Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಈರುಳ್ಳಿ ದರ ಮತ್ತೆ ಏರಿಕೆ: ಗ್ರಾಹಕರಿಗೆ ಶಾಕ್

ಬೆಂಗಳೂರು : ಈರುಳ್ಳಿ ಬೆಲೆ ಏರಿಕೆಯಾಗುತ್ತಲೇ ಇದ್ದು ಗ್ರಾಹಕರಿಗೆ ಕಣ್ಣಿರಿಳಿಸುತ್ತಿದೆ. ಸದ್ಯ ರಾಜ್ಯದಲ್ಲಿ‌ ಮಳೆ ತಗ್ಗಿದೆ. ಆದರೂ ಕಳೆದ ತಿಂಗಳು ಬಂದಂತಹ ಅಕಾಲಿಕ ಮಳೆಗೆ ಈರುಳ್ಳಿ ಬೆಳೆ ನೀರು‌ಪಾಲಾಗಿದ್ದು, ಮಳೆಯಿಂದ ರಕ್ಷಿಸಿದ ಈರುಳ್ಳಿ ಇಟ್ಟಲ್ಲೇ ಕೊಳೆತು ಹೋಗುತ್ತಿದೆ. ಹೀಗಾಗಿ ದರ ಏರಿಕೆಯಾಗಿದೆ. ಕೆಜಿಗೆ 50 ರೂ. ಇದ್ದ ಈರುಳ್ಳಿಯ ಬೆಲೆ ಇದೀಗ 60 ರಿಂದ 80 ರೂಪಾಯಿ ವರೆಗೆ ಏರಿಕೆಯಾಗಿದೆ.

ಕಳೆದ ಮೂರು ತಿಂಗಳಿನಿಂದ ಈರುಳ್ಳಿಯ ಬೆಲೆ ಏರಿಕೆಯಾಗುತ್ತಲೇ ಇದೆ. ಮಳೆ ಇಲ್ಲದಿದ್ದರೂ ಬೆಲೆ 70 ರ ಗಡಿ ದಾಟಿದೆ. ಕಳೆದ ತಿಂಗಳು ಸುರಿದ ಭಾರಿ ಮಳೆಯ ಪರಿಣಾಮ ನಿರೀಕ್ಷೆಯಷ್ಟು ಈರುಳ್ಳಿ ಮಾರುಕಟ್ಟೆಗೆ ಬಂದಿಲ್ಲ. ಬಂದಂತಹ ಅಲ್ಪಸ್ವಲ್ಪ ಈರುಳ್ಳಿಯ ಗುಣಮಟ್ಟವೂ ಚೆನ್ನಾಗಿಲ್ಲ.‌ ಹೀಗಾಗಿ ಸದ್ಯ ಈರುಳ್ಳಿಯನ್ನು ಮಹಾರಾಷ್ಟದಿಂದ ಆಮದು ಮಾಡಿಕೊಳ್ಳಲಾಗುತ್ತಿದೆ.‌ ಆದರೆ, ಮಹಾರಾಷ್ಟ್ರದಿಂದಲೂ ನಿರೀಕ್ಷಿತ ಪ್ರಮಾಣದಲ್ಲಿ ಈರುಳ್ಳಿ‌ ಪೂರೈಕೆಯಾಗುತ್ತಿಲ್ಲ. ಇದು ಬೆಲೆ ಏರಿಕೆಗೆ ಮುಖ್ಯ ಕಾರಣವಾಗಿದೆ.

ಹೆಚ್ಚಿದ ಈರುಳ್ಳಿ ಬೇಡಿಕೆ
ಒಂದೆಡೆ ಪೂರೈಕೆ ಕಡಿಮೆಯಾಗಿದ್ದರೆ, ಮತ್ತೊಂದೆಡೆ ಬೇಡಿಕೆಯೂ ಗಣನೀವಾಗಿ ಹೆಚ್ಚಿದೆ. ಪರಿಣಾಮವಾಗಿ ಬೆಲೆ ಏರಿಕೆಯಾಗುತ್ತಿದೆ. ಈರುಳ್ಳಿಯ ಬೆಲೆ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ.

ಸದ್ಯ ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿಗೆ 70 ರಿಂದ 80 ರೂ. ಇದ್ದರೆ, ಸಣ್ಣಪುಟ್ಟ ಅಂಗಡಿಗಳಲ್ಲಿ ಚಿಲ್ಲರೆ ಮಾರಾಟ ದರ 90 ರೂ. ಆಗಿದೆ.‌ ಮುಂದಿನ ದಿನಗಳಲ್ಲಿ 100 ರ ಗಡಿದಾಟುವ ಸಾಧ್ಯತೆಗಳಿವೆ.

ಬೆಂಗಳೂರಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ (ಎಪಿಎಂಸಿ) 100,480 ಚೀಲ ಈರುಳ್ಳಿ ಬಂದಿದ್ದು, ಈ ಪೈಕಿ ಮಹಾರಾಷ್ಟ್ರದಿಂದ 8-10 ಲಾರಿ ಉತ್ತಮ ಗುಣಮಟ್ಟದ ಹಳೆಯ ದಾಸ್ತಾನು ಈರುಳ್ಳಿ ಬಂದಿದೆ. ಈ ಉನ್ನತ ದರ್ಜೆಯ ಈರುಳ್ಳಿ ಪ್ರತಿ ಕ್ವಿಂಟಲ್‌ಗೆ 7,200 ರಿಂದ 7,500 ರೂ.ಗಳ ದರದಲ್ಲಿ ಮಾರಾಟವಾಗುತ್ತಿದೆ. ಕಡಿಮೆ ಗುಣಮಟ್ಟದ ಸ್ಥಳೀಯ ಈರುಳ್ಳಿ ಕ್ವಿಂಟಲ್‌ಗೆ 1,500 ರಿಂದ 5,500 ರೂ. ವರೆಗೆ ಮಾರಾಟವಾಗುತ್ತಿದೆ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ