Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅನುತ್ತೀರ್ಣರಾದ ಪಿಯುಸಿ ವಿದ್ಯಾರ್ಥಿಗಳಿಗೆ ಸೂಚನೆ

ಬೆಂಗಳೂರು :
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ತಯಾರಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದೆ. ಅನುತ್ತೀರ್ಣರಾದ ವಿದ್ಯಾರ್ಥಿಗಳು ಏಪ್ರಿಲ್ 27 ರೊಳಗೆ ಅರ್ಜಿ ಸಲ್ಲಿಸಬೇಕು.
ಪುನರಾವರ್ತಿತರು ಅರ್ಜಿ ಸಲ್ಲಿಸುವ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ಹೊರಡಿಸಿರುವ ಸುತ್ತೋಲೆಯಲ್ಲಿ, ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಶುಲ್ಕ ಪಾವತಿಸಲು ಏಪ್ರಿಲ್‌ 21ರಿಂದ 28ರವರೆಗೆ ಅವಕಾಶ ಕಲ್ಪಿಸಲಾಗಿದೆ. ಮೇ 4ರ ಒಳಗೆ ದಂಡ ಸಹಿತ ಶುಲ್ಕ ಪಾವತಿಸಬೇಕಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮರು ಮೌಲ್ಯಮಾಪನದ ಫಲಿತಾಂಶಕ್ಕೆ ಕಾಯುವ ಅಗತ್ಯವಿಲ್ಲ ಎಂದು ಕೆಎಸ್‌ಇಎಬಿ ಅಧ್ಯಕ್ಷ ರಾಮಚಂದ್ರನ್‌ ಹೇಳಿದ್ದಾರೆ.
ಫಲಿತಾಂಶದ ಪ್ರತಿಯನ್ನು ಪಿಯು ಪರೀಕ್ಷಾ ಪೋರ್ಟಲ್‌ ಮೂಲಕ ಆಯಾ ವಿದ್ಯಾರ್ಥಿಗಳಿಗೆ ಕಳುಹಿಸಲಾಗುತ್ತದೆ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡುವುದಿಲ್ಲ. ಮಂಡಳಿ ನೀಡಿದ ಫಲಿತಾಂಶದ ಪಟ್ಟಿ ಆಧಾರದಲ್ಲಿ ಹಾಗೂ ಉತ್ತೀರ್ಣರಾದವರು ಫಲಿತಾಂಶ ತಿರಸ್ಕರಿಸಿ, ಫಲಿತಾಂಶದ ಪ್ರತಿ ಸಲ್ಲಿಸಿ ಪೂರಕ ಪರೀಕ್ಷೆ ತೆಗೆದುಕೊಳ್ಳಬಹುದು ಎಂದು ತಿಳಿಸಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳನ್ನು ಹೊರತು ಪಡಿಸಿ ಉಳಿದ ವಿದ್ಯಾರ್ಥಿಗಳು ಪಾವತಿಸಬೇಕಾದ ಪರೀಕ್ಷಾ ಶುಲ್ಕ, ಒಂದು ವಿಷಯಕ್ಕೆ-140 ರೂಪಾಯಿ. ಎರಡು ವಿಷಯಕ್ಕೆ- 270 ರೂಪಾಯಿ. ಮೂರು ಅಥವಾ ಹೆಚ್ಚಿನ ವಿಷಯಗಳು- 400 ರೂಪಾಯಿ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳಿಂದ ಕಡ್ಡಾಯವಾಗಿ ಪಡೆಯಬೇಕಾದ ಅಂಕಪಟ್ಟಿ ಶುಲ್ಕ- 50 ರೂಪಾಯಿ ಪಾವತಿಸಬೇಕಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ