Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಷ್ಟ್ರೀಯ ಸಾಧಕರಿಗೆ ಡಾ.ಪ್ರಭಾಕರ ಕೋರೆಯವರಿಂದ ಗೌರವ ಸತ್ಕಾರ

 


ಬೆಳಗಾವಿ :
ಪ್ರಸಕ್ತ ಶೈಕ್ಷಣಿಕ ಸಾಲಿನ ರಾಷ್ಟ್ರಿಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಪುರಸ್ಕೃತರಾಗಿ, ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಪಡೆದುಕೊಂಡ ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರದ ಕೆಎಲ್‌ಇ ಸಂಸ್ಥೆಯ ಎಸ್‌ಸಿಪಿ ಪ್ರೌಢಶಾಲೆ ವಿಜ್ಞಾನ ಶಿಕ್ಷಕಿ ಸಪ್ನಾ ಅನಿಗೋಳ ಅವರಿಗೆ ಹಾಗೂ ಇತ್ತೀಚಿಗೆ ನವದೆಹಲಿಯಲ್ಲಿ ಜರುಗಿದ ರಾಷ್ಟ್ರಮಟ್ಟದ ಸೈನಿಕ ಶಿಬಿರ(ಟಿಎಸ್‌ಸಿ)ದಲ್ಲಿ ಕರ್ನಾಟಕ ಗೋವಾ ಎನ್‌ಸಿಸಿ ಡೈರೆಕ್ಟೋರೆಟ್‌ದಿಂದ ಆಯ್ಕೆಯಾಗಿ ಶೂಟಿಂಗ್ ವಿಭಾಗದಲ್ಲಿ ಚಿನ್ನದ ಪದಕವನ್ನು ಪಡೆದು ಇತಿಹಾಸ ನಿರ್ಮಿಸಿದ ಜಿ.ಎ.ಪ್ರೌಢಶಾಲೆಯ ವಿದ್ಯಾರ್ಥಿ ವಿಶಾಲ ಸಂದೀಪ ಶಿರೋಳ್ಕರ ಅವರಿಗೆ ಹಾಗೂ ಮಧ್ಯಪ್ರದೇಶದ ಮಾವೋದಲ್ಲಿ ಜರುಗಿದ 32 ನೇ ಜಿವಿ ಮಾವಳಂಕರ್ ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್‌ಶಿಪ್‌ದಲ್ಲಿ ಬೆಳ್ಳಿ ಪದಕವನ್ನು ಪಡೆದು ದಾಖಲೆ ನಿರ್ಮಿಸಿದ ಪ್ರೀತಿ ಚಂದ್ರಶೇಖರಯ್ಯ ಸವಡಿ, ಗುರುನಾಥ ಲಕ್ಷ್ಮಣ ರಾಜೋಳಿ - ಇವರಿಗೆ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆಯವರು ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಸತ್ಕರಿಸಿ ಅಭಿನಂದನೆಯನ್ನು ಸಲ್ಲಿಸಿದರು.

ಕೆಎಲ್‌ಇ ಸಂಸ್ಥೆಯು ಅಸಂಖ್ಯ ಶಿಕ್ಷಕ ಹಾಗೂ ವಿದ್ಯಾರ್ಥಿಗಳ ಅವಿರತ ಶ್ರಮದಿಂದ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆದು ನಿಂತಿದೆ. ಸಾಧನೆ ಎನ್ನುವುದು ಒಂದೆರಡು ದಿನಗಳಲ್ಲಿ ಬರುವುದಿಲ್ಲ ನಿರಂತರವಾದ ಪ್ರಯತ್ನ ಹಾಗೂ ಹೋರಾಟ ಪ್ರತಿಫಲದಿಂದ ಬರಲು ಸಾಧ್ಯ. ವಿಜ್ಞಾನ ಶಿಕ್ಷಕಿ ಸಪ್ನಾ ಅನಿಗೋಳ ಇವರು ವಿಜ್ಞಾನ ಕ್ರಿಯಾಶೀಲ ಶಿಕ್ಷಕರಾಗಿ ಕಳೆದು 20 ವರ್ಷಗಳಿಂದ ವಿಜ್ಞಾನದ ಬೋಧನೆಯ ಮೂಲಕ ಮಕ್ಕಳ ಹೃದಯವನ್ನು ಗೆದ್ದಿದ್ದಾರೆ.

ಈ ಎನ್‌ಸಿಸಿ ಕೆಡೆಟ್‌ಗಳು ಉತ್ತಮ ತರಬೇತಿಯನ್ನು ಪಡೆದು ರಾಷ್ಟ್ರೀಯ ಮಟ್ಟದಲ್ಲಿ ಅದ್ವಿತೀಯ ಸಾಧನೆಯನ್ನು ಮಾಡಿದ್ದಾರೆ. ಮಾತ್ರವಲ್ಲ ಕೆಎಲ್‌ಇ ಸಂಸ್ಥೆಯ ಕೀರ್ತಿಯನ್ನು ಬಾನೆತ್ತರಕ್ಕೆ ವಿಸ್ತರಿಸಿ. ಈ ಎಲ್ಲ ಸಾಧಕರು ಸಮಾಜಕ್ಕೆ ಪ್ರೇರಕರಾಗಿ ನಿಂತಿದ್ದಾರೆ. ಮುಂಬರುವ ದಿನಗಳಲ್ಲಿ ಅವರು ಇನ್ನಷ್ಟು ಸಾಧನೆಯನ್ನು ಮಾಡಲೆಂದು ಶುಭ ಕೋರಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ