ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ ಎರಡು ಸ್ಥಾನಗಳು ಲಭ್ಯವಾಗಲಿದ್ದು, ಹಲವರ ಹೆಸರು ಪ್ರಸ್ತಾಪವಾಗಿವೆ.
ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಎನ್.ಮಹೇಶ್, ಮಹಿಳಾ ಮೋರ್ಚಾ ಅಧ್ಯಕ್ಷೆ ಸಿ.ಮಂಜುಳಾ, ಒಬಿಸಿ ಮೋರ್ಚಾ ಅಧ್ಯಕ್ಷ ರಘು ಕೌಟಿಲ್ಯ, ಶಿಸ್ತು ಸಮಿತಿ ಮಾಜಿ ಅಧ್ಯಕ್ಷ ಲಿಂಗರಾಜ ಪಾಟೀಲ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ ಮತ್ತಿತರ ಹೆಸರುಗಳು ಪ್ರಮುಖವಾಗಿ ಕೇಳಿಬಂದಿವೆ.
ಕಳೆದ ವಾರ ನಡೆದ ರಾಜ್ಯ ಬಿಜೆಪಿಯ ಹಿರಿಯ ನಾಯಕರನ್ನು ಒಳಗೊಂಡ
ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆದಿದ್ದು, ಇದೀಗ ಚುನಾವಣೆ ಘೋಷಣೆಯಾಗಿದ್ದರಿಂದ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹೈಕಮಾಂಡ್ ನಾಯಕರೊಂದಿಗೆ ಮಾತುಕತೆ ನಡೆಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.