Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನೇತಾಜಿ ಸುಭಾಷ್ ಚಂದ್ರ ಬೋಸ್ ಅವಿಭಜಿತ ಭಾರತದ ಮೊಟ್ಟ ಮೊದಲ ಪ್ರಧಾನಿ

 

ನೊಯ್ಡಾ :
ನೇತಾಜಿ ಸುಭಾಷ್ ಚಂದ್ರ ಬೋಸ್ ಅವಿಭಜಿತ ಭಾರತದ ಮೊಟ್ಟ ಮೊದಲ ಪ್ರಧಾನಿ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿಶ್ಲೇಷಿಸಿದ್ದಾರೆ.
ಗ್ರೇಟರ್ ನೊಯ್ಡಾದ ಖಾಸಗಿ ವಿಶ್ವವಿದ್ಯಾಲಯದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಜಾದ್ ಹಿಂದ್ ಸರ್ಕಾರ ಭಾರತದ ಮೊದಲ ಸ್ವದೇಶಿ ಸರ್ಕಾರವಾಗಿತ್ತು. ಅದನ್ನು ಮೊದಲ ಸ್ವದೇಶಿ ಸರ್ಕಾರ ಎಂದು ಕರೆಯಲು ನನಗೆ ಯಾವುದೇ ಹಿಂಜರಿಕೆ ಇಲ್ಲ. ಅದನ್ನು ಸ್ಥಾಪನೆ ಮಾಡಿದವರು ನೇತಾಜಿ ಸುಭಾಷ್ ಚಂದ್ರ ಬೋಸ್. ಅವರು ಪ್ರಧಾನಿಯಾಗಿ 1943 ರ ಅಕ್ಟೋಬರ್ 21 ರಂದು ಪ್ರಮಾಣವಚನ ಸ್ವೀಕರಿಸಿದ್ದರು ಎಂದು ನೆನಪಿಸಿದರು.

ದೇಶಕ್ಕೆ ಸ್ವಾತಂತ್ರ ದೊರೆತ ಬಳಿಕ ಸುಭಾಷ್ ಚಂದ್ರ ಬೋಸ್ ಅವರ ಕೊಡುಗೆಗಳನ್ನು ನಿರ್ಲಕ್ಷಿಸಲಾಗಿದೆ. ನೇತಾಜಿ ಪಾತ್ರ ಹಾಗೂ ದೃಷ್ಟಿಕೋನವನ್ನು ಮರು ಮೌಲ್ಯಮಾಪನ ಮಾಡುವ ಅವಶ್ಯಕತೆ ಇದೆ. ಅವರಿಗೆ ಸಂಬಂಧಿಸಿದ ದಾಖಲೆಗಳನ್ನು ಎಂದಿಗೂ ಬಹಿರಂಗಗೊಳಿಸದಂತೆ ಇಡಲಾಗಿತ್ತು. ಕೆಲವರು ಇದನ್ನು ಇತಿಹಾಸವನ್ನು ಪುನರ್ ರಚನೆ ಎನ್ನುತ್ತಾರೆ. ಆದರೆ ನಾನು ಅದನ್ನು ತಿದ್ದುಪಡಿ ಎಂದು ಹೇಳುತ್ತೇನೆ. ನರೇಂದ್ರ ಮೋದಿ ಅವರು ಪ್ರಧಾನಿ ಆದ ನಂತರ ನೇತಾಜಿಗೆ ಸೂಕ್ತ ಗೌರವ ಸಲ್ಲಿಸಲು ಪ್ರಯತ್ನಿಸಲಾಗುತ್ತದೆ
ಎಂದು ಹೇಳಿದರು.

ಬೋಸರು ಪ್ರಬಲ ಬ್ರಿಟಿಷ್ ಸಾಮ್ರಾಜ್ಯವನ್ನು ಎದುರಿಸುತ್ತಿದ್ದರೂ ಭಾರತವನ್ನು ವಿದೇಶೀಯರಿಂದ ಮುಕ್ತಗೊಳಿಸಲು ಅತ್ಯಂತ ಧೈರ್ಯಶಾಲಿಯಾಗಿದ್ದರು ಎಂದು ಬಣ್ಣಿಸಿದರು. ಬೋಸರ ಬಗ್ಗೆ ತಿಳಿಯದೇ ಇರುವುದು ಇನ್ನೇನಿದೆ ಎಂದು ಕೆಲವರು ಆಶ್ಚರ್ಯ ವ್ಯಕ್ತಪಡಿಸುತ್ತಾರೆ. ಹೆಚ್ಚಿನ ಭಾರತೀಯರು ಅವರನ್ನು ಪ್ರಮುಖ ಸ್ವಾತಂತ್ರ್ಯ ಹೋರಾಟಗಾರ, ಆಜಾದ್ ಹಿಂದ್ ಸರ್ವೋಚ್ಚ ಕಮಾಂಡರ್ ಮತ್ತು ಭಾರತದ ಸ್ವಾತಂತ್ರ್ಯಕ್ಕಾಗಿ ಹಲವಾರು ಕಷ್ಟಗಳನ್ನು ಅನುಭವಿಸಿದ ಕ್ರಾಂತಿಕಾರಿ ಎಂದು ತಿಳಿದಿದ್ದಾರೆ. ಆದರೆ ಅವರು ಅವಿಭಜಿತ ಭಾರತದ ಮೊದಲ ಪ್ರಧಾನಿ ಎಂಬುದು ಕೆಲವೇ ಕೆಲವು ಜನರಿಗೆ ಗೊತ್ತು ಎಂದು ಹೇಳಿದರು.

ಆಜಾದ್ ಹಿಂದ್ ಸರ್ಕಾರ ಸಾಂಕೇತಿಕ ಸರ್ಕಾರ ಆಗಿರಲಿಲ್ಲ. ಅದು ತನ್ನದೇ ಆದ ಚಿಂತನೆ ನೀತಿಗಳನ್ನು ಹೊಂದಿದ್ದು ತನ್ನದೇ ಆದ ಅಂಚೆಚೀಟಿಗಳು, ಕರೆನ್ಸಿ, ಗುಪ್ತಚರ ಸೇವೆ ಹೊಂದಿತ್ತು. ಅಂಥ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವುದು ಸಾಮಾನ್ಯ ಸಾಧನೆಯಲ್ಲ ಎಂದು ಅವರು ವಿಶ್ಲೇಷಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ