Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮುಚ್ಚಂಡಿಯ ಐದರ ಪೋರನ ನೆನಪಿನ ಶಕ್ತಿ ಅಗಾಧ..

 

ಬೆಳಗಾವಿ :
ಐದು ವರ್ಷದ ಈ ಪುಟ್ಟ ಪೋರ ಕನ್ನಡ ಹಾಗೂ ಇಂಗ್ಲಿಷನಲ್ಲಿ ನಿರರ್ಗಳವಾಗಿ ಭಾಷಣ ಮಾಡುವುದು, ಒಂದು ಲಕ್ಷದವರೆಗೆ ಅಂಕಿಗಳನ್ನು ಹೇಳುವುದು ಹಾಗೂ ಜಗತ್ತಿನ ಅನೇಕ ವಿಜ್ಞಾನಿಗಳ ಹೆಸರನ್ನು ಥಟ್ ಅಂತ ಹೇಳುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾನೆ.

ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ ಐದೂವರೆ ವರ್ಷದ ವೇದಾಂತ ಕೋಳಜಿಗೌಡ ಎಂಬ ಪುಟ್ಟ ಪೋರ ಯುಕೆಜಿ ಓದುತ್ತಿದ್ದಾನೆ. ಈ ಚಿಕ್ಕ ವಯಸ್ಸಿನಲ್ಲಿಯೇ ರಾಷ್ಟ್ರೀಯ ಹಬ್ಬ, ಕರ್ನಾಟಕ ರಾಜ್ಯೋತ್ಸವದಲ್ಲಿ ಶಾಲೆಗೆ ಹೋಗಿ ಭಾಷಣ ಮಾಡುವ ಮೂಲಕ ಸಭಿಕರ ಮೆಚ್ಚುಗೆಗೆ ಕಾರಣನಾಗಿದ್ದಾನೆ.

ಜನೇವರಿ 26 ಗಣರಾಜ್ಯೋತ್ಸವದಂದು ಮುಚ್ಚಂಡಿ ಗ್ರಾಮದ ಸರ್ಕಾರಿ ಕನ್ನಡ ಮಾಧ್ಯಮ ಮಾದರಿ ಶಾಲೆಯಲ್ಲಿ ಇಂಗ್ಲಿಷ್‌ನಲ್ಲಿ ಸುಮಾರು ಮೂರು ನಿಮಿಷಕ್ಕೂ ಹೆಚ್ಚು ಹೊತ್ತು ಭಾಷಣ ಮಾಡಿ ಚಪ್ಪಾಳೆ ಗಿಟ್ಟಿಸಿಕೊಂಡಿದ್ದಾನೆ. ಕರ್ನಾಟಕ ರಾಜ್ಯೋತ್ಸವದಂದು ಕನ್ನಡದಲ್ಲಿ ಭಾಷಣ ಮಾಡಿ ಕನ್ನಡಾಭಿಮಾನ ಮೆರೆದಿದ್ದಾನೆ.

ತಂದೆ ಪ್ರಕಾಶ ಕೋಳಜಿಗೌಡ ಧಾರವಾಡ ಹೈಕೋರ್ಟಿನಲ್ಲಿ ಪ್ರಥಮ ದರ್ಜೆ ಗುಮಾಸ್ತರಾಗಿ ಸೇವೆ ಸಲ್ಲಿಸುತ್ತಿದ್ದು, ತಾಯಿ ಅಶ್ವಿನಿ ಗೃಹಿಣಿ ಆಗಿದ್ದಾರೆ. ತಾಯಿ ಬಿ.ಇಡಿ ಕಲಿತಿದ್ದು, ಮಗು ವೇದಾಂತನಿಗೆ ಮನೆಯಲ್ಲಿಯೇ ಪಾಠ ಹೇಳಿ ಕೊಡುತ್ತಾರೆ. ತಾಯಿ ಕಲಿಸಿದ ಪಾಠ ಹಾಗೂ ಭಾಷಣವನ್ನು ನೆನಪಿನಲ್ಲಿ ಇಟ್ಟುಕೊಂಡು ನಿರರ್ಗಳವಾಗಿ ಮಾತನಾಡುವುದ್ದನ್ನು ರೂಢಿಸಿಕೊಂಡಿದ್ದಾನೆ.

ಭಾಷಣದ ಜತೆಗೆ ಒಂದು ಲಕ್ಷದ ವರೆಗೆ ಅಂಕಿಗಳನ್ನು ಬರೆಯುವುದರೊಂದಿಗೆ ಅದನ್ನೂ ಓದಿಯೂ ಹೇಳುತ್ತಾನೆ. ಜಗತ್ತಿನ ಖ್ಯಾತನಾಮ 40 ವಿಜ್ಞಾನಿಗಳ ಹೆಸರು ಹಾಗೂ ಅವರ ಸಂಶೋಧನೆಯನ್ನು ಹೇಳುತ್ತಾನೆ. ಇಷ್ಟು ಸಣ್ಣ ವಯಸ್ಸಿನಲ್ಲಿ ಈ ಮಗುವಿನ ಭಾಷಣ ಕೇಳಿ ಎಲ್ಲರೂ ನಿಬ್ಬೆರಗಾಗಿದ್ದಾರೆ.

ಸದ್ಯ ಮುಚ್ಚಂಡಿಯ ಸರ್ಕಾರಿ ಕನ್ನಡ ಶಾಲೆಯಲ್ಲಿಯೇ ಯುಕೆಜಿ ಓದುತ್ತಿದ್ದು, ಈ ಮಗುವಿನ ಪ್ರತಿಭೆ ಮೆಚ್ಚಿ ಮುಖ್ಯೋಪಾಧ್ಯಾಯ ಎಸ್.ಜಿ. ಚವಲಗಿ, ಗ್ರಾಪಂ ಅಧ್ಯಕ್ಷ ಅನಿತಾ ಒಡೆಯರ, ಸಿದ್ರಾಯಿ ಹುಲಕಾಯಿ ಸೇರಿದಂತೆ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ