ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್, ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಇನ್ನು ಒಂದು ವರ್ಷದವರೆಗೆ ನಟ ದರ್ಶನ್‌ಗೆ ಜಾಮೀನು ನೀಡಲು ನಿರಾಕರಿಸಿದೆ. ಮುಂದಿನ ಒಂದು ವರ್ಷದಲ್ಲಿ ವಿಚಾರಣೆಯಲ್ಲಿ ಯಾವುದೇ ಪ್ರಗತಿಯಾಗದಿದ್ದಲ್ಲಿ ಮತ್ತೊಮ್ಮೆ ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದು ಆದೇಶಿಸಿದೆ.
ಮುಂದಿನ ಒಂದು ವರ್ಷದಲ್ಲಿ ಬಾಕಿಯಿರುವ 60 ಪ್ರಮುಖ ಸಾಕ್ಷಿಗಳ ವಿಚಾರಣೆ ನಡೆಸಬೇಕು ಎಂದು ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ನೇತೃತ್ವದ ಪೀಠ ನಿರ್ದೇಶನ ನೀಡಿದೆ.
ದರ್ಶನ್‌ಗೆ ರಾಜಾತಿಥ್ಯ ನೀಡಬೇಡಿ ಎಂದು ಹಿಂದೆ ನಿರ್ದೇಶನ ನೀಡಿದ್ದೆವು. ಅದರ ಅರ್ಥ ಅವರಿಗೆ ಜೈಲಿನಲ್ಲಿ ಯಾವುದೇ ಸೌಲಭ್ಯ ನೀಡಬೇಡಿ ಎಂದಲ್ಲ ನ್ಯಾಯಪೀಠ ಸ್ಪಷ್ಟಿಕರಿಸಿದೆ.
ವಿಚಾರಣೆ ತುಂಬಾ ನಿಧಾನವಾಗಿ ನಡೆಯುತ್ತಿದೆ. ಅದನ್ನು ದಿನನಿತ್ಯದ ಆಧಾರದ ಮೇಲೆ ವಿಚಾರಣೆ ಮಾಡಬೇಕು. ಅರ್ಜಿದಾರರಿಗೆ ಜೈಲಿನ ನಿಯಮದ ಅನುಸಾರ ಇತರ ವಿಚಾರಣಾಧೀನ ಕೈದಿಯಂತೆ ಸೌಕರ್ಯಗಳನ್ನು ಒದಗಿಸಬೇಕು. ಆರೋಪಿಯನ್ನು ಒಂಟಿಯಾಗಿರಿಸುವ ಅಗತ್ಯವಿಲ್ಲ ಎಂದು ಹೇಳಿದೆ.
