Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಗೆ ನೂತನ ಕಮಿಷನರ್

ಬೆಳಗಾವಿ: ರಾಜ್ಯ ಸರಕಾರ ಗುರುವಾರ ಕೆಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ.

ಸಿಐಡಿಯ ಸೈಬರ್ ಕ್ರೈಮ್, ನಾಕ್ರೋಟಿಕ್ಸ್ ಡಿಐಜಿ ಆಗಿರುವ ಬೊರಸೆ ಭೂಷಣ್ ಗುಲಾಬ್ ರಾವ್ ಅವರನ್ನು ಬೆಳಗಾವಿ ನಗರ ಪೊಲೀಸ್ ಕಮಿಷನರ್ ಮತ್ತು ಡಿಐಜಿ ಆಗಿ ವರ್ಗಾವಣೆ ಮಾಡಲಾಗಿದೆ. ಬೆಳಗಾವಿ ನಗರ ಪೊಲೀಸ್ ಕಮಿಷನರ್ ಆಗಿ ಯಡಾ ಮಾರ್ಟಿನ್ ಕರ್ತವ್ಯ ನಿರ್ವಹಿಸುತ್ತಿದ್ದರು.

ಕೆಲವು ವರ್ಷಗಳ ಹಿಂದೆ ಬೆಳಗಾವಿ ಉಪ ಪೋಲಿಸ್ ಕಮಿಷನರ್ ಆಗಿದ್ದ ಅನುಪಮ್ ಅಗರ್ವಾಲ್ ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ ಪದೇಪದೇ ಅಲ್ಲಿ ಕೋಮ ಸಂಘರ್ಷ ಏರ್ಪಟ್ಟಿದ್ದರಿಂದ ರಾಜ್ಯ ಸರಕಾರ ಕೊನೆಗೂ ಅವರನ್ನು ಬೇರೆ ಕಡೆ ವರ್ಗಾವಣೆ ಮಾಡಿದೆ. ಜೊತೆಗೆ ರಾಜ್ಯದ ಅತ್ಯಂತ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಯಲ್ಲೂ ಕಾನೂನು ಸುವ್ಯವಸ್ಥೆಗೆ ಆದ್ಯತೆ ನೀಡಿದೆ. ಬೆಳಗಾವಿಗೆ ನೂತನ ಕಮಿಷನರ್ ಆಗಿ ಇದೀಗ ಬೋರಸೆ ಭೂಷಣ್ ಗುಲಾಬ್ ರಾವ್ ಅವರನ್ನು ನೇಮಕ ಮಾಡಿದೆ.

ಉಡುಪಿ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಡಾ. ಅರುಣ್ ಕೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ಹಾಗೂ ದಕ್ಷಿಣ ಕನ್ನಡ ಎಸ್ ಪಿ ಯತೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಗುಪ್ತಚರ ವಿಭಾಗದ ಡಿಐಜಿಯಾಗಿರುವ ಸುಧೀರ್ ಕುಮಾರ್ ರೆಡ್ಡಿ ಅವರನ್ನು ವರ್ಗಾವಣೆ ಮಾಡಲಾಗಿದೆ.

ಗುಪ್ತಚರ ವಿಭಾಗದ ಎಸ್ ಪಿ ಆಗಿರುವ ಹರಿರಾಮ್ ಶಂಕರ್ ಅವರನ್ನು ಉಡುಪಿ ಎಸ್ ಪಿ ಆಗಿ ವರ್ಗಾವಣೆ ಮಾಡಲಾಗಿದೆ. ಅನುಪಮ್ ಅಗರ್‌ವಾಲ್ ಅವರನ್ನು ಸಿಐಡಿ ಆರ್ಥಿಕ ಅಪರಾಧಗಳ ಡಿಐಜಿ ಆಗಿ(ಸಿ.ವಂಶಿ ಕೃಷ್ಣ ಅವರ ಜಾಗಕ್ಕೆ) ವರ್ಗಾವಣೆ ಮಾಡಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ