ಬೆಳಗಾವಿ: ಕಲುಷಿತ ಅಹಾರ ಮಾಡಿದ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದರು. ಅಹಾರದ ಬಗ್ಗೆ ನಿರ್ಲಕ್ಷ್ಯ ವಹಿಸಿದ ವಾರ್ಡನ್ ಮತ್ತು ಮೇಲಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳು ಹಾಸ್ಟೆಲ್ ಎದುರು ಪ್ರತಿಭಟಿಸಿದ ಘಟನೆ ಮಚ್ಚೆ ಗ್ರಾಮದ ಅಂಬೇಡ್ಕರ್ ಸರಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ 6 ರಲ್ಲಿ ಶನಿವಾರ ರಾತ್ರಿ ನಡೆದಿದೆ. ಕಲುಷಿತ ಆಹಾರ ಸೇವನೆ ಮಾಡಿದ ಕೆಲ ಹೊತ್ತಿನ ಬಳಿಕ ವಿದ್ಯಾರ್ಥಿಗಳಲ್ಲಿ ಹೊಟ್ಟೆ ನೋವು ಕಾಣಿಸಿಕೊಂಡಿದೆ. ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನು ಕೆಲ ವಿದ್ಯಾರ್ಥಿಗಳು ಶನಿವಾರ ರಾತ್ರಿ ಪ್ರತಿಭಟನೆ ನಡೆಸಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.