Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಳೆಯ ನಾಣ್ಯಗಳು ಇತಿಹಾಸದ ಘಟನೆಗಳಿಗೆ ಸಾಕ್ಷಿಯಾಗಿ ನಿಂತಿವೆ: ಲಂಕೇಶ ಗಸ್ತಿ

ಬೆಳಗಾವಿ : ಹಳೆಯ ನಾಣ್ಯಗಳು ಇತಿಹಾಸದ ಘಟನೆಗಳಿಗೆ ಸಾಕ್ಷಿಯಾಗಿ ನಿಂತಿವೆ. ವಿದ್ಯಾರ್ಥಿಗಳು ಅವುಗಳ ಬಗ್ಗೆ ಕುತೂಹಲದಿಂದ ಅಂತಹ ನಾಣ್ಯಗಳ ಸಂಗ್ರಹಕ್ಕೆ ಆಸಕ್ತಿ ವಹಿಸಬೇಕು ಎಂದು ಹುಕ್ಕೇರಿ ತಾಲೂಕು ನರಸಿಂಗಪುರದ ಹವ್ಯಾಸಿ ನಾಣ್ಯ ಸಂಗ್ರಹಕಾರ ಲಂಕೇಶ ಗಸ್ತಿ ಹೇಳಿದರು.

ಪಾಶ್ಚಾಪುರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಿದ್ದ ಹಳೆಯ ನಾಣ್ಯಗಳ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

ಆಧಾರವಿಲ್ಲದೆ ಇತಿಹಾಸವಿಲ್ಲ ಎಂಬುವುದು ಇತಿಹಾಸದ ಮೂಲ ಮಂತ್ರ. ಈ ಆಧಾರಗಳಲ್ಲಿ ನಾಣ್ಯಗಳು ಪ್ರಮುಖವಾಗಿವೆ. ನಾಣ್ಯಗಳ ಅಧ್ಯಯನವನ್ನು ನ್ಯೂಮಿಸ್ಮಾಟಿಕ್ಸ್ ಎಂದು ಕರೆಯಲಾಗಿದೆ. ನಾಣ್ಯಗಳು ಇತಿಹಾಸದಲ್ಲಿ ಹುದುಗಿ ಹೋದ ಅದೆಷ್ಟೋ ವಿಷಯಗಳನ್ನು ನಮಗೆ ತಿಳಿಸುತ್ತವೆ. ಪುರಾತನ ನಾಣ್ಯಗಳು ಅನೇಕ ಘಟನೆಗಳಿಗೆ ಸಾಕ್ಷಿಯಾಗಿ ನಿಂತಿವೆ. ಇತಿಹಾಸದ ವಿದ್ಯಾರ್ಥಿಗಳು ನಾಣ್ಯಗಳ ಬಗ್ಗೆ ತಿಳಿಯುವುದು ತುಂಬಾ ಮುಖ್ಯವಾಗಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ.ಶ್ರೀಧರ ಕುಲಕರ್ಣಿ ಮಾತನಾಡಿ, ವಿದ್ಯಾರ್ಥಿಗಳು ಹಳೆಯ ನಾಣ್ಯ ಸಂಗ್ರಹಿಸಿ ಅವುಗಳ ಬಗ್ಗೆ ಅಮೂಲ್ಯ ಮಾಹಿತಿ ಪಡೆಯಬೇಕು ಎಂದು ತಿಳಿಸಿದರು.

ಕಾಲೇಜಿನ ಐಕ್ಯೂಎಸಿ ವಿಭಾಗದ ಸಮನ್ವಯಾಧಿಕಾರಿ ಕಲ್ಪನಾ ಪೈನಗೋನಿ, ದೈಹಿಕ ಶಿಕ್ಷಣ ನಿರ್ದೇಶಕ ಎ.ಎ.ನದಾಫ್ ಉಪಸ್ಥಿತರಿದ್ದರು.

ಕಾರ್ತಿಕ್ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಇತಿಹಾಸ ವಿಭಾಗದ ಮುಖ್ಯಸ್ಥೆ ಮಾನಸಾ ಪೂಜಾರಿ ಸ್ವಾಗತಿಸಿದರು. ಇತಿಹಾಸ ವಿಭಾಗದ ಉಪನ್ಯಾಸಕ ರಮೇಶ ಪ್ರಾಸ್ತಾವಿಕವಾಗಿ ಮಾತನಾಡಿದರು. ಪೂಜಾ ಬಸರಗಿ ನಿರೂಪಿಸಿದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಮುಖ್ಯಸ್ಥ ಶಕೀಬ್ ವಂದಿಸಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆಕಾನೂನು ವಿದ್ಯಾರ್ಥಿಗಳು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು: ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆಖ್ಯಾತ ನಟ ದರ್ಶನ್ ಗೆ ಇನ್ನೊಂದು ವರ್ಷ ಜಾಮೀನು ಇಲ್ಲ : ಸುಪ್ರೀಂ ಕೋರ್ಟ್ಸಿದ್ದಾಪುರ : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ ; ಜನಗಣತಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಶಿಕ್ಷಕಿ ಸಾವುಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ದಾರುಣ ಸಾವುಒಂದೇ ಸಲ 224 ವಿಧಾನ ಸಭೆ ಸ್ಥಾನ ಗೆದ್ದು ಸಿಎಂ ಆಗುತ್ತೇನೆ ಎಂದಿದ್ದ ನೀಲಣ್ಣನವರಿಗೆ ಅಧಿಕಾರಿಗಳಿಂದ ಶಾಕ್ ..!ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆಗೆ 100ಕ್ಕೂ ಹೆಚ್ಚು ಮಂದಿ ಸಾವುಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ