Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಡ್ಡಾ ಭೇಟಿಯಾದ ಮಂಗಲಾ : ಬೆಳಗಾವಿ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿ

 
ಬೆಳಗಾವಿಯ ಹಾಲಿ ಸಂಸದೆಯಾಗಿರುವ ಮಂಗಲಾ ಸುರೇಶ ಅಂಗಡಿ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ಜಯಪ್ರಕಾಶ್ ನಡ್ಡಾ ಅವರನ್ನು ತಮ್ಮ ಬೆಳಗಾವಿಯ ನಿವಾಸಕ್ಕೆ ಅಹ್ವಾನಿಸಿ ಕೆಲ ಹೊತ್ತು ಮಾತುಕತೆ ನಡೆಸಿ ಲೋಕಸಭಾ ಚುನಾವಣೆ ಬೆಳವಣಿಗೆಗಳ ಕುರಿತು ಚರ್ಚಿಸಿದ್ದಾರೆ. ಇದು ಬೆಳಗಾವಿ ರಾಜಕಾರಣದಲ್ಲಿ ಭಾರಿ ಮಹತ್ವ ಪಡೆದುಕೊಂಡಿದೆ..

ಬೆಳಗಾವಿ: ಬೆಳಗಾವಿಗೆ ಮಂಗಳವಾರ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ಡಾ ಅವರನ್ನು ಬೆಳಗಾವಿಯ ಹಾಲಿ ಸಂಸದೆ ಮಂಗಲಾ ಸುರೇಶ ಅಂಗಡಿ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇದು ಬೆಳಗಾವಿ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.

ಕಳೆದ ಉಪಚುನಾವಣೆಯಲ್ಲಿ ಅತ್ಯಲ್ಪ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದ ಮಂಗಲಾ ಸುರೇಶ ಅಂಗಡಿ ಅವರಿಗೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪ ಬಹುದು ಎಂಬ ವದಂತಿ ಹರಡಿದೆ. ಈ ನಿಟ್ಟಿನಲ್ಲಿ ಮಂಗಲಾ ಅಂಗಡಿ ಅವರು ಜಯಪ್ರಕಾಶ್ ನಡ್ದಾ ಅವರನ್ನು ಭೇಟಿ ಆಗಿರುವುದು ನಾನಾ ಚರ್ಚೆಗಳಿಗೆ ಕಾರಣವಾಗಿದೆ. ಮಂಗಲಾ ಅಂಗಡಿಯವರ ಪತಿ ದಿ.ಸುರೇಶ ಅಂಗಡಿ ಅವರು ಕಳೆದ ಎರಡೂವರೆ ದಶಕಗಳಿಂದ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಹಿಡಿತ ಸಾಧಿಸಿದ್ದಾರೆ. ಈ ಬಲವಾದ ಹಿಡಿತವನ್ನು ಮುಂದುವರಿಸಿಕೊಂಡು ಹೋಗುವ ತಂತ್ರವಾಗಿ ಮಂಗಲಾ ಅಂಗಡಿ ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾಗಿರುವ ಸಾಧ್ಯತೆಗಳು ಇವೆ. ಯಾವುದೇ ಕಾರಣಕ್ಕೂ ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಅನ್ಯರ ಪಾಲಾಗಬಾರದು ಎಂಬ ಪರೋಕ್ಷ ಸಂದೇಶವನ್ನು ಅವರು ರವಾನಿಸಿದಂತಿದೆ. ಅವರ ಪುತ್ರಿಯರಾದ ಸ್ಪೂರ್ತಿ ಪಾಟೀಲ, ಶ್ರದ್ಧಾ ಶೆಟ್ಟರ್ ಮತ್ತು ಅಳಿಯ ಸಂಕಲ್ಪ ಶೆಟ್ಟರ ಉಪಸ್ಥಿತರಿದ್ದದ್ದು ಗಮನ ಸೆಳೆಯಿತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ