Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಯಡಿಯೂರಪ್ಪ ವಿರುದ್ಧ ಆರೋಪಗೈದ ಮಹಿಳೆ ಮಾನಸಿಕ ಅಸ್ವಸ್ಥೆ : ಪರಮೇಶ್ವರ ಪ್ರತಿಕ್ರಿಯೆ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಮಹಿಳೆ ಮಾನಸಿಕ ಅಸ್ವಸ್ಥೆ ಎಂಬ ಮಾಹಿತಿ ನಮಗೆ ಸಿಕ್ಕಿದ್ದು, ತನಿಖೆಯ ನಂತರವಷ್ಟೇ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

ನಗರದಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವ‌ರ್, ಬುಧವಾರ ರಾತ್ರಿ ಮಹಿಳೆ ಕೈಬರಹದ ಬದಲಾಗಿ ಟೈಪ್ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಇಂದಿನಿಂದ ತನಿಖೆ ನಡೆಸುತ್ತಾರೆ. ಮಾಜಿ ಸಿಎಂ ಯಡಿಯೂರಪ್ಪನವರ ವಿರುದ್ಧ ಬುಧವಾರ ರಾತ್ರಿ ಮಹಿಳೆ ಕೈಬರಹದ ಬದಲಾಗಿ ಟೈಪ್ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಇಂದಿನಿಂದ ತನಿಖೆ ನಡೆಸುತ್ತಾರೆ. ಇದೊಂದು ಸೂಕ್ಷ್ಮ ವಿಚಾರವಾಗಿರುವುದರಿಂದ ಗೃಹ ಇಲಾಖೆ ಸಂಪೂರ್ಣ ಮಾಹಿತಿ ತೆಗೆದುಕೊಂಡು ತನಿಖೆ ಮಾಡುತ್ತೇವೆ. ತನಿಖೆ ಆಗುವವರೆಗೆ ಯಾವುದೇ ವಿಷಯ ಮಾತನಾಡುವುದಿಲ್ಲ ಎಂದಿದ್ದಾರೆ.

ದೂರು ನೀಡಿರುವ ಮಹಿಳೆ ಮಾನಸಿಕ ಅಸ್ವಸ್ಥೆ ಎಂಬ ಮಾಹಿತಿ ನಮಗೆ ಸಿಕ್ಕಿದ್ದು, ತನಿಖೆಯ ನಂತರವಷ್ಟೇ ಸ್ಪಷ್ಟ ಚಿತ್ರಣ ಸಿಗಲಿದೆ. ಇದೊಂದು ಸೂಕ್ಷ್ಮ ವಿಚಾರ. ಇದು ಹಿರಿಯ ರಾಜಕಾರಣಿಯಾಗಿರುವ ಮಾಜಿ ಸಿಎಂಗೆ ಸಂಬಂಧಿಸಿದ್ದು. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ, ತನಿಖೆ ಪೂರ್ಣಗೊಳ್ಳುವವರೆಗೆ, ಎಚ್ಚರಿಕೆಯಿಂದ ಮಾತನಾಡಬೇಕಾಗುತ್ತದೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿಯವರಿಗಾಗಲಿ, ಉಪ ಮುಖ್ಯಮಂತ್ರಿಯವರಿಗಾಗಲಿ, ನನಗಾಗಲೀ ಯಾವುದೇ ರಾಜಕೀಯ ಉದ್ದೇಶಗಳಿಲ್ಲ. ಪೊಲೀಸರು ಕಾನೂನಿನ ಪ್ರಕಾರ ತನಿಖೆ ನಡೆಸಿ, ಕ್ರಮ ಜರುಗಿಸುತ್ತಾರೆ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಅಪ್ರಾಪ್ತ ಬಾಲಕಿ ಮೇಲೆ ಈ ಹಿಂದೆ ಆಗಿದ್ದ ಅತ್ಯಾಚಾರದ ಬಗ್ಗೆ ಸಹಾಯ ಯಾಚಿಸಲು ತೆರಳಿದ್ದಾಗ ಘಟನೆ ನಡೆದಿದೆ. 9 ನಿಮಿಷಗಳ ಕಾಲ ಮೊದಲು ಮಾತನಾಡಿದ್ದ ಮಾಜಿ ಸಿಎಂ ಯಡಿಯೂರಪ್ಪ, ಅನಂತರ ಅಪ್ರಾಪ್ತೆಯನ್ನು ರೂಂ ಒಳಗೆ ಕರೆದು ಹೋಗಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಅಪ್ರಾಪ್ತೆಯ ಖಾಸಗಿ ಭಾಗ ಮುಟ್ಟಿರುವ ಬಗ್ಗೆ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ರೂಂನಿಂದ ಹೊರ ಬಂದು ಯಡಿಯೂರಪ್ಪ ಅವರು ಕ್ಷಮೆಯಾಚಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಈ ವಿಚಾರವನ್ನು ಯಾರಿಗೂ ಹೇಳಬಾರದೆಂದು ಹೆದರಿಸಿ ನಮ್ಮನ್ನು ತಡೆದಿದ್ದಾರೆಂದು ದೂರಿನಲ್ಲಿ ಆರೋಪಿಸಲಾಗಿದೆ.

ದೂರುದಾರ ಮಹಿಳೆ ಕಳೆದ 2015 ರಿಂದಲೂ ಈವರೆಗೂ 53 ಕೇಸ್ ದಾಖಲಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ದವು ದೂರು ನೀಡಿದ್ದ
ನೀಡಿದ್ದಾರೆ ಎಂದು ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆಇನ್ಫೋಸಿಸ್‌ಗೆ ನೂತನ ಸಾರಥಿ: ಸಲೀಲ್ ಪಾರೇಖ್ ಸ್ಥಾನಕ್ಕೆ ಆಶಿಶ್ ಕುಮಾರ ದಾಸ್ ಸಿಇಒ ಆಗಿ ನೇಮಕಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರ