Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿಶ್ವಕಪ್ ನಲ್ಲಿ ಭಾರತದ ವಿರುದ್ಧ ಆಡದೆ ಇರಲು ಅಚ್ಚರಿ ನಿರ್ಧಾರ ತೆಗೆದುಕೊಂಡ ಪಾಕಿಸ್ತಾನ

ಲಾಹೋ‌ರ್: ವಿಶ್ವ ಕಪ್ ಕ್ರಿಕೆಟ್ ನಲ್ಲಿ ಭಾರತದ ವಿರುದ್ಧ ಆಡದೆ ಇರಲು ಪಾಕಿಸ್ತಾನ ಮುಂದಾಗಿರುವ ಸಂಗತಿ ಬೆಳಕಿಗೆ ಬಂದಿದೆ.

ಐಸಿಸಿ ಟಿ20 ವಿಶ್ವಕಪ್‌ಗೆ ದಿನಗಣನೆ ಆರಂಭವಾಗಿದೆ. ಈ ನಡುವೆ ಪಾಕಿಸ್ತಾನ ಕ್ರಿಕೆಟ್ ತಂಡ ಫೆಬ್ರುವರಿ 15ರಂದು ಭಾರತದ ವಿರುದ್ಧ ನಡೆಯಲಿರುವ ಲೀಗ್‌ ಪಂದ್ಯವನ್ನು ಬಹಿಷ್ಕರಿಸಿರುವುದಾಗಿ ಮಾಹಿತಿ ಹಂಚಿಕೊಂಡಿದೆ.

ಭದ್ರತಾ ಕಾರಣಗಳಿಂದ ಬಾಂಗ್ಲಾದೇಶ ತಂಡ ಭಾರತದಲ್ಲಿ ಆಯೋಜನೆಗೊಂಡಿದ್ದ ತನ್ನ ಪಂದ್ಯಾವಳಿಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸುವಂತೆ ಮನವಿ ಸಲ್ಲಿಸಿತ್ತು. ಆದರೆ, ಬಾಂಗ್ಲಾ ತಂಡದ ಮನವಿಯನ್ನು ತಿರಸ್ಕರಿಸಿದ ಐಸಿಸಿ, ಬಾಂಗ್ಲಾ ಕ್ರಿಕೆಟ್ ತಂಡದ ಬದಲು ಸ್ಕಾಟ್ಲಂಡ್ ತಂಡಕ್ಕೆ ಟೂರ್ನಿಯಲ್ಲಿ ಆಡುವ ಅವಕಾಶ ನೀಡಿದೆ. ಈ ಹಿನ್ನೆಲೆಯಲ್ಲಿ ಐಸಿಸಿ ವಿರುದ್ಧದ ಪ್ರತಿಭಟನೆಯ ಸಂಕೇತವಾಗಿ ಪಾಕಿಸ್ತಾನ ಈ ನಿರ್ಧಾರ ತೆಗೆದುಕೊಂಡಿದೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿರುವ ಪಾಕಿಸ್ತಾನ ಸರ್ಕಾರ, 'ಪಾಕಿಸ್ತಾನ ಕ್ರಿಕೆಟ್ ತಂಡವು ಐಸಿಸಿ ವಿಶ್ವಕಪ್ ಟಿ20 2026 ರಲ್ಲಿ ಭಾಗವಹಿಸಲು ಅನುಮೋದನೆ ನೀಡಲಾಗಿದೆ. ಆದರೆ ಫೆಬ್ರವರಿ 15ರಂದು ಭಾರತದ ವಿರುದ್ಧ ನಿಗದಿಯಾಗಿರುವ ಪಂದ್ಯದಲ್ಲಿ ಪಾಕಿಸ್ತಾನ ತಂಡ ಮೈದಾನಕ್ಕೆ ಇಳಿಯುವುದಿಲ್ಲ' ಎಂದು ತಿಳಿಸಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆಕಾನೂನು ವಿದ್ಯಾರ್ಥಿಗಳು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು: ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆಖ್ಯಾತ ನಟ ದರ್ಶನ್ ಗೆ ಇನ್ನೊಂದು ವರ್ಷ ಜಾಮೀನು ಇಲ್ಲ : ಸುಪ್ರೀಂ ಕೋರ್ಟ್ಸಿದ್ದಾಪುರ : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ ; ಜನಗಣತಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಶಿಕ್ಷಕಿ ಸಾವುಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ದಾರುಣ ಸಾವುಒಂದೇ ಸಲ 224 ವಿಧಾನ ಸಭೆ ಸ್ಥಾನ ಗೆದ್ದು ಸಿಎಂ ಆಗುತ್ತೇನೆ ಎಂದಿದ್ದ ನೀಲಣ್ಣನವರಿಗೆ ಅಧಿಕಾರಿಗಳಿಂದ ಶಾಕ್ ..!ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆಗೆ 100ಕ್ಕೂ ಹೆಚ್ಚು ಮಂದಿ ಸಾವುಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ