ್ಲಿ ಮುಂಗಾರು ಮಳೆ ಪ್ರವೇಶಿಸಲಿದ್ದು, ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಜೋರಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ (Karnataka) ಕರಾವಳಿ ಹಾಗೂ ಹಾಗೂ ಮಲೆನಾಡು ಭಾಗಗಳಲ್ಲಿ ಶನಿವಾರದಿಂದ (ಜೂನ್‌ 5ರಿಂದ) ಮಳೆ ಜೋರಾಗಲಿದ್ದು, ಮುಂದಿನ 6 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂಗಾರು ಮಳೆ ವ್ಯಾಪಿಸಲಿದೆ ಎಂದು ಹೇಳಿದೆ.
ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕ ಭಾಗದಲ್ಲಿ ಜೂನ್ 9ರವರೆಗೂ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.

ಕರಾವಳಿಗೆ ಆರೆಂಜ್ ಅಲರ್ಟ್
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜೂನ್‌ 10ರ ವರೆಗೆ ಆರೇಂಜ್‌ ಅಲರ್ಟ್‌ ನೀಡಲಾಗಿದ್ದು, ಭಾರಿ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ. ಮತ್ತು ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ವಿಜಯಪುರ ಹಾಗೂ ಕಲಬುರ್ಗಿ ಜಿಲ್ಲೆಗಳಿಗೆ ಜೂನ್‌ 5ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ನೀಡಲಾಗಿದೆ. ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9 ರವರೆಗೆ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. ಜೂನ್ 5 ರಿಂದ ಜೂನ್‌ 10 ರವರೆಗೆ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಕರಾವಳಿ ಭಾಗದಲ್ಲಿ ವ್ಯಾಪಕ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಕರೆ: ಪ್ರವೀಣ ಗುಡಿಜಗತ್ತಿನ ಆವಿಷ್ಕಾರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರ ಅಪಾರ: ಕುಲಪತಿ ಸಿ. ಎಂ. ತ್ಯಾಗರಾಜ ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆಕೌಶಲ್ಯ ಅಭಿವೃದ್ಧಿ ಯುವಕರ ಭವಿಷ್ಯದ ಕೀಲಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಕಾರ್ಯ ಸ್ತುತ್ಯಾರ್ಹ : ಪ್ರೊ. ಹೊಸಕೋಟಿಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿನ್ಯಾನೋ ಜಾಥಾ-2026' ಕಾರ್ಯಕ್ರಮ