Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮತ್ತಷ್ಟು ಜೋರು ; 4 ದಿನ ಭಾರೀ ಮಳೆ

ಬೆಂಗಳೂರು: ಜುಲೈ 5 ರಿಂದ 8ರ ವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಾರಿ ಮಳೆಯಾಗಲಿದೆ ಎಂದು ತಿಳಿಸಿದ್ದು,  ಕೆಲವು ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೋ ಅಲರ್ಟ್ ಘೋಷಿಸಿದೆ.

ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ರಾಜ್ಯದ ಒಂದೆರಡು ಸ್ಥಳಗಳಲ್ಲಿ ಭಾರಿಯಿಂದ ಅತಿ ಭಾರಿ (115.5ಮಿ.ಮಿ ನಿಂದ 204.4ಮಿಮಿ) ಮಳೆಯಾಗುವ ಸಾಧ್ಯತೆಯಿದೆ. ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ.ಮೀ. ಇರುವ ನಿರೀಕ್ಷೆಯಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿ ಸಹಿತ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಜುಲೈ 5ರಂದು ಆರೆಂಜ್‌ ಅಲರ್ಟ್‌ಘೋಷಿಸಲಾಗಿದೆ. ಜೂನ್‌ ೬ರಿಂದ ೮ರವರೆಗೆ ಅತ್ಯಂತ ಭಾರಿ ಮಳೆಯಾಗಲಿದೆ ಎಂದು ಮನ್ಸೂಚನೆ ನೀಡಲಾಗಿದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನಲ್ಲಿ ಜುಲೈ 5 ರಿಂದ 8ರವರೆಗೆ ಭಾರೀ ಮಳೆ
ಜುಲೈ 5 ರಿಂದ 7ವರೆಗೂ ಮಲೆನಾಡು ಭಾಗದ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಈ ಜಿಲ್ಲೆಗಳಿಗೆ ಮೂರು ದಿನ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಜುಲೈ 8ರಂದು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ, ಬಳ್ಳಾರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.
ಜುಲೈ 5 ಹಾಗೂ 6 ರಂದು  ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಜುಲೈ 7 ಹಾಗೂ 8ರಂದು ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಗದಗ ಹಾಗೂ ಹಾವೇರಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಕರೆ: ಪ್ರವೀಣ ಗುಡಿಜಗತ್ತಿನ ಆವಿಷ್ಕಾರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರ ಅಪಾರ: ಕುಲಪತಿ ಸಿ. ಎಂ. ತ್ಯಾಗರಾಜ ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆಕೌಶಲ್ಯ ಅಭಿವೃದ್ಧಿ ಯುವಕರ ಭವಿಷ್ಯದ ಕೀಲಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಕಾರ್ಯ ಸ್ತುತ್ಯಾರ್ಹ : ಪ್ರೊ. ಹೊಸಕೋಟಿಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿನ್ಯಾನೋ ಜಾಥಾ-2026' ಕಾರ್ಯಕ್ರಮ