Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದ್ವೇಷ ಬಿತ್ತುವವರಿಗೆ ತಕ್ಕ ಶಾಸ್ತಿಯಾಗಬೇಕು

ಹಾಸನ: ಹಾಸನ ನಗರಸಭೆಯನ್ನು ನಗರಪಾಲಿಕೆಯನ್ನಾಗಿ ಮೇಲ್ದರ್ಜೆಗೆ ಏರಿಸಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಹಾಸನಾಂಬ ದೇವರ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಹೇಮಾವತಿ ಜಲಾಶಯದ ಪ್ರದೇಶದಲ್ಲಿ ಉದ್ಯಾನವನ ನಿರ್ಮಿಸಲು ಸರ್ಕಾರ ಪ್ರಮಾಣಿಕ ಪ್ರಯತ್ನ ಮಾಡಲಿದೆ. ಹಾಸನ ವಿಮಾನ ನಿಲ್ದಾಣ ತ್ವರಿತವಾಗಿ ಪೂರ್ಣಗೊಳಿಸಲಾಗುವುದು. ಹಾಸನ ಜಿಲ್ಲೆಗೆ ಹೆಚ್ಚಿನ ಅಭಿವೃದ್ಧಿಗಾಗಿ ಅವಶ್ಯಕ ಪ್ರಸ್ತಾವನೆಯನ್ನು ಜಿಲ್ಲಾಧಿಕಾರಿಗಳು ಸಲ್ಲಿಸಿದರೆ, ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿಒಳ್ಳೆ ಮಳೆ ಬೆಳೆಯಾಗಿದ್ದು, ಎಲ್ಲಾ ಜಲಾಶಯಗಳು ತುಂಬಿವೆ. ಜಲಾಶಯಗಳಲ್ಲಿ ಶೇ. 90 ರಷ್ಟು ನೀರು ತುಂಬಿದೆ ಎಂದರು. ಸಮಾಜದಲ್ಲಿ ಅಸಮಾನತೆಯನ್ನು ಹೋಗಲಾಡಿಸುವುದು ನಮ್ಮೆಲ್ಲರ ಕರ್ತವ್ಯ. 2013 ರಿಂದ 2018 ರವರೆಗೆ ಮುಖ್ಯಮಂತ್ರಿಯಾಗಿದ್ದಾಗ , ಬಡವರ ಕಾರ್ಯಕ್ರಮಗಳನ್ನು ಜಾರಿ ಮಾಡಲಾಗಿತ್ತು. 2023 ರಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿಯಾದಾಗ, ಗ್ಯಾರಂಟಿ ಯೋಜನೆಗಳ ಮೂಲಕ ಎಲ್ಲ ಜಾತಿ ಧರ್ಮದ ಭಾಷೆಯ ಬಡವರಿಗೆ ಆರ್ಥಿಕವಾಗಿ ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸವನ್ನು ಮಾಡಲಾಗಿದೆ ಎಂದರು.

*ಟೀಕೆಗಳನ್ನು ಮೆಟ್ಟಿ ನಿಂತು ಗ್ಯಾರಂಟಿಗಳ ಜಾರಿ*

ಅಧಿಕಾರಕ್ಕೆ ಬಂದ ಎಂಟು ತಿಂಗಳೊಳಗಾಗಿ ಗ್ಯಾರಂಟಿಗಳನ್ನು ಜಾರಿ ಮಾಡಲಾಯಿತು. ಈ ಯೋಜನೆಗಳಿಂದ ಖಜಾನೆ ಖಾಲಿಯಾಗುತ್ತದೆ , ದಿವಾಳಿಯಾಗುತ್ತದೆ ಎಂದು ವಿರೋಧಪಕ್ಷಗಳು ಟೀಕಿಸಿದ್ದವು. ಆ ಎಲ್ಲ ಟೀಕೆಗಳನ್ನು ಮೆಟ್ಟಿ ನಿಂತು, ಗ್ಯಾರಂಟಿಗಳನ್ನು ಜಾರಿ ಮಾಡಿ , ಬಡವರಿಗೆ ಶಕ್ತಿ ತುಂಬಲಾಗಿದೆ. ಬಡವರು ಖುಷಿಯಾಗಿದ್ದು, ಸಮಾಧಾನದಿಂದ್ದಾರೆ. ಆದರೆ, ಬಿಜೆಪಿ ಹಾಗೂ ಜೆಡಿಎಸ್ ನವರಿಗೆ ಸಮಾಧಾನವಾದಂತಿಲ್ಲ. ನಮ್ಮ ಸರ್ಕಾರ ಬಡವರ ಪರವಾಗಿ , ಅವರಿಗೆ ನ್ಯಾಯ ಒದಗಿಸುವ ಕೆಲಸವನ್ನು ಮಾಡುತ್ತಿದ್ದು, ಸಾಮಾಜಿಕ ನ್ಯಾಯ ಹಾಗೂ ಬಡವರ ಪರವಾಗಿಲ್ಲದವರಿಗೆ ಇದರಿಂದ ಸಮಾಧಾನವಿಲ್ಲದಂತಾಗಿದೆ ಎಂದರು.

*ದ್ವೇಷ ಬಿತ್ತುವವರಿಗೆ ತಕ್ಕ ಶಾಸ್ತಿಯಾಗಬೇಕು*

ನಾನು ಎರಡನೇ ಬಾರಿಗೆ ಹಾಸನಾಂಬ ದೇವಿ, ಸಿದ್ದೇಶ್ವರಸ್ವಾಮಿ, ಗಣಪತಿ ದೇವರ ದರ್ಶನವನ್ನು ಪಡೆದು, ರಾಜ್ಯದ ಎಲ್ಲ ಜನತೆಗೆ ಸನ್ಮಂಗಳ ಉಂಟು ಮಾಡಲಿ ಎಂದು ಪ್ರಾರ್ಥಿಸಿದ್ದೇನೆ. ನಾವು ಮನುಜರಾಗಿ ಪರಸ್ಪರ ದ್ವೇಷ ಇರಬಾರದು. ಸಮಾಜದಲ್ಲಿ ದ್ವೇಷವನ್ನು ಬಿತ್ತುವಂತಹ ಪಟ್ಟಭದ್ರ ಹಿತಾಸಕ್ತಿಗಳಿಗೆ ತಕ್ಕ ಶಾಸ್ತಿ ಮಾಡುವಂತೆ ದೇವರನ್ನು ಕೋರಿದ್ದೇನೆ. ಈ ಬಾರಿ ದಸರಾ ಉತ್ಸವದಂತೆ ಹಾಸನಾಂಬ ಜಾತ್ರೆಯನ್ನೂ ಅದ್ದೂರಿಯಾಗಿ ಆಯೋಜಿಸಲಾಗಿದೆ. ನಮ್ಮ ರಾಜ್ಯ ಸರ್ವಜನಾಂಗದ ಶಾಂತಿಯ ತೋಟವಾಗಬೇಕು ಎಂದರು.

*ಸರ್ಕಾರದ ಯೋಜನೆಗಳು ಜನರಿಗೆ ತಲುಪಬೇಕು*

ಹಾಸನದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಅಧಿಕಾರಿಗಳನ್ನು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಅಭಿನಂದಿಸಿದರು. ಜನಪರ ಯೋಜನೆಗಳನ್ನು ಜನರಿಗೆ ತಲುಪಿಸಿದಾಗ ಮಾತ್ರು ಸರ್ಕಾರದ ಉದ್ದೇಶ ಸಾರ್ಥಕವಾಗುತ್ತದೆ ಎಂದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ