Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

IPL ಅಂಕಪಟ್ಟಿಯಲ್ಲಿ ನಮ್ಮ RCB ಗೆ ಈಗ ಅಗ್ರಸ್ಥಾನ

ಬೆಂಗಳೂರು : ಬ್ಯಾಟರ್‌ಗಳ ಸ್ಫೋಟಕ ಆಟದ ನೆರವಿನಿಂದ ಸಿಎಸ್‌ಕೆ ವಿರುದ್ಧದ ಪಂದ್ಯವನ್ನು ಆರ್‌ಸಿಬಿ ತಂಡವು 43 ರನ್‌ಗಳಿಂದ ಗೆದ್ದು, ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು.

ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದ ಸಿಎಸ್‌ಕೆ ನಾಯಕ ಋತುರಾಜ್ ಗಾಯಕವಾಡ್ ಬೌಲಿಂಗ್ ಮಾಡಲು ನಿರ್ಧರಿಸಿದರು.

ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಆರ್‌ಸಿಬಿ ತಂಡಕ್ಕೆ ವಿರಾಟ್ ಕೊಹ್ಲಿ (28) ಹಾಗೂ ಫಿಲಿಪ್ ಸಾಲ್ಟ್ (46) ಉತ್ತಮ ಆರಂಭ ಒದಿಗಿಸಿದರು.

ಪಡಿಕ್ಕಲ್ ಅರ್ಧಶತಕ–ಪಾಟಿದಾರ್ ಸ್ಫೋಟಕ ಬ್ಯಾಟಿಂಗ್
ಫಿಲಿಪ್ ಸಾಲ್ಟ್ ಔಟ್ ಆಗುತ್ತಿದ್ದಂತೆ ಜೊತೆಯಾದ ಕನ್ನಡಿಗ ಪಡಿಕ್ಕಲ್ ಹಾಗೂ ನಾಯಕ ರಜತ್ ಪಾಟಿದಾರ್ ಸಿಎಸ್‌ಕೆ ಬೌಲರ್‌ಗಳ ಮೇಲೆ ಸವಾರಿ ಮಾಡಿದರು. ಪಡಿಕ್ಕಲ್ ಅರ್ಧಶತಕ ಸಿಡಿಸಿದರೆ, ಪಾಟಿದಾರ್ ಸ್ಫೋಟಕ 48 ರನ್ ಕಲೆ ಹಾಕಿದರು.

ಸಿಎಸ್‌ಕೆ ಬೆವರಿಳಿಸಿದ ಟಿಮ್
ಚಿನ್ನಸ್ವಾಮಿ ಮೈದಾನದಲ್ಲಿ ಅಬ್ಬರಿಸಿದ ಟಿಮ್ ಡೇವಿಡ್ ಬೌಂಡರಿ–ಸಿಕ್ಸರ್‌ಗಳ ಸುರಿಮಳೆ ಸುರಿಸಿದರು. ಅವರು ಕೇವಲ 25 ಎಸೆತಗಳಲ್ಲಿ 3 ಬೌಂಡರಿ, 8 ಸಿಕ್ಸರ್ ನೆರವಿನಿಂದ 70 ರನ್ ಬಾರಿಸಿದರು.

ಸಿಎಸ್‌ಕೆಗೆ ಆರಂಭಿಕ ಆಘಾತ
251 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಸಿಎಸ್‌ಕೆ ತಂಡಕ್ಕೆ ಆರಂಭಿಕ ಆಘಾತ ಎದುರಾಯಿತು. ಸಂಜು ಸ್ಯಾಮ್ಸನ್ ಹಾಗೂ ನಾಯಕ ಗಾಯಕವಾಡ್ ಹಾಗೂ ಆಯುಷ್ ಒಬ್ಬರ ಹಿಂದೆ ಒಬ್ಬರಂತೆ ಪೆವಿಲಿಯನ್ ಸೇರಿಕೊಂಡರು.

ಸರ್ಫರಾಜ್ ಹೋರಾಟ
ಆರಂಭಿಕ ಆಘಾತದ ಹೊರತಾಗಿಯೂ ಉತ್ತಮ ಬ್ಯಾಟಿಂಗ್ ನಡೆಸಿದ ಸರ್ಫರಾಜ್ ಖಾನ್ ಸ್ಫೋಟಕ ಅರ್ಧಶತಕ ಸಿಡಿಸಿ ಮಿಂಚದರು. ಅವರು ಕೇವಲ 25 ಎಸೆತಗಳಲ್ಲಿ 50 ರನ್ ಸಿಡಿಸಿ ಕೃನಾಲ್ ಪಾಂಡ್ಯಗೆ ವಿಕೆಟ್ ಒಪ್ಪಿಸಿದರು.

ಕೊನೆಯಲ್ಲಿ ಪ್ರಶಾಂತ್ ವೀರ್, ಜೆಮಿ ಓವರ್ಟನ್ ಹೋರಾಟ ನಡೆಸಿದರಾದರು, ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಸಿಎಸ್‌ಕೆ 19.4 ಓವರ್‌ಗಳಲ್ಲಿ 207 ರನ್‌ಗಳಿ ಆಲೌಟ್ ಆಗಿ 43 ರನ್‌ಗಳ ಸೋಲು ಅನುಭವಿಸಿತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ