Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಾಲೈದು ದಿನಗಳಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ: ಹವಾಮಾನ ಇಲಾಖೆ

ನವದೆಹಲಿ: ಮುಂದಿನ ನಾಲೈದು ದಿನಗಳಲ್ಲಿ ನೈಋತ್ಯ ಮಾನ್ಸೂನ್ ಕೇರಳಕ್ಕೆ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ತಿಳಿಸಿದೆ.

ಮೇ 27ರ ವೇಳೆಗೆ ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಈ ಹಿಂದೆಯೇ ಮುನ್ಸೂಚನೆ ನೀಡಿತ್ತು.

ಸಾಮಾನ್ಯವಾಗಿ ನೈಋತ್ಯ ಮಾನ್ಸೂನ್ ಜೂನ್ 1ರ ವೇಳೆಗೆ ಕೇರಳಕ್ಕೆ ಪ್ರವೇಶಿಸುತ್ತದೆ. ಒಂದು ವೇಳೆ ನಿರೀಕ್ಷೆಯಂತೆ ಈ ಬಾರಿ ನಾಲೈದು ದಿನಗಳಲ್ಲಿ ಮುಂಗಾರು ಪ್ರವೇಶಿಸಿದರೆ, 2009ರ ನಂತರ ಭಾರತದ ಮುಖ್ಯ ಭೂಭಾಗದಲ್ಲಿ ವಾಡಿಕೆಗಿಂತ ಮುಂಚಿತವಾಗಿ ಮುಂಗಾರು ಆರಂಭವಾಗುತ್ತಿರುವುದು ಇದೇ ಮೊದಲು ಎಂದು ಹವಾಮಾನ ಇಲಾಖೆ ತಿಳಿಸಿದೆ. (2009ರಲ್ಲಿ ಮೇ 23ರಂದು ಮುಂಗಾರು ಪ್ರವೇಶಿಸಿತ್ತು)

ಸಾಮಾನ್ಯವಾಗಿ, ನೈಋತ್ಯ ಮಾನ್ಸೂನ್ ಜುಲೈ 8ರ ವೇಳೆಗೆ ಇಡೀ ದೇಶವನ್ನು ಆವರಿಸುತ್ತದೆ. ಸೆಪ್ಟೆಂಬ‌ರ್ 17ರ ಸುಮಾರಿಗೆ ಇದು ವಾಯವ್ಯ ಭಾರತದಿಂದ ಸ್ಥಳಾಂತರಗೊಳ್ಳಲು ಪ್ರಾರಂಭಿಸುತ್ತದೆ. ಅಕ್ಟೋಬರ್ 15ರ ಹೊತ್ತಿಗೆ ಸಂಪೂರ್ಣವಾಗಿ ಕೊನೆಗೊಳ್ಳುತ್ತದೆ.

ಕಳೆದ ವರ್ಷ ಮೇ 30ರಂದು, 2023ರಲ್ಲಿ ಜೂನ್ 8, 2022 ರಲ್ಲಿ ಮೇ 29, 2021 ರಲ್ಲಿ ಜೂನ್ 3, 2020ರಲ್ಲಿ ಜೂನ್ 1, 2019 ರಲ್ಲಿ ಜೂನ್ 8 ಮತ್ತು 2018 ರಲ್ಲಿ ಮೇ 29 ರಂದು ಮಾನ್ಸೂನ್ ಕೇರಳಕ್ಕೆ ಪ್ರವೇಶಿಸಿತ್ತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ