Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ತಂತ್ರಜ್ಞಾನ ಎಷ್ಟೇ ಮುಂದುವರಿದರೂ ಮುದ್ರಣ ಮಾಧ್ಯಮ ಚಿರಸ್ಥಾಯಿ: ಮುದ್ರಣ ಮಾಧ್ಯಮದ ಜೊತೆಗೆ ಪತ್ರಿಕಾ ವಿತರಕ ವೃತ್ತಿ ಕೂಡ ಶಾಶ್ವತ: ಕೆ.ವಿ.ಪ್ರಭಾಕರ

ತುಮಕೂರು : ತಂತ್ರಜ್ಞಾನ ಎಷ್ಟೇ ಮುಂದುವರೆದರೂ ಮುದ್ರಣ ಮಾಧ್ಯಮ ಚಿರಸ್ಥಾಯಿ. ಎಲ್ಲಿಯವರೆಗೂ ಮುದ್ರಣ ಮಾಧ್ಯಮ‌ ಇರುತ್ತದೋ ಅಲ್ಲಿಯವರೆಗೂ ಪತ್ರಿಕಾ ವಿತರಕ ವೃತ್ತಿ ಕೂಡ ಶಾಶ್ವತ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು.

ರಾಜ್ಯ ಪತ್ರಿಕಾ ವಿತರಕರ ಸಂಘ ಆಯೋಜಿಸಿದ್ದ ರಾಜ್ಯೋತ್ಸವ ಮತ್ತು ಪ್ರಶಸ್ತಿ ಪುರಸ್ಕೃತ ವಿತರಕರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪತ್ರಿಕಾ ಕ್ಷೇತ್ರದಲ್ಲಿ ನಿರಂತರ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಪತ್ರಿಕಾ ವಿತರಕರ ಶ್ರಮವನ್ನು ಗುರುತಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತೀ ವರ್ಷ ಒಂದು ಪ್ರಶಸ್ತಿಯನ್ನು ವಿತರಕರಿಗೆ ಮೀಸಲಿಟ್ಟರು. ಕಾರ್ಮಿಕ ಇಲಾಖೆ ವಿತರಕರ ನಿವೃತ್ತಿ ವಯಸ್ಸನ್ನು 59 ವರ್ಷದಿಂದ ಹೆಚ್ಚಿಸಿ 70 ವರ್ಷಕ್ಕೆ ನಿಗಧಿ ಮಾಡಿರುವುದು ಸಚಿವ ಸಂತೋಷ್ ಲಾಡ್ ಅವರ ಕಾಳಜಿಗೆ ಉದಾಹರಣೆ ಎಂದರು.

ಪತ್ರಿಕಾ ವಿತರಕರ ಬದುಕಿಗೆ ಸ್ಪಂದಿಸುವ ವಿಚಾರದಲ್ಲಿ ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗ ಅವರ ಕಾಳಜಿ ಮತ್ತು ಶ್ರಮ ಶ್ಲಾಘನೀಯ ಎಂದು ಮೆಚ್ಚುಗೆ ಸೂಚಿಸಿದರು.

ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರಜಾ ಪ್ರಗತಿ ಸಂಪಾದಕ ನಾಗಣ್ಣ, ಬಾಲ ಭವನ ಅಧ್ಯಕ್ಷ ಬಿ.ಆರ್.ನಾಯ್ಡು , ವಿತರಕರ ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ