Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಂಶವೃಕ್ಷ ದೃಢೀಕರಣಕ್ಕೆ ಹೊಸ ಮಾರ್ಗಸೂಚಿ: ಇನ್ನುಂದೆ ಆನ್‌ಲೈನ್ ಮೂಲಕವೇ ಪ್ರಮಾಣ ಪತ್ರ

ಬೆಂಗಳೂರು: ವಂಶವೃಕ್ಷ (Family Tree) ದೃಢೀಕರಣ ಪತ್ರ ನೀಡುವ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕ ಹಾಗೂ ಏಕರೂಪಗೊಳಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ರಾಜ್ಯಾದ್ಯಂತ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ.


ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರ ಸಹಿಯಿರುವ ಸುತ್ತೋಲೆ ಪ್ರಕಾರ, ಇನ್ನು ಮುಂದೆ ವಂಶವೃಕ್ಷ ದೃಢೀಕರಣ ಪತ್ರವನ್ನು ಕೇವಲ ಆನ್‌ಲೈನ್ ತಂತ್ರಾಂಶದ ಮೂಲಕವೇ ನೀಡಲಾಗುತ್ತದೆ.


ಹೊಸ ಮಾರ್ಗಸೂಚಿಯಂತೆ, ಅರ್ಜಿದಾರರು ರೂ.100 ಮೌಲ್ಯದ ಛಾಪಾ ಕಾಗದದಲ್ಲಿ ನೋಟರಿ ದೃಢೀಕರಿಸಿದ ಅಫಿಡವಿಟ್, ಆಧಾರ್ ಕಾರ್ಡ್ ಹಾಗೂ ಕುಟುಂಬದ ಸದಸ್ಯರ ಗುರುತಿನ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು.


ಅರ್ಜಿ ಸಲ್ಲಿಕೆಯ ನಂತರ, ಸಂಬಂಧಿತ ಗ್ರಾಮ ಆಡಳಿತ ಅಧಿಕಾರಿ (VAO) ಅರ್ಜಿದಾರರ ಮನೆಗೆ ಭೇಟಿ ನೀಡಿ, ದಾಖಲೆಗಳು ಮತ್ತು ಕುಟುಂಬದ ವಿವರಗಳನ್ನು ಸ್ಥಳ ಪರಿಶೀಲನೆ ಮೂಲಕ ದೃಢೀಕರಿಸಿ ತಮ್ಮ ವರದಿಯನ್ನು ರಾಜಸ್ವ ನಿರೀಕ್ಷಕರಿಗೆ ಸಲ್ಲಿಸಲಿದ್ದಾರೆ.

ಬಳಿಕ ರಾಜಸ್ವ ನಿರೀಕ್ಷಕರು ದಾಖಲೆಗಳನ್ನು ಪರಿಶೀಲಿಸಿ ತಮ್ಮ ಶಿಫಾರಸಿನೊಂದಿಗೆ ಉಪತಹಶೀಲ್ದಾರರಿಗೆ ಕಳುಹಿಸಲಿದ್ದಾರೆ.


ಅಂತಿಮವಾಗಿ, ವಂಶವೃಕ್ಷ ದೃಢೀಕರಣ ಅರ್ಜಿಯನ್ನು ಅನುಮೋದಿಸುವ ಅಥವಾ ತಿರಸ್ಕರಿಸುವ ಅಧಿಕಾರ ಉಪತಹಶೀಲ್ದಾರರಿಗೇ ಇರಲಿದೆ.

ಅರ್ಜಿ ಅನುಮೋದನೆಯಾದ ಬಳಿಕ, ಡಿಜಿಟಲ್ ರೂಪದಲ್ಲಿ ವಂಶವೃಕ್ಷ ದೃಢೀಕರಣ ಪತ್ರವನ್ನು ಅರ್ಜಿದಾರರಿಗೆ ನೀಡಲಾಗುತ್ತದೆ.


ಈ ಹೊಸ ವ್ಯವಸ್ಥೆಯಿಂದ ವಂಶವೃಕ್ಷ ದೃಢೀಕರಣ ಪ್ರಕ್ರಿಯೆ ಹೆಚ್ಚು ಪಾರದರ್ಶಕ, ವೇಗದ ಹಾಗೂ ದುರುಪಯೋಗಕ್ಕೆ ಕಡಿವಾಣ ಹಾಕುವ ರೀತಿಯಲ್ಲಿ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸಮುದ್ರ ಮಟ್ಟ ಏರಿಕೆಯಿಂದ ಮುಂಬೈ, ಕೋಲ್ಕತ್ತಾದ 1.4 ಕೋಟಿ ಜನರು ಮನೆ ಕಳೆದುಕೊಳ್ಳಬಹುದು : ವಿಶ್ವಸಂಸ್ಥೆ