Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ದಾಖಲೆಯ ಸತತ 8 ನೇ ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್‌ : ಅತಿ ಹೆಚ್ಚು ಬಜೆಟ್‌ ಮಂಡಿಸಿದವರು ಯಾರ್ಯಾರು..? ಇಲ್ಲಿದೆ

 

ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ದಾಖಲೆಯ ಎಂಟನೇ ಬಜೆಟ್ ಅನ್ನು ಮಂಡಿಸಲಿದ್ದಾರೆ. 2025-26 ರ ಕೇಂದ್ರ ಬಜೆಟ್ ಅನ್ನು ಅವರು ಶನಿವಾರ ಮಂಡಿಸಲಿದ್ದಾರೆ. ಮಧ್ಯಮ ವರ್ಗದವರಿಗೆ ಆದಾಯ ತೆರಿಗೆ ಸಡಿಲಿಕೆ ಸೇರಿದಂತೆ, ದೇಶದ ಆರ್ಥಿಕ ಬೆಳವಣಿಗೆ ದರ ಹೆಚ್ಚಿಸಲು ದೇಶದಲ್ಲಿ ಬಳಕೆ ಸಾಮರ್ಥ್ಯ ಹೆಚ್ಚಿಸಲು ಕ್ರಮಗಳನ್ನು ಘೋಷಿಸಬಹುದು ಎಂದು ನಿರೀಕ್ಷಿಸಲಾಗಿದೆ.
ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಈವರೆಗೆ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಹೊಂದಿದ್ದರೂ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸತತವಾಗಿ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಹೊಂದಿದ್ದಾರೆ.

ಮೊರಾರ್ಜಿ ದೇಸಾಯಿ ಅವರು 1959-64ರ ಅವಧಿಯಲ್ಲಿ ಒಟ್ಟು ಆರು ಬಜೆಟ್‌ಗಳನ್ನು ಮಂಡಿಸಿದ್ದಾರೆ. ನಂತರ 1967-69ರಲ್ಲಿ ನಾಲ್ಕು ಬಜೆಟ್‌ಗಳನ್ನು ಮಂಡಿಸಿದ್ದಾರೆ.

ಮೊರಾರ್ಜಿ ದೇಸಾಯಿ ಅವರನ್ನು ಹೊರತುಪಡಿಸಿ, ಮಾಜಿ ಹಣಕಾಸು ಸಚಿವರಾದ ಪಿ ಚಿದಂಬರಂ ಮತ್ತು ಪ್ರಣಬ್ ಮುಖರ್ಜಿ ಅವರು ವಿವಿಧ ಪ್ರಧಾನಿಗಳ ಅಡಿಯಲ್ಲಿ ಕ್ರಮವಾಗಿ ಒಂಬತ್ತು ಮತ್ತು ಎಂಟು ಬಜೆಟ್‌ಗಳನ್ನು ಮಂಡಿಸಿದ್ದಾರೆ. ಅವರು ಕ್ರಮವಾಗಿ ಎರಡನೇ ಮತ್ತು ಮೂರನೇ ಅತಿ ಹೆಚ್ಚು ಬಜೆಟ್ ಮಂಡನೆ ದಾಖಲೆಗಳನ್ನು ಹೊಂದಿದ್ದಾರೆ.
ಎಂಟು ಬಜೆಟ್‌ಗಳಲ್ಲಿ, ಪ್ರಣವ್‌ ಮುಖರ್ಜಿ ಅವರು 1982, 1983 ಮತ್ತು 1984 ರಲ್ಲಿ ಮೂರು ಬಜೆಟ್‌ಗಳನ್ನು ಮತ್ತು ಫೆಬ್ರವರಿ 2009 ಮತ್ತು ಮಾರ್ಚ್ 2013 ರ ನಡುವೆ ಐದು ನೇರ ಬಜೆಟ್‌ಗಳನ್ನು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಮಂಡಿಸಿದ್ದರು.

ಚಿದಂಬರಂ ಅವರು ಒಂಬತ್ತು ಬಜೆಟ್ ಮಂಡಿಸಿದ್ದು, 1996 ಮತ್ತು 1997 ರಲ್ಲಿ ಎರಡು ಬಜೆಟ್‌ಗಳು, 2004 ಮತ್ತು 2008 ರ ನಡುವೆ ಐದು ಬಜೆಟ್‌ಗಳು ಮತ್ತು 2013 ಮತ್ತು 2014 ರ ಅವಧಿಯಲ್ಲಿ ಎರಡು ಬಜೆಟ್‌ಗಳನ್ನು ಮಂಡಿಸಿದ್ದಾರೆ.
ಶನಿವಾರ ಕೇಂದ್ರ ಬಜೆಟ್ 2025-26 ಮಂಡನೆ ನಂತರ, ನಿರ್ಮಲಾ ಸೀತಾರಾಮನ್ ಸತತ ಎಂಟು ಬಜೆಟ್‌ಗಳನ್ನು ಮಂಡಿಸಿ ತಮ್ಮದೇ ದಾಖಲೆ ಮುರಿಯಲಿದ್ದಾರೆ. ಒಟ್ಟು ಬಜೆಟ್‌ಗಳ ಸಂಖ್ಯೆಯಲ್ಲಿ, ಅವರು ಎಂಟು ಬಜೆಟ್‌ಗಳೊಂದಿಗೆ ಪ್ರಣಬ್ ಮುಖರ್ಜಿ ಅವರೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರು