Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯ ಔದ್ಯಮಿಕ ಬೆಳವಣಿಗೆ, ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವೆ : ಮೃಣಾಲ ಹೆಬ್ಬಾಳಕರ್

 

ಬೆಳಗಾವಿ: ಲೋಕಸಭೆಗೆ ಆಯ್ಕೆಯಾದರೆ ಬೆಳಗಾವಿಯ ಔದ್ಯಮಿಕ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವುದಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ.
ಲೋಕಸಭೆ ಚುನಾವಣೆಯ ಅಂಗವಾಗಿ ಬುಧವಾರ ಬೆಳಗಿನಜಾವ ಶ್ರೀನಗರ ಗಾರ್ಡನ್ ಹಾಗೂ ಮಾಳಮಾರುತಿ ಬಡಾವಣೆ ಸುತ್ತಮುತ್ತಲಿನ ಪ್ರದೇಶಗಳಿಗೆ ತೆರಳಿ ಮತಯಾಚನೆ ಮಾಡಿದ ಅವರು, ಬೆಳಗಾವಿಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಎಲ್ಲ ರೀತಿಯ ಕೆಲಸ ಮಾಡುತ್ತೇನೆ. ನಿಮ್ಮ ಮತ ವ್ಯರ್ಥವಾಗದಂತೆ ಖಂಡಿತ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಕೆಲಸ ಮಾಡುವ ಆಸಕ್ತಿ, ಶಕ್ತಿ, ಉತ್ಸಾಹ ಎಲ್ಲವೂ ಇದೆ. ಒಬ್ಬ ಸಂಸದ ಯಾವ ರೀತಿಯಲ್ಲಿ ಕೆಲಸ ಮಾಡಬೇಕೆನ್ನುವುದನ್ನು ಮಾಡಿ ತೋರಿಸುತ್ತೇನೆ. ಎಲ್ಲರೊಂದಿಗೆ ಸೇರಿ, ಚರ್ಚಿಸಿ ಬೆಳಗಾವಿಯ ಸಮಗ್ರ ಅಭಿವೃದ್ಧಿ ಯೋಜನೆ ರೂಪಿಸುತ್ತೇನೆ ಎಂದು ಮೃಣಾಲ ಹೆಬ್ಬಾಳಕರ್ ತಿಳಿಸಿದರು.

ಸಾರ್ವಜನಿಕರಿಂದ ವ್ಯಾಪಕವಾದ ಬೆಂಬಲ ದೊರೆಯುತ್ತಿದೆ, ಬೆಳಗಾವಿಯ ಭವ್ಯ ಭವಿಷ್ಯಕ್ಕಾಗಿ ಬೆಳಗಾವಿಗರು ಕಾಂಗ್ರೆಸ್ ಬೆಂಬಲಿಸುತ್ತಾರೆ ಎನ್ನುವ ವಿಶ್ವಾಸ ಇಮ್ಮಡಿಗೊಂಡಿದೆ ಎಂದು ಅವರು ತಿಳಿಸಿದ್ದಾರೆ.
ಸ್ಥಳೀಯ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ