Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೈ ತಪ್ಪಿದ ನೊಬೆಲ್-ಜಾಗತಿಕ ಶಾಂತಿಪ್ರಿಯ ಎಂದು ಹೇಳಿಕೊಂಡಿದ್ದ ಟ್ರಂಪ್ ಪರ ಶ್ವೇತ ಭವನ ಹೇಳಿದ್ದೇನು ಗೊತ್ತೇ ?

ವಾಷಿಂಗ್ಟನ್‌: ವೆನೆಜುವೆಲಾದ ಪ್ರಜಾಪ್ರಭುತ್ವ ಪರ ಹೋರಾಟಗಾರ್ತಿ ಮರಿಯಾ ಕೊರಿನಾ ಮಚಾಡೊ ಅವರಿಗೆ 2025 ರ ನೊಬೆಲ್ ಶಾಂತಿ ಪ್ರಶಸ್ತಿ ಘೋಷಿಸಿದ ನಂತರ ಅಮೆರಿಕ ಅಧ್ಯಕ್ಷ ಟ್ರಂಪ್‌ ಅವರಿಗೆ ಪ್ರಶಸ್ತಿ ಸಿಗದಕ್ಕೆ ಶ್ವೇತ ಭವನ ಖಾರವಾಗಿ ಪ್ರತಿಕ್ರಿಯಿಸಿದೆ.

ನೊಬೆಲ್ ಸಮಿತಿಯು ಶಾಂತಿಯ ಮೇಲೆ ರಾಜಕೀಯವನ್ನು ಇರಿಸುತ್ತದೆ ಎಂದು ಸಾಬೀತುಪಡಿಸಿದೆ” ಎಂದು ಶ್ವೇತಭವನದ ವಕ್ತಾರ ಸ್ಟೀವನ್ ಚೆಯುಂಗ್ ಶುಕ್ರವಾರ ಪ್ರಶಸ್ತಿ ಘೋಷಣೆಯ ನಂತರ ಹೇಳಿದ್ದಾರೆ. ಅಧ್ಯಕ್ಷ ಟ್ರಂಪ್ ಶಾಂತಿ ಒಪ್ಪಂದಗಳನ್ನು ಮಾಡಿಕೊಳ್ಳುವುದನ್ನು, ಯುದ್ಧಗಳನ್ನು ಕೊನೆಗೊಳಿಸುವುದನ್ನು ಮತ್ತು ಜೀವಗಳನ್ನು ಉಳಿಸುವುದನ್ನು ಮುಂದುವರಿಸುತ್ತಾರೆ. ಅವರು ಮಾನವೀಯ ಹೃದಯವನ್ನು ಹೊಂದಿದ್ದಾರೆ ಎಂದು ಅವರು ಹೇಳಿದ್ದಾರೆ.

ಟ್ರಂಪ್ ಸ್ವತಃ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕೆಲವು ಗಂಟೆಗಳ ಮೊದಲು, ಓಸ್ಲೋದಲ್ಲಿ, ನೊಬೆಲ್ ಸಮಿತಿಯು ಈ ವರ್ಷದ ನೊಬೆಲ್‌ ಶಾಂತಿ ಪ್ರಶಸ್ತಿಯನ್ನು ಮರಿಯಾ ಕೊರಿನಾ ಮಚಾಡೊ ಅವರಿಗೆ ಘೋಷಿಸಲಾಗಿದೆ. ಅವರು ಸದ್ಯಕ್ಕೀಗ ವೆನೆಜುವೆಲಾ ಸಂಸತ್ತಿನಲ್ಲಿ ವಿಪಕ್ಷದ ನಾಯಕಿಯಾಗಿದ್ದಾರೆ. ಮಚಾದೊ 20 ವರ್ಷಗಳ ಹಿಂದೆ ತಮ್ಮ ದೇಶದಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳಿಗಾಗಿ ಧ್ವನಿ ಎತ್ತಿದ್ದರು. ಈಗಲೂ ಅದನ್ನು ಮುಂದುವರಿಸಿದ್ದಾರೆ.
ವಿವಿಧ ಸಂಸ್ಥೆಗಳಿಗೆ ಅವರು ಸಲ್ಲಿಸಿದ ಸೇವೆಯ ಮೂಲಕ ಮಾರಿಯಾ ನ್ಯಾಯಾಂಗ ಸ್ವಾತಂತ್ರ್ಯ, ಮಾನವ ಹಕ್ಕುಗಳು ಮತ್ತು ಜನಪ್ರಿಯ ಪ್ರಾತಿನಿಧ್ಯಕ್ಕಾಗಿ ನಿರಂತರವಾಗಿ ಪ್ರತಿಪಾದಿಸುತ್ತ ಬಂದಿದ್ದಾರೆ.

ವೆನೆಜುವೆಲಾದ ಜನರಿಗೆ ಪ್ರಜಾಪ್ರಭುತ್ವ ಹಕ್ಕುಗಳನ್ನು ಉತ್ತೇಜಿಸುವಲ್ಲಿ ಮಾರಿಯಾ ಅವರ ಪಾತ್ರ ಪ್ರಮುಖವಾದದ್ದು. ಸರ್ವಾಧಿಕಾರದಿಂದ ಪ್ರಜಾಪ್ರಭುತ್ವಕ್ಕೆ ನ್ಯಾಯಯುತ ಮತ್ತು ಶಾಂತಿಯುತ ಪರಿವರ್ತನೆಯನ್ನು ಸಾಧಿಸುವ ಹೋರಾಟಕ್ಕಾಗಿ ಅವರಿಗೆ ನೊಬೆಲ್‌ ಪ್ರಶಸ್ತಿಯನ್ನು ನೀಡಲಾಗಿದೆ.
ಅಮೆರಿಕ ಅಧ್ಯಕ್ಷ ಟ್ರಂಪ್‌ ಸಹ ಪ್ರಶಸ್ತಿಯ ಪ್ರಬಲ ಆಕಾಂಕ್ಷಿಯಾಗಿದ್ದರು. ಕೆಲವು ತಿಂಗಳಿಂದ ಟ್ರಂಪ್ ತಮ್ಮನ್ನು ಜಾಗತಿಕ ಶಾಂತಿಪ್ರಿಯ ಎಂದು ಸಕ್ರಿಯವಾಗಿ ಪ್ರಚಾರ ಮಾಡಿಕೊಂಡಿದ್ದರು, ಅವರ 20 ಅಂಶಗಳ ಗಾಜಾ ಶಾಂತಿ ಒಪ್ಪಂದ ಯೋಜನೆಯನ್ನು ಎತ್ತಿ ತೋರಿಸಿದ್ದರು, ಹಲವಾರು ಯುದ್ಧಗಳನ್ನು ಕೊನೆಗೊಳಿಸಿದ್ದೇನೆ ಎಂದು ಪದೇಪದೇ ಹೇಳಿಕೊಂಡಿದ್ದರು. 8 ತಿಂಗಳಲ್ಲಿ 8 ಯುದ್ಧಗಳನ್ನು ನಿಲ್ಲಿಸಿದ್ದೇನೆ ಎಂದು ಪದೇಪದೆ ಹೇಳಿಕೊಳ್ಳುತ್ತಿದ್ದ ಟ್ರಂಪ್ ಅವರಿಗೆ ನೊಬೆಲ್ ಶಾಂತಿ ಸಿಕ್ಕಿಲ್ಲ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ