Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಗಂಗಾವತಿಯಲ್ಲಿ ಹರಿದ ರಕ್ತ : ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ

ಗಂಗಾವತಿ : ಸಿನಿಮೀಯ ರೀತಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಗಂಗಾವತಿ ನಗರದಲ್ಲಿ ನಡೆದಿದೆ.

ವೆಂಕಟೇಶ ಕುರುಬರ (31) ವರ್ಷ ಕೊಲೆಯಾದ ಬಿಜೆಪಿ ನಾಯಕ. ಕೊಪ್ಪಳ ರಸ್ತೆಯ ಲೀಲಾವತಿ ಎಲುಬು ಕೀಲು ಅಸ್ಪತ್ರೆಯ ಮುಂಭಾಗದಲ್ಲಿ ನಸುಕಿನ ಜಾವ 2 ಗಂಟೆಗೆ ಕಾರಿನಲ್ಲಿ ಆಗಮಿಸಿದ್ದ ಗ್ಯಾಂಗ್ ಕೊಲೆ ಮಾಡಿದೆ.

ದೇವಿಕ್ಯಾಂಪ್‌ನಿಂದ ಗಂಗಾವತಿಗೆ ವೆಂಕಟೇಶ್ ಅವರು ಸ್ನೇಹಿತರ ಜೊತೆ ಊಟ ಮಾಡಿ ಬೈಕಿನಲ್ಲಿ ಬರುತ್ತಿದ್ದರು. ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದ ಗ್ಯಾಂಗ್ ಸದಸ್ಯರು ಬೈಕಿಗೆ ಗುದ್ದಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಡಿವೈಸ್‌ಪಿ ಸಿದ್ದನಗೌಡ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಕರಣದ ಬಗ್ಗೆ ವೆಂಕಟೇಶ ಸ್ನೇಹಿತ ರಾಮು ಪ್ರತಿಕ್ರಿಯಿಸಿ, ಸ್ನೇಹಿತರೆಲ್ಲರೂ ಊಟಕ್ಕೆ ಹೋಗಿದ್ದೆವು. ವಾಪಸ್ ಮರಳುತ್ತಿದ್ದಾಗ 7-8 ಜನ ಮಾರಕಾಸ್ತ್ರಗಳನ್ನು ಹಿಡಿದು ನಮ್ಮನ್ನು ಬೆದರಿಸಿ ಹಲ್ಲೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಕೊಲೆಯಾದ ವೆಂಕಟೇಶ ಅವರು ಮಾಜಿ ಶಾಸಕ ಪರಣ್ಣ ಮುನವಳ್ಳಿ ಅವರ ಆಪ್ತರಾಗಿದ್ದಾರೆ. ಕೆಲ ವರ್ಷಗಳ ಹಿಂದೆ ಜೆ ಎನ್ ಎನ್ ಕೇಬಲ್ ಚಾನೆಲ್ ಗೆ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದ ವೆಂಕಟೇಶ ಗಂಗಾವತಿಯಲ್ಲಿ ನಡೆದ ಕೋಮು ಸಂಘರ್ಷದ ಸಂದರ್ಭದಲ್ಲಿ ಅವರ ಮೇಲೆ ಕೇಸ್ ಸಹ ದಾಖಲಾಗಿತ್ತು.

ಕೃತ್ಯಕ್ಕೆ ಬಳಸಿದ್ದ ಇಂಡಿಕಾ ಕಾರನ್ನು ನಗರದ ಆನೆಗೊಂದಿ ರಸ್ತೆಯಲ್ಲಿ ಬ್ಯಾಂಕ್ ಎದುರಿನ ವಿಜಯನಗರ ಕಾಲೋನಿ ಬಳಿ ಬಿಟ್ಟು ಪರಾರಿಯಾಗಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ