Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶನಿವಾರ ಮಹಾರಾಷ್ಟ್ರ ಬಂದ್ ಕರೆ ನೀಡಿದ ವಿರೋಧ ಪಕ್ಷಗಳು

ಬದ್ಲಾಪುರ: ಮಹಾರಾಷ್ಟ್ರದ ಬದ್ಲಾಪುರದಲ್ಲಿ ಪ್ರತಿಷ್ಠಿತ ಶಾಲೆಯ ನರ್ಸರಿ ವಿಭಾಗದ ಇಬ್ಬರು 4 ವರ್ಷದ ಹೆಣ್ಣು ಮಕ್ಕಳ ಮೇಲೆ ಸ್ವಚ್ಛತಾ ಸಿಬ್ಬಂದಿಯೊಬ್ಬ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಇದೀಗ ಆ.24ರ ಶನಿವಾರ ರಾಜ್ಯ ಬಂದ್‌ಗೆ ಕರೆ ನೀಡಲಾಗಿದೆ.

ಮಹಿಳೆಯರ ಸುರಕ್ಷತೆಗೆ ಆಗ್ರಹಿಸಿ ಮಹಾ ವಿಕಾಸ್ ಅಘಾಡಿ ಮಹಾರಾಷ್ಟ್ರ ಬಂದ್‌ಗೆ ಕರೆ ನೀಡಿದೆ. ವಿಧಾನಸಭೆ ಚುನಾವಣೆ ಸೀಟು ಹಂಚಿಕೆ ವಿಚಾರವಾಗಿ ಸಭೆ ನಡೆಸಿದ್ದ ಮಹಾ ವಿಕಾಸ್ ಅಘಾಡಿ ಬದ್ಲಾಪುರದ ಲೈಂಗಿಕ ಕಿರುಕುಳ ವಿಚಾರವಾಗಿ ಗಂಭೀರ ಚರ್ಚೆ ನಡೆಸಿ ಹೋರಾಟಕ್ಕೆ ಕರೆ ನೀಡಿದೆ. ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಪೂರ್ಣ ಹದಗೆಟ್ಟಿದೆ. ಮಹಿಳೆಯರು, ಪುಟ್ಟ ಹೆಣ್ಣು ಮಕ್ಕಳಿಗೂ ರಕ್ಷಣೆ ಇಲ್ಲದಂತಾಗಿದೆ ಎಂದು ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದೆ. ಈ ನಿಟ್ಟಿನಲ್ಲಿ ರಾಜ್ಯ ಬಂದ್‌ಗೆ ಕರೆ ನೀಡಿದೆ. ಕಾಂಗ್ರೆಸ್, ಶಿವಸೇನೆ(ಉದ್ದವ್ ಬಣ) ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್‌ ಪಕ್ಷ(ಶರದ್ ಬಣ) ಒಕ್ಕೂಟದ ಮಹಾ ವಿಕಾಸ್ ಅಘಾಡಿ ಪುಟ್ಟ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಖಂಡಿಸಿ ಆ.24 ರಂದು ಮಹಾರಾಷ್ಟ್ರ ಬಂದ್‌ಗೆ ಕರೆ ನೀಡಿದೆ. ಮಹಾರಾಷ್ಟದ ದಾದರ್‌ ಸೇರಿ ಹಲವೆಡೆ ಮೂರೂ ಪಕಗಳ ನಾಯಕರು ಎನ್‌ಡಿಎ ಸರಕಾರದ ವಿರುದ್ಧ ಪ್ರತಿಭಟನೆಗಿಳಿದಿದ್ದಾರೆ. ಮುಗ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಸುದ್ದಿ ತಿಳಿದು ರಾಜ್ಯ ಕ್ರುದ್ಧವಾಗಿದ್ದು, ಜನತೆ ಗಲ್ಲು ಶಿಕ್ಷೆಗೆ ಆಗ್ರಹಿಸಿದ್ದಾರೆ. ರಾಜ್ಯದೆಲ್ಲೆಡೆ ಮೂರು ದಿನಗಳಿಂದ ಭಾರಿ ಪ್ರತಿಭಟನೆ ನಡೆಯುತ್ತಿದೆ. ಬುಧವಾರವೂ ಅನೇಕ ಸಂಘಟನೆಗಳು, ರಾಜಕೀಯ ನಾಯಕರು ಪ್ರತಿಭಟನೆಗೆ ಕೈಜೋಡಿಸಿದ್ದಾರೆ.

ಬದ್ಲಾಪುರ ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ರೈಲು ನಡೆದು 10 ಗಂಟೆಗಳ ಕಾಲ ಪ್ರತಿಭಟನೆ ನಡೆಸಲಾಗಿದೆ. 2 ಸಾವಿರಕ್ಕೂ ಅಧಿಕ ಪ್ರತಿಭನಟಾಕಾರರು ಪೊಲೀಸ್ ಲಾಠಿ ಚಾರ್ಜ್ ನಡುವೆಯೂ ಪ್ರತಿಭಟನೆ ನಡೆಸಿದ್ದಾರೆ. ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಗೆ ಕಠಿಣಾತಿಕಠಿಣ ಶಿಕ್ಷೆ ವಿಧಿಸಲು ಕ್ರಮ ಜರುಗಿಸಲು ಆಗ್ರಹಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ