Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸತತ ಓದು, ಅಧ್ಯಯನವಿಲ್ಲದೆ ಕೃತಿ ಬರೆಯಲು ಸಾಧ್ಯವಿಲ್ಲ :  ಡಾ.ಬಸವರಾಜ ಜಗಜಂಪಿ

ಬೆಳಗಾವಿ: ಸತತ ಓದು, ಅಧ್ಯಯನವಿಲ್ಲದೆ ಕೃತಿ ಬರೆಯಲು ಸಾಧ್ಯವಿಲ್ಲ ಎಂದು ಹಿರಿಯ ಸಾಹಿತಿ ಡಾ. ಬಸವರಾಜ ಜಗಜಂಪಿ ಹೇಳಿದ್ದಾರೆ.


ರಂಗಸೃಷ್ಟಿ ಸಾಂಸ್ಕೃತಿಕ ಸಂಘ (ರಿ), ಬೆಳಗಾವಿ ವತಿಯಿಂದ ಡಾ. ಪಿ. ಜಿ. ಕೆಂಪಣ್ಣವರ ಅವರ ‘ಜಿನ ದೀವಿಗೆ’ ಹಾಗೂ ಶಿರೀಷ ಜೋಶಿ ಅವರ ‘ಮರಾಠಿಯೊಳಗೊಂದು ಕನ್ನಡ ಗತವೈಭವ’ ಕೃತಿಗಳ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಇಂದು ಬಿಡುಗಡೆಯಾಗಿರುವ ಎರಡೂ ಕೃತಿಗಳು ಅತ್ಯಂತ ತಳಸ್ಪರ್ಶಿಯಾಗಿ ಬರೆದವುಗಳಾಗಿವೆ. ಬಹಳಷ್ಟು ಅಧ್ಯಯನ ಮಾಡಿ ಬರೆದವುಗಳಾಗಿವೆ ಎಂದು ಅವರು ಹೇಳಿದರು.

ಧರ್ಮ ಸಹಿಷ್ಣುತೆ ಎಂದರೆ ಏನು ಎನ್ನುವುದನ್ನು ಜೈನ ಧರ್ಮೀಯರಿಂದ ಕಲಿತುಕೊಳ್ಳಬೇಕು ಎಂದ ಅವರು, ಕನ್ನಡ ಸಾರಸ್ವತ ಲೋಕಕ್ಕೆ ಜೈನ ಧರ್ಮೀಯರ ಕೊಡುಗೆ ಸಾಕಷ್ಟಿದೆ ಎಂದರು.

ಸಾಹಿತಿ ಎಲ್. ಎಸ್. ಶಾಸ್ತ್ರಿ ಮಾತನಾಡಿ, ಕನ್ನಡ- ಮರಾಠಿ ಬಾಂಧವ್ಯದ ದೃಷ್ಟಿಯಿಂದ ಅತ್ಯಂತ ಮಹತ್ವದ ಕೃತಿಯಾಗಿರುವ ಮರಾಠಿಯೊಳಗೊಂದು ಕನ್ನಡ ಗತವೈಭವ ಮರಾಠಿ ಭಾ಼ಷೆಗೂ ಅನುವಾದವಾಗಬೇಕೆಂದರು
ಇಬ್ಬರು ಲೇಖಕರೂ ಬಹಳಷ್ಟು ಅಧ್ಯಯನ ಮಾಡಿದವರಾಗಿದ್ದು, ಮೌಲಿಕ ಕೃತಿಗಳನ್ನು ನೀಡಿದ್ದಾರೆ ಎಂದರು.

ಹಿರಿಯ ಲೇಖಕಿ ಡಾ. ಗುರುದೇವಿ ಹುಲೆಪ್ಪನವರಮಠ ಮತ್ತು ಪ್ರಾಧ್ಯಾಪಕ ಡಾ. ಎಚ್. ಬಿ. ಕೋಲ್ಕಾರ ಕೃತಿಗಳ ಕುರಿತು ಮಾತನಾಡಿದರು.

ರಂಗಸೃಷ್ಟಿ ಸಾಂಸ್ಕೃತಿಕ ಸಂಘದ ಅಧ್ಯಕ್ಷ ರಮೇಶ ಜಂಗಲ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಎಂ.ಕೆ.ಹೆಗಡೆ ಪ್ರಾಸ್ತಾವಿಕ ಮಾತನಾಡಿದರು. ಕೃತಿಕಾರರಾದ ಡಾ.ಪಿ.ಜಿ.ಕೆಂಪಣ್ಣವರ ಹಾಗೂ ಶಿರೀಷ ಜೋಶಿ ಮಾತನಾಡಿದರು. ಶರಣಯ್ಯ ಮಠಪತಿ ಸ್ವಾಗತಿಸಿ, ನಿರೂಪಿಸಿದರು.  ಶುಭಾ ಶ್ರೀನಾಥ್ ಜೋಶಿ ವಂದಿಸಿದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಕರೆ: ಪ್ರವೀಣ ಗುಡಿಜಗತ್ತಿನ ಆವಿಷ್ಕಾರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರ ಅಪಾರ: ಕುಲಪತಿ ಸಿ. ಎಂ. ತ್ಯಾಗರಾಜ ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆಕೌಶಲ್ಯ ಅಭಿವೃದ್ಧಿ ಯುವಕರ ಭವಿಷ್ಯದ ಕೀಲಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಕಾರ್ಯ ಸ್ತುತ್ಯಾರ್ಹ : ಪ್ರೊ. ಹೊಸಕೋಟಿಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿನ್ಯಾನೋ ಜಾಥಾ-2026' ಕಾರ್ಯಕ್ರಮ