Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶಶಿಕಲಾ ಜೊಲ್ಲೆ ಪ್ರಶ್ನೆಗೆ ಪರಂ ಉತ್ತರ : ಗೃಹ ರಕ್ಷಕರ ಕರ್ತವ್ಯ ಭತ್ಯೆ ಪರಿಷ್ಕರಣೆ

 

ಸುವರ್ಣಸೌಧ ಬೆಳಗಾವಿ :
ಗೃಹ ರಕ್ಷಕರಿಗೆ ಬೇರೆ ರಾಜ್ಯಗಳಲ್ಲಿ ನೀಡುತ್ತಿರುವ ಭತ್ಯೆಯನ್ನು ಅವಲೋಕಿಸಿ ಶೀಘ್ರವೇ ಕರ್ತವ್ಯ ಭತ್ಯೆಯನ್ನು ಪರಿಷ್ಕರಣೆ ಮಾಡುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
ಮಂಗಳವಾರ ವಿಧಾನ ಸಭೆ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕಿ ಜೊಲ್ಲೆ ಶಶಿಕಲಾ ಅಣ್ಣಾಸಾಹೇಬ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು.
21,327 ಪುರುಷ ಹಾಗೂ 4555 ಮಹಿಳೆ ಸೇರಿ ಒಟ್ಟು 25,882 ಗೃಹರಕ್ಷರು ರಾಜ್ಯದಲ್ಲಿ ಕಾರ್ಯ ನಿರ್ವಿಹಿಸುತ್ತಿದ್ದಾರೆ. ಸರ್ಕಾರ ಆದೇಶದಂತೆ ಪೊಲೀಸ್ ಇಲಾಖೆಯ ಬಂದೋಬಸ್ತ್, ಕಾನೂನು ಸುವ್ಯವಸ್ಥೆ, ಸಂಚಾರ ನಿಯಂತ್ರಣ ಹಾಗೂ ಠಾಣೆ ಕಾರ್ಯಗಳಲ್ಲಿ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರಿಗೆ ರೂ.750, ಬೇರೆ ಇಲಾಖೆಗಳಲ್ಲಿ ರೂ.600 ಹಾಗೂ ಪಹರೆ ಕೆಲಸಕ್ಕೆ ಬೆಂಗಳೂರು ನಗರದಲ್ಲಿ ರೂ.455 ಹಾಗೂ ಇತರೆ ಸ್ಥಳದಲ್ಲಿ ರೂ.380 ಭತ್ಯೆ ನೀಡಲಾಗುತ್ತಿದೆ. ಈ ವ್ಯತ್ಯಾಸವನ್ನು ಸರಿ ಪಡಿಸಿ ರೂ.750 ದಿನಭತ್ಯೆ ನೀಡಲು ಸರ್ಕಾರ ಮಟ್ಟದಲ್ಲಿ ಚಿಂತಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
ಗೃಹರಕ್ಷಕರಲ್ಲಿ ಯಾವುದೇ ತಾರತಮ್ಯ ಇಲ್ಲದೆ ಕರ್ತವ್ಯಕ್ಕೆ ನಿಯೋಜಿಸಬೇಕು. ಗೃಹರಕ್ಷಕರಿಗೆ ಆರೋಗ್ಯ ಭದ್ರತೆ, ಪ್ರಯಾಣ ಭತ್ಯೆಗಳನ್ನು ನೀಡಬೇಕು ಎಂದು ಶಾಸಕಿ ಜೊಲ್ಲೆ ಶಶಿಕಲಾ ಅಣ್ಣಾಸಾಹೇಬ ಒತ್ತಾಯಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ