Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪಾನಿಪುರಿ, ಕಬಾಬ್ ಗಳಲ್ಲಿ ಇನ್ಮುಂದೆ ಕೃತಕ ಬಣ್ಣ ಬಳಸುವುದು ನಿಷೇಧ

ಬೆಂಗಳೂರು : ಪಾನಿಪುರಿ, ಕಬಾಬ್, ಗೋಬಿ ಮಂಚೂರಿ ಸೇರಿ ಎಲ್ಲಾ ರೀತಿಯ ಖಾದ್ಯಗಳಲ್ಲಿ ಕೃತಕ ಬಣ್ಣ ಬಳಸುವುದನ್ನು ನಿಷೇಧಿಸಿ ಇಷ್ಟರಲ್ಲೇ ಸುತ್ತೋಲೆ ಹೊರಡಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ತಿಳಿಸಿದರು. ಸುದ್ದಿಗಾರರ ಜೊತೆ ಮಾತನಾಡಿ, ಕೃತಕ ಬಣ್ಣ ಬಳಸಿದರೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಡಿ ಏಳು ವರ್ಷ ಜೈಲು ಶಿಕ್ಷೆ ಹತ್ತು ಲಕ್ಷ ರೂಪಾಯಿ ದಂಡ ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಬಹುದು ಎಂದರು. ರೋಡ್ ಮೇನ್ ಪ್ಯಾಕ್ ಮಾಡಿದ ಆಹಾರಗಳಿಗೆ ಸೀಮಿತ ಪ್ರಮಾಣದಲ್ಲಿ ಬಳಕೆ ಮಾಡಲು ಅವಕಾಶ ಇದೆ. ಆದರೆ ಮನೆ, ಹೋಟೆಲ್ ಮತ್ತು ಇತರ ಕಡೆಗಳಲ್ಲಿ ಬಳಸುವುದಕ್ಕೆ ಅನುಮತಿ ಇಲ್ಲ. ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣಕ್ಕೆ ಬಳಸುವ ಕೆಲವು ಪದಾರ್ಥ ಆರೋಗ್ಯಕ್ಕೆ ಅಪಾಯಕಾರಿಯಾಗಿದೆ ಎಂದು ಅವರು ತಿಳಿಸಿದರು.

ಬಣ್ಣ ಬಳಸಿ ಮಾಡಿದ ಕಾಟನ್‌ ಕ್ಯಾಂಡಿಗಳನ್ನು ನಿಷೇಧಿಸಲಾಗುವುದು. ಬಣ್ಣ ರಹಿತ ಕಾಟನ್‌ ಕ್ಯಾಂಡಿ ತಯಾರಿಕೆಗೆ ನಿರ್ಬಂಧ ಇರುವುದಿಲ್ಲ.
ಕಾಟನ್‌ ಕ್ಯಾಂಡಿಗೆ ದಟ್ಟ ಮತ್ತು ಆಕರ್ಷಕ ಬಣ್ಣ ಬರಲು ರೋಡಮೈನ್‌–ಬಿಯನ್ನು ಬಳಸಲಾಗುತ್ತದೆ. ಇದನ್ನು ಆಹಾರದಲ್ಲಿ ಬಳಸುವುದಕ್ಕೆ ನಿಷೇಧವಿದೆ. ಇದು ಕ್ಯಾನ್ಸರ್‌ಗೆ ಕಾರಣವಾಗುವ ಅಂಶವನ್ನು ಹೊಂದಿದೆ. ಗೋಬಿ ಮಂಚೂರಿ, ಪಾನಿಪುರಿ, ಕಬಾಬ್‌ ಸೇರಿ ಎಲ್ಲ ರೀತಿಯ ಖಾದ್ಯಗಳಲ್ಲಿ ಕೃತಕ ಬಣ್ಣ ಬಳಸುವುದನ್ನು ನಿಷೇಧಿಸಿ ಸುತ್ತೋಲೆ ಹೊರಡಿಸಲಾಗುವುದು. ಬೀದಿ ಬದಿಯ ತಳ್ಳು ಗಾಡಿ ವ್ಯಾಪಾರಿಗಳಿಂದ ಹಿಡಿದು ಪಂಚ ತಾರಾ ಹೋಟೇಲ್‌ವರೆಗೂ ಆದೇಶ ಅನ್ವಯವಾಗುತ್ತದೆ. ಒಂದು ವೇಳೆ ಕಾನೂನು ಉಲ್ಲಂಘಿಸಿ ಆಹಾರ ಪದಾರ್ಥಗಳನ್ನು ತಯಾರಿಸಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ದಂಡ ಮತ್ತು ಜೈಲು ವಾಸವನ್ನೂ ಅನುಭವಿಸಬೇಕಾಗುತ್ತದೆ. ಗೋಬಿ ಮಂಚೂರಿ ಸೇರಿ ಯಾವುದೇ ಆಹಾರಗಳ ಮೇಲೆ ನಿಷೇಧ ವಿಧಿಸುವುದಿಲ್ಲ. ಆದರೆ ಇವುಗಳಿಗೆ ಬಳಸುವ ಕೃತಕ ಬಣ್ಣ ಮತ್ತು ರುಚಿಯನ್ನು ವರ್ಧಿಸಲು ಬಳಸುವ ರಾಸಾಯನಿಕಗಳನ್ನು ಬಳಸುವುದನ್ನು ನಿರ್ಬಂಧಿಸಲಾಗುವುದು. ಇವೆಲ್ಲ ಆಹಾರ ಪದಾರ್ಥಗಳಿಂದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಸಾರ್ವಜನಿಕರೂ ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದರು.

ಆರೋಗ್ಯ ಇಲಾಖೆಯ ಆಹಾರ ಸುರಕ್ಷತಾ ವಿಭಾಗವು ನಿಯಮಿತವಾಗಿ ಎಲ್ಲ ರೀತಿಯ ಹೋಟೆಲ್‌ಗಳು, ಬೀದಿ ಬದಿ ತಳ್ಳುಗಾಡಿಗಳಲ್ಲಿನ ಆಹಾರ ಪದಾರ್ಥಗಳನ್ನು ಪರೀಕ್ಷೆ ನಡೆಸುತ್ತದೆ. ಈ ಕಾರ್ಯಕ್ಕಾಗಿ ಹೆಚ್ಚಿನ ಸಿಬ್ಬಂದಿ ನೇಮಿಸಿಕೊಳ್ಳಲಾಗುವುದು. ಇದಕ್ಕಾಗಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ರಾಜ್ಯದಾದ್ಯಂತ ಮಾರಾಟ ಮಾಡುತ್ತಿರುವ ಗೋಬಿ ಮಂಚೂರಿ, ಕಾಟನ್‌ ಕ್ಯಾಂಡಿಗಳ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೆ ಒಳಪಡಿಸಲಾಗಿದೆ. ಸಾಮಾನ್ಯ ಹೋಟೆಲ್‌ಗಳಲ್ಲದೇ ತ್ರಿಸ್ಟಾರ್‌ ಹೋಟೆಲ್‌ಗಳಲ್ಲೂ ಕೃತಕ ಬಣ್ಣಗಳನ್ನು ಬಳಸಿವೆ. ಸದ್ಯಕ್ಕೆ ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿಯನ್ನು ಮಾತ್ರ ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಇತರ ಆಹಾರ ಪದಾರ್ಥಗಳನ್ನೂ ಪರೀಕ್ಷೆಗ ಒಳಪಡಿಸಲಾಗುವುದು.
ಕಾಟನ್‌ ಕ್ಯಾಂಡಿಯಲ್ಲಿ ಬಳಸುವ ರೋಡಮೈನ್‌–ಬಿ ಅತ್ಯಂತ ಅಪಾಯಕಾರಿ. ದಟ್ಟ ಗುಲಾಬಿ ಅಥವಾ ಇತರ ಬಣ್ಣ ನೀಡುವುದಕ್ಕಾಗಿ ಇದನ್ನು ಬಳಸುತ್ತಾರೆ. ಇದು ಕ್ಯಾನ್ಸರ್‌ಗೆ ಕಾರಣವಾಗುವುದರ ಜತೆಗೆ ಮಿದುಳು, ಮೂತ್ರಪಿಂಡ, ಹೃದಯಕ್ಕೂ ಹಾನಿ ಮಾಡಬಲ್ಲದು. ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣಕ್ಕಾಗಿ ಬಳಸುವ ಟಾರ್‌ ಟ್ರಾಸೈನ್‌, ಸನ್‌ಸೆಟ್‌ ಯೆಲ್ಲೊ ಮತ್ತು ಕಾರ್ಮೊಸಿನ್‌ ಆರೋಗ್ಯಕ್ಕೆ ಅಪಾಯಕಾರಿ ಎಂದು ಹೇಳಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ