Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಭೂಮಿಗೆ ಸುನಿತಾ ಕರೆತರಲು ನಾಸಾ, ಸ್ಪೇಸ್‌ಎಕ್ಸ್ ಕಾರ್ಯಾಚರಣೆಗೆ ಚಾಲನೆ

ವಾಷಿಂಗ್ಟನ್‌: ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್‌ಎಸ್) ಸಿಲುಕಿಕೊಂಡಿರುವ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ನೋರ್ ಭೂಮಿಗೆ ವಾಪಸ್ ಕರೆತರಲು ಸ್ಪೇಸ್‌ಎಕ್ಸ್ ನೆರವಿನಿಂದ ನಾಸಾ ಕಾರ್ಯಾಚರಣೆಯನ್ನು ಆರಂಭಿಸಿದೆ.

ಫ್ಲೋರಿಡಾದಲ್ಲಿರುವ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಶುಕ್ರವಾರ ಸಂಜೆ ಸ್ಥಳೀಯ ಕಾಲಮಾನ 7.03ಕ್ಕೆ ಸರಿಯಾಗಿ ಸ್ಪೇಸ್‌ಎಕ್ಸ್‌ನ ಫಾಲ್ಕನ್-9 ರಾಕೆಟ್ ಆಗಸದತ್ತ ಚಿಮ್ಮಿತು.

ಈ ಸಂಬಂಧ ನಾಸಾ ಹಾಗೂ ಸ್ಪೇಸ್‌ಎಕ್ಸ್ ಮಾಹಿತಿ ಹಾಗೂ ವಿಡಿಯೊವನ್ನು ಹಂಚಿಕೊಂಡಿದೆ. ನಾಸಾದ ಸ್ಪೇಕ್ಸ್‌ಎಕ್ಸ್ ಡ್ರಾಗನ್ ಸ್ಪೇಸ್‌ಕ್ರಾಫ್ಟ್ ಕ್ರೂ10 ಉಡ್ಡಯನ ಯಶಸ್ವಿಯಾಗಿದೆ ಎಂದು ನಾಸಾ ಘೋಷಿಸಿದೆ.

ಈ ಮಿಷನ್‌ನಲ್ಲಿ ನಾಲ್ವರು ಗಗನಯಾನಿಗಳನ್ನು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕಳುಹಿಸಲಾಗಿದೆ. ಈ ಮೊದಲು ಪ್ರತಿಕೂಲ ಹವಾಮಾನ ಪರಿಸ್ಥಿತಿಯಿಂದಾಗಿ ಉಡ್ಡಯನ ವಿಳಂಬಗೊಂಡಿತ್ತು.

ಕಳೆದ ವರ್ಷ ಜೂನ್ 5ರಂದು, ಬೋಯಿಂಗ್ ಸಂಸ್ಥೆಯ ಸ್ಟಾರ್‌ಲೈನರ್‌ ಗಗನನೌಕೆಯಲ್ಲಿ ಸುನಿತಾ ಹಾಗೂ ವಿಲೋರ್ ಅವರು ಐಎಸ್‌ಎಸ್‌ನತ್ತ ಪ್ರಯಾಣ ಬೆಳೆಸಿದ್ದರು. 8 ದಿನಗಳ ನಂತರ ಅವರು ಭೂಮಿಗೆ ಮರಳಬೇಕಿತ್ತು. ಆದರೆ, ಗಗನನೌಕೆಯಲ್ಲಿ ಕಂಡುಬಂದ ತಾಂತ್ರಿಕ ದೋಷದಿಂದಾಗಿ ಸಾಧ್ಯವಾಗಿಲ್ಲ.

ಬಳಿಕ ಉದ್ಯಮಿ ಇಲಾನ್ ಮಸ್ಕ್ ಅವರ ಸ್ಪೇಸ್‌ಎಕ್ಸ್‌ನ ಗಗನನೌಕೆಯಲ್ಲಿ ಮರಳಿ ಭೂಮಿಗೆ ಕರೆತರಲು ನಾಸಾ ಸಿದ್ಧತೆ ನಡೆಸಿತ್ತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ