Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಮತ್ತೊಂದು ಪ್ರಕರಣ ಬಯಲಿಗೆ ಕಂಪನಿ ಮೇಲೆ ದಾಳಿ ನಡೆಸಿದ ಅಧಿಕಾರಿಗಳು

ಶಿವಾನಂದ ನೀಲಣ್ಣವರ ಆಯ್ತು : ಈಗ  ಬೆಳಗಾವಿಯಲ್ಲಿ ಮತ್ತೊಂದು ಕಂಪನಿ ಮೇಲೆ ದಾಳಿ

ಬೆಳಗಾವಿ: ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಸಾವಿರಾರು ಕೋಟಿ ರೂಪಾಯಿಗಳ ದೊಡ್ಡ ಹಗರಣದ ತನಿಖೆ ಪ್ರಗತಿಯಲ್ಲಿದೆ. ಈ ನಡುವೆ ಬೆಳಗಾವಿ ನಗರದಲ್ಲಿ ಮತ್ತೊಂದು ಕಂಪನಿ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಭಾಗ್ಯ ನಗರದಲ್ಲಿರುವ ‘ಆದಿತ್ಯರಾಜ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಕಚೇರಿ ಮೇಲೆ ಎಸಿ ಶ್ರವಣ ನಾಯಕ ನೇತೃತ್ವದಲ್ಲಿ ಸಹಕಾರ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ದಾಳಿ ನಡೆಸುತ್ತಿದ್ದಂತೆ ಕಂಪನಿಯ ಆಡಳಿತ ಮಂಡಳಿ, ತಕ್ಷಣವೇ ತನ್ನ ಅಧಿಕೃತ ವೆಬ್‌ಸೈಟ್ ಅನ್ನು ಸ್ಥಗಿತಗೊಳಿಸಿದೆ. 

ಮಹಾರಾಷ್ಟ್ರ ಮೂಲದ ಬಲರಾಮ ಮಾನೆ ಎಂಬಾತ ಈ ಆದಿತ್ಯರಾಜ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸೂತ್ರಧಾರ. ರಾಜ್ಯದ ವಿವಿಧೆಡೆ ಒಟ್ಟು 7 ಬ್ರಾಂಚ್‌ಗಳನ್ನು ತೆರೆದು ದಂಧೆ ನಡೆಸುತ್ತಿದ್ದ ಎನ್ನಲಾಗಿದೆ.

ಕಳೆದ 8 ವರ್ಷಗಳಿಂದ ಬೆಳಗಾವಿಯಲ್ಲಿ ಯಾರಿಗೂ ಸಂಶಯ ಬಾರದಂತೆ ವ್ಯವಹಾರ ನಡೆಸುತ್ತಿದ್ದ ಈ ಸಂಸ್ಥೆ ಅಧಿಕಾರಿಗಳ ದಾಳಿಯ ಸುಳಿವು ಸಿಗುತ್ತಿದ್ದಂತೆಯೇ ನಿರ್ವಹಣೆ ನೆಪ ಹೂಡಿ ತನ್ನ ಸರ್ವರ್ ಅನ್ನು ಕಂಪ್ಲೇಟ್ ಆಗಿ ಡೌನ್ ಮಾಡಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ದಾಳಿ ವೇಳೆ ಆನ್‌ಲೈನ್ ಮೂಲಕ ನೂರಾರು ಕೋಟಿ ರೂಪಾಯಿಗಳ ಬೃಹತ್ ಹಣ ವರ್ಗಾವಣೆ ಆಗಿರುವುದು ಪತ್ತೆಯಾಗಿದೆ. ಸಾರ್ವಜನಿಕರಿಗೆ ಒಂದು ಲಕ್ಷ ರೂಪಾಯಿ ಹೂಡಿಕೆಗೆ ತಿಂಗಳಿಗೆ 3 ಸಾವಿರ ರೂಪಾಯಿಗಳ ಭಾರಿ ಬಡ್ಡಿ ಕೊಡುವುದಾಗಿ ಆಮಿಷ ಒಡ್ಡಲಾಗಿತ್ತು. 

ಈ ಆಸೆಗೆ ಬಿದ್ದ ಸಾವಿರಾರು ಜನರು ಹಣವನ್ನು ಇಲ್ಲಿ ಠೇವಣಿ ಇಟ್ಟಿದ್ದಾರೆ. ಸದ್ಯ ಕಚೇರಿಯಲ್ಲಿದ್ದ ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು ಹಣದ ಮೂಲದ ತಪಾಸಣೆಗೆ ಮುಂದಾಗಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ